Karnataka Weather: ವಾಯುಭಾರ ಕುಸಿತ: ಶೀತಗಾಳಿ ನಡುವೆಯೂ ಬೆಂಗಳೂರು ಸೇರಿ ರಾಜ್ಯದ ಹಲವೆಡೆ 2-3 ದಿನ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಆವರಿಸಿದೆ. ಈ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ ಎರಡ್ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 22) ಮೋಡ ಕವಿದ ವಾತಾವರಣ ಇದ್ದು, ಹಲವೆಡೆ ಮಳೆ ಮುಂದುವರೆದಿದೆ. ಇನ್ನು ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯಯಿದೆ ಅಂತಲೂ ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ನಿನ್ನೆ (ನವೆಂಬರ್ 21) ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಗೆಯೇ ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತ ಪರಿಣಾಮ ಬೆಂಗಳೂರು ಸೇರಿ ಹಲವೆಡೆ ಮುಂದಿನ ಹಲವು ದಿನಗಳವರೆಗೆ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಳಹವೆ ಮುಂದುವರೆಯಲಿದೆ. ಇನ್ನೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಮಾತ್ರ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯ ವಾತಾವರಣ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣಹವೆ ಕಂಡುಬರಲಿದೆ. ಅಲ್ಲದೆ, ಬಹುತೇಕ ಜಿಲ್ಲೆಗಳಲ್ಲಿ ಬೆಳಗ್ಗೆ ಸಂಜೆ ಹಾಗೂ ಮಂಜು ಕವಿದ ವಾತಾವಣ ಇರಲಿದ್ದು, ಶೀತಗಾಳಿಯೂ ಇರಲಿದೆ ಎಂದು ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಣಹವೆ ಇರಲಿದೆ. ಜೊತೆಗೆ ಶೀತಗಾಳಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಆವರಿಸಿದೆ. ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ಜನರು ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಒಳಿತು. ಶೀತದಿಂದ ರಕ್ಷಣೆ ಮಾಡಿಕೊಳ್ಳಲು ಹತ್ತಿಯಿಂದ ತಯಾರಿಸಲಾದ ಉಡುಪುಗಳನ್ನು ಧರಿಸುವುದು ಒಳಿತು. ಯಾಕಂದ್ರೆ ಅವುಗಳು ದೇಹವನ್ನು ಬೆಚ್ಚಗೆ ಇಟ್ಟು, ಚಳಿಯಿಂದ ರಕ್ಷಣೆ ಮಾಡುತ್ತವೆ.












Click it and Unblock the Notifications