Karnataka Rains: ಭೀಕರ ಚಳಿ ನಡುವೆಯೂ ರಾಜ್ಯದ ಹಲವೆಡೆ ರಣಚಂಡಿ ಮಳೆ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ದಿತ್ವಾ ಚಂಡಮಾರುತ ಪರಿಣಾಮ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡ್ಮೂರು ದಿನ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರು ಹಾವಮಾನ ವಿವರ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 2) ಬೆಳಗ್ಗೆ ದಟ್ಟ ಮಂಜಿನ ನಡುವೆ ಚಳಿ ವಾತಾವರಣ ಮುಂದುವರೆದಿತ್ತು. ಇದೀಗ ನಗರದ ಹಲವೆಡೆ ಮೋಡ ಕವಿದಿದ್ದ, ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ.

ಎಲ್ಲೆಲ್ಲಿ ಮಳೆ?: ಇನ್ನೂ ಈಗಾಗಲೇ ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಶೀತಗಾಳಿ ನಡುವೆಯೂ ಮಳೆಯಾಗಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಹಾಗಾದ್ರೆ ಎಲ್ಲೆಲ್ಲಿ ವಾತಾವರಣ ಹೇಗಿರಲಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಚಂಡಮಾರುತ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ಬೆಳಗ್ಗೆ ವೇಳೆ ದಟ್ಟ ಮಂಜು ಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಹಲವು ದಿನಗಳವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಒಳಹವೆ ಇರಲಿದೆ ಎಂದು ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಭೀಕರ ಚಳಿ ಇರಲಿದ್ದು, ಒಣಹವೆ ಮುಂದುವರೆಯಲಿದೆ ಎಂದು ಹವಾಮಾಣ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆದಿದ್ದು, ಜನರು ಬೇಸತ್ತಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಳ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ. ಆದ್ದರಿಂದ ಜನರು ಇನ್ನೂ ಏನೆಲ್ಲಾ ಗತಿ ಕಾದಿದೆಯೋ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಮುಂಗಾರು ವೇಳೆ ರಾಜ್ಯದಲ್ಲಿನ ಜಲಮೂಲಗಳೆಲ್ಲ ಭರ್ತಿಯಾಗಿದ್ದು, ಇದೀಗ ಮಳೆ ಮಾಯವಾಗಿ ಚಳಿ ಎಂಟ್ರಿ ಕೊಟ್ಟಿದೆ.












Click it and Unblock the Notifications