Karnataka Weather: ಶೀತಗಾಳಿ ನಡುವೆಯೂ ಬೆಂಗಳೂರು ಸೇರಿ ರಾಜ್ಯದ ಹಲವೆಡೆ 3-4 ದಿನ ಭಾರೀ ಮಳೆ ಮುನ್ಸೂಚನೆ

Karnataka Weather Forecast: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಆವರಿಸಿದೆ. ಈ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 23) ಬೆಳಗ್ಗೆ ಚಳಿಯ ಜೊತೆ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಗರಿಷ್ಠ ತಾಪಮಾನವು 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನವು 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Heavy rain forecast for next 3-4 days from november 23 in karnataka s several parts amid Cold wave

ಇನ್ನು ಬೆಂಗಳೂರಿನ ಹಲವೆಡೆ ಈಗಾಗಲೇ ಕಳೆದ ಮೂರ್ನಾಲ್ಕು ದಿನ ಕೆಲವೆಡೆ ಭಾರೀ ಮಳೆ ಸುರಿದಿರುವ ಬಗ್ಗೆ ವರದಿಯಾಗಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಇನ್ನು ಮುಂದಿನ ದಿನಗಳಲ್ಲಿ ಭಾರೀ ಮಳೆಯಿಂದಾಗಿ ಈ ಭಾಗಗಳಲ್ಲಿ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ ಕಡಿಮೆ ಆಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.

ಇದೀಗ ಸದ್ಯ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಈ ನಡುವೆಯೂ ಮುಂದಿನ ಹಲವು ದಿನಗಳವರೆಗೆ ಕರವಾಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಳಾದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಭಾಗಗಳ ಹಲವೆಡೆ ರಣಮಳೆ ಸುರಿಯುವ ಸಾಧ್ಯತೆಯಿದೆ ಮುನ್ಸೂಚನೆ ನೀಡಿದೆ.

ಮತ್ತೊಂದೆಡೆ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಉಳಿದಂತೆ ಬಹುತೇಕ ಭಾಗಗಳಲ್ಲಿ ಭೀಕರ ಚಳಿ ಜೊತೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ಬೀದರ್ ಸೇರಿದಂತೆ ಹಲವು ಭಾಗಗಳಲ್ಲಿಯೂ ಇದೇ ವಾತಾವರಣ ಇರಲಿದೆ. ಆದರೆ, ಈ ಭಾಗಗಳ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ತಿಸು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಇದೀಗ ರಾಜ್ಯದ ಬಹುತೇಕ ಭಾಗಗಳಲ್ಲಿ ತಪಾಮಾನದಲ್ಲಿ ಕುಸಿತ ಆಗುತ್ತಲಿದ್ದು, ದಿನದಿಂದ ದಿನಕ್ಕೆ ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಈಗಿನಿಂದಲೇ ಜನರು ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅಗತ್ಯ ಎಂದು ಸಲಹೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+