ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಗುಡುಗು ಸಹಿತ ಮಳೆ- ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆ
ಬೆಂಗಳೂರು, ಸೆಪ್ಟೆಂಬರ್ 14: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಕೂಡಿದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಕೊಡಗು ಜಿಲ್ಲೆಯ ಹಲವೆಡೆ ಪ್ರತ್ಯೇಕವಾಗಿ ಸಾಧಾರಣ ಮಳೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣದಿಂದ ಕೂಡಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ.
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕ, ಮಲೆನಾಡು, ಕಾವೇರಿ ಜಲಾನಯನ ಪ್ರದೇಶಗಳು, ಉತ್ತರ ಮತ್ತು ದಕ್ಷಿಣ ಒಳಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂದಿನ ವಾರಗಳಲ್ಲಿ ಇಡೀ ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬುಧವಾರ ಸುರಿದ ಮಳೆ ಪ್ರಮಾಣದ ಅಂಕಿಅಂಶ (ಜಿಲ್ಲಾವಾರು)
ಉಡುಪಿ: 80.5 ಮಿ.ಮೀ
ದಕ್ಷಿಣ ಕನ್ನಡ: 52 ಮಿ.ಮೀ
ರಾಮನಗರ: 45 ಮಿ.ಮೀ
ಬೆಂಗಳೂರು ನಗರ: 38.5 ಮಿ.ಮೀ
ವಿಜಯಪುರ: 31.5 ಮಿ.ಮೀ
ತುಮಕೂರು: 30 ಮಿ.ಮೀ
ಮೈಸೂರು: 28.5 ಮಿ.ಮೀ
ಕೊಡಗು: 28.5 ಮಿ.ಮೀ
ಬೆಂಗಳೂರು ಗ್ರಾಮಾಂತರ: 28.5 ಮಿ.ಮೀ
ಹಾಸನ: 27.5 ಮಿ.ಮೀ
ಶಿವಮೊಗ್ಗ: 26 ಮಿ.ಮೀ
ಬೆಳಗಾವಿ: 24.5 ಮಿ.ಮೀ
ಉತ್ತರ ಕನ್ನಡ: 24.5 ಮಿ.ಮೀ
ಚಿಕ್ಕಮಗಳೂರು: 21 ಮಿ.ಮೀ
ಹೆಚ್ಚು ಮಳೆ ಸುರಿದ ಪ್ರದೇಶಗಳು
ಕರ್ಜೆ, ಉಡುಪಿ: 80.5 ಮಿ.ಮೀ
ಕಳತ್ತೂರು, ಉಡುಪಿ: 52.5 ಮಿ.ಮೀ
ಬೆಳಂದೂರು, ದಕ್ಷಿಣ ಕನ್ನಡ: 52 ಮಿ.ಮೀ
ಮುದ್ರಾಡಿ, ಉಡುಪಿ: 51 ಮಿ.ಮೀ

ದೇಶದ ವಿವಿಧ ಭಾಗಗಳಲ್ಲಿ ಮಳೆ ಮುನ್ಸೂಚನೆ
ಒಡಿಶಾ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಾಖಂಡ, ಪಶ್ಚಿಮ ಮಧ್ಯಪ್ರದೇಶ, ತೆಲಂಗಾಣ, ಕರಾವಳಿ ಕರ್ನಾಟಕ ಮತ್ತು ಕೇರಳ - ಮಾಹೆಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಅಂಡಮಾನ್- ನಿಕೋಬಾರ್ ದ್ವೀಪಗಳು, ಗಂಗಾನದಿ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಉತ್ತರಾಖಂಡ, ಪೂರ್ವ ಮಧ್ಯಪ್ರದೇಶ, ಕೊಂಕಣ-ಗೋವಾ, ವಿದರ್ಭ, ಛತ್ತೀಸ್‌ಗಢ ಮತ್ತು ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆ ಮತ್ತು ಪ್ರತ್ಯೇಕವಾದ ಗುಡುಗು ಸಹಿತ ಮಳೆಯಾಗಬಹುದು.

ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ಮಧ್ಯಪ್ರದೇಶ, ಮರಾಠವಾಡ, ತೆಲಂಗಾಣ, ಕೇರಳ- ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಪ್ರತ್ಯೇಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications