Karnataka Weather: ಚಂಡಮಾರುತ ಹಿನ್ನೆಲೆ ಶೀತಗಾಳಿ ನಡುವೆಯೂ ಬೆಂಗಳೂರು ಸೇರಿ ರಾಜ್ಯದ ಹಲವೆಡೆ 2 ದಿನ ಭಾರೀ ಮಳೆ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಚಳಿ ಮುಂದುವರೆದಿದೆ. ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ ಸೆನ್ಯಾರ್ ಚಂಡಮಾರುತ ಹಿನ್ನೆಲೆ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ರಾಜಧಾನಿ ಬೆಂಗಲೂರು ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 27) ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದು, ಜೊತೆಗೆ ಮಂಜು ಮುಚ್ಚಿಕೊಂಡಿದೆ. ನಗರದಲ್ಲಿಂದು ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಇಲ್ಲಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಹಾಗೆಯೇ ಚಂಡಮಾರುತ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಹಲವು ದಿನಗಳವರೆಗೆ ಚಳಿ ನಡುವೆಯೇ ರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ರಾಜ್ಯದಲ್ಲಿ ಮಳೆ ಅಬ್ಬರ ತಗ್ಗಿದೆ. ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ಕೆಲವು ಜಿಲ್ಲೆಗಳಲ್ಲಿ ಮಳೆಯಾದ್ರೆ, ಉಳಿದ ಭಾಗಗಳಲ್ಲಿ ಒಳಹವೆ ಮುಂದುವರೆದಿದೆ. ಇಂದು (ನವೆಂಬರ್ 27) ಸಹ ರಾಜ್ಯದ ಬಹುತೇಕ ಭಾಗಗಳಲ್ಲಿ ಕಡೆ ಒಣ ಹವೆ ಇರಲಿದ್ದು, ಚಳಿ ಪ್ರಮಾಣ ತುಸು ಹೆಚ್ಚಿರಲಿದೆ. ಅದರಲ್ಲೂ ಬೆಳಗ್ಗೆ ಹಾಗೂ ಸಂಜೆ ವೇಳೆ ಮಂಜು ಮುಸುಕಿದ ವಾತಾವರಣ ಇದ್ದು, ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಭೀಕರ ಚಳಿ ನಡುವೆಯೂ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನಗಳ ಕಾಲ ರಾವಳಿ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಇನ್ನೂ ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಪ್ರಮಾಣ ಕಡಿಮೆಯಾಗುತ್ತಲಿದ್ದು, ಚಳಿ ಹೆಚ್ಚಾಗುತ್ತಲಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಳ ಆಗುವ ಸಾಧ್ಯತೆಯಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ಮಂಜು ಕವಿದ ವಾತಾವರಣ ಇರಲಿದ್ದು, ಜೊತೆಗೆ ಭೀಕರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ರಾಜ್ಯದ ಹಲವು ಭಾಗಗಳಲ್ಲಿ ಭೀಕರ ಚಳಿ ನಡುವೆಯೂ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications