Karnataka Rains: ಶೀತಗಾಳಿ ನಡುವೆಯೂ ರಾಜ್ಯದ ಹಲವೆಡೆ ಮುಂದಿನ 3-4 ದಿನ ಭಾರೀ ಮಳೆ ಮುನ್ಸೂಚ

Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯೂ ಆಗುತ್ತಿದೆ. ಹಾಗೆಯೇ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ರಣಮಳೆ ಸುರಿಯುವ ಸಾಧ್ಯತೆ ಇದೆ ಎನ್ನುವ ಮುನ್ಸೂಚನೆ ಇದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 6) ಬೆಳಗ್ಗೆ ದಟ್ಟ ಮಂಜಿನ ಜೊತೆ ಚಳಿ ಮುಂದುವರೆದಿದೆ. ಈ ನಡುವೆಯೇ ನಗರದ ಹಲವೆಡೆ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ನಿನ್ನೆ ಶುಕ್ರವಾರ ನಗರದ ಹಲವು ಭಾಗಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿ ಆಗಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Heavy rain forecast for next 3-4 days from December 6 in karnataka s several parts amid Cold wave

ಇಂದು (ಡಿಸೆಂಬರ್ 6) ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ, ಚಳಿ ನಡುವೆಯೂ ನಗರದ ಹಲವೆಡೆ ಮಳೆಯೂ ಆಗಲಿದೆ ಅಂತಾ ಮುನ್ಸೂಚನೆಯನ್ನು ನೀಡಿದೆ. ಈಗಾಗಲೇ ದಿತ್ವಾ ಚಂಡಮಾರುತ ಪರಿಣಾಮ ಕೆಲವೆಡೆ ಭಾರೀ ಮಳೆ ಸುರಿದಿದೆ.

ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಬದಲಾಗಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ. ಇನ್ನೂ ತಾಪಮಾನದಲ್ಲಿ ಇಳಿಕೆಯಾಗಲಿದ್ದು, ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ವಾರಾಂತ್ಯದಲ್ಲಿ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಹಾಸನ, ಚಿಕ್ಕಮಗಳೂರು, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣಹವೆ ಇರಲಿದ ಎಂದು ಮುನ್ಸೂಚನೆ ನೀಡಿದೆ.

ಬಹುತೇಕ ಜಿಲ್ಲೆಗಳಲ್ಲಿ ಬೆಳಗ್ಗೆ ಮತ್ತು ಸಂಜೆ ವೇಳೆ ಮಂಜಿನ ಜೊತೆಗೆ ಭೀಕರ ಚಳಿ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಈ ಭಾಗಗಳಿಗೆ ಸದ್ಯ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಮುಂಗಾರು ವೇಳೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ತುಂಬಿ ಹರಿದಿವೆ. ಇನ್ನೂ ಕೆಲವೆಡೆ ಅತೀವೃಷ್ಟಿಯಾಗಿ ರೈತರು ಬೆಳೆಗಳನ್ನು ಕಳೆದುಕೊಂಡ ಘಟನೆಗಳು ಕೂಡ ನಡೆದಿವೆ. ಸದ್ಯ ಇದೀಗ ಚಳಿ ಎಂಟ್ರಿ ಕೊಟ್ಟಿದ್ದು, ಬಹುತೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+