ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 14ರಂದು ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ: 1 ವಾರ ರಾಜ್ಯದಲ್ಲಿ ಮಳೆ

|
Google Oneindia Kannada News

ಬೆಂಗಳೂರು, ಮೇ 11: ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ.ಸಾಮಾನ್ಯವಾಗಿ ಬೆಳಗ್ಗೆ ಬಿಸಿಲು ಇರಲಿದ್ದು ಸಂಜೆಯ ಹೊತ್ತಿಗೆ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮೇ 14ರಂದು ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ.

ಹವಾಮಾನ ವರದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ ಹವಾಮಾನ ವರದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ

ವಿಜಯಪುರ, ಕಲಬುರಗಿ, ಪುತ್ತೂರು, ಇಂಡಿ, ಇಳಕಲ್, ಗೋಕಾಕ್, ಶೃಂಗೇರಿ, ಕೊಟ್ಟಿಗೆಹಾರ, ಜಾಲಹಳ್ಳಿಯಲ್ಲಿ ಹೆಚ್ಚು ಮಳೆಯಾಗಿದೆ.ರಾಯಚೂರಿನಲ್ಲಿ ಅತಿ ಹೆಚ್ಚು ಅಂದರೆ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ ಪ್ರದೇಶ ಹಾಗೂ ಕರ್ನಾಟಕ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ.

Heavy Rain Forecast For May 14 In Bengaluru

ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದೆಲ್ಲೆಡೆ ಭಾರಿ ಮಳೆ ಮುನ್ಸೂಚನೆಮುಂದಿನ 48 ಗಂಟೆಗಳಲ್ಲಿ ಕರ್ನಾಟಕದೆಲ್ಲೆಡೆ ಭಾರಿ ಮಳೆ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್, ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಉಳಿದಂತೆ ಮೇ 11ರಿಂದ 16ರವರೆಗೂ ಮೋಡಕವಿದ ವಾತಾವರಣೆ ಮುಂದುವರೆಯಲಿದೆ.

English summary
Rainfall Will Occur at few places over North Interior Karnataka and at isolated places over Coastal Karnataka & South Interior Karnataka From May 11 To 16.Heavy Rain Forecast For May 14 In Bengaluru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X