Karnataka Rains: ರಾಜ್ಯಾದ್ಯಂತ ಒಂದು ವಾರ ಭಾರೀ ಮಳೆ ಮುನ್ಸೂಚನೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ
Karnataka Rains: ರಾಜ್ಯದಲ್ಲಿ ಇದೀಗ ಮುಂಗಾರು ಮಳೆ ಚುರುಕು ಪಡೆದಿದೆ. ಹಾಗೆಯೇ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ಇನ್ನೂ ಹಲವೆಡೆ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ನಿನ್ನೆ ಅಂದರೆ ಜುಲೈ 19ರ ಶನಿವಾರ ನಗರದ ಹಲವೆಡೆ ರಣಭೀಕರ ಮಳೆ ಸುರಿದ ಕಾರಣ ರಸ್ತೆಗಳೆಲ್ಲ ಚರಂಡಿಗಳಂತೆ ಮಾರ್ಪಟ್ಟು ವಾಹನ ಸವಾರರು ಪರದಾಡಿದ ಘಟನೆಗಳು ನಡೆದಿವೆ. ಇನ್ನು ಮುಂದಿನ ಹಲವು ದಿನಗಳವರೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಅದರಲಗಲೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ಹವಾಮಾವ ಇಲಾಖೆ ಇಂದು (ಜುಲೈ 20) ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಒಂದು ವಾರ ರಾಜ್ಯದ್ಯ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಲ್ಲದದ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಸಹ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ.
ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಅಲ್ಲದೆ, ಈ ರಜೆಗಳನ್ನು ಸರಿದೂಗಿಸಲು ಶನಿವಾರ ಪೂರ್ತಿ ತರಹತಿ ನಡೆಸುವ ಕಾರ್ಯ ಕೂಡ ಮುಂದುವರೆದಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಿಂದುಳಿಯಂದಂತೆ ನೋಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ.
ಅದರಲ್ಲೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣಭೀಕರ ಮಳೆ ಮುಂದುವರೆದ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಈ ರಜೆಗಳನ್ನು ಸರಿದೂಗಿಸುವ ಕಾರ್ಯಗಳು ಕೂಡ ನಡೆಯುತ್ತಿವೆ. ಹಾಗೆಯೇ ಇದೀಗ ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮತ್ತೆ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ತಾಪಮಾನದ ವಿವರ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications