Karnataka Weather: ಚಂಡಮಾರುತ ಪರಿಣಾಮ ಶೀತಗಾಳಿ ನಡುವೆಯೂ ಬೆಂಗಳೂರು ಸೇರಿ ರಾಜ್ಯದ ಹಲವೆಡೆ 3 ದಿನ ಭಾರೀ ಮಳೆ ಮುನ್ಸೂಚನೆ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಂಜಿನ ಜೊತೆ ಭಾರೀ ಚಳಿ ಮುಂದುವರೆದಿದೆ. ಈ ನಡುವೆಯೇ ದಿತ್ವಾ ಚಂಡಮಾರುತ ಪರಿಣಾಮ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳವರೆಗೂ ಬೆಂಗಳೂರು ಸೇರಿದಂತೆ ಹಲವೆಡೆ ಶೀತಗಾಳಿ ನಡುವೆಯೂ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 1) ಮಂಜು ಮುಸುಕಿದ ವಾತಾವರಣದ ನಡುವೆಯೂ ಮೋಡ ಕವಿದಿದ್ದು, ನಗರದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗುವ ಸಾಧ್ಯತೆಯಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯಲ್ಲಿ ದಿತ್ವಾ ಚಂಡಮಾರುತ ಪರಿಣಾಮ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮುಂದಿನ ಮೂರು ದಿನಗಳ ಕಾಲ ಮಂಡ್ಯ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಸೇರಿ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ನಡುವೆಯೂ ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಭಾರೀ ಮಳೆಯಾಗುವಂತಹ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇನ್ನೂ ನಿರಂತರ ಮಳೆಯಿಂದ ಹಲವು ಭಾಗಗಳಲ್ಲಿ ತಾಪಮಾನದಲ್ಲಿ ಗಮನಾರ್ಹವಾಗಿ ಇಳಿಕೆಯಾಲಿದೆ. ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಿತ್ವಾ ಚಂಡಮಾರುತವು ತಮಿಳುನಾಡು ಕರಾವಳಿ ಭಾಗವನ್ನು ಆವರಿಸಿದೆ. ಇದು ಉತ್ತರದ ಕಡೆಗೆ ಚಲಿಸುವ ಸಾಧ್ಯತೆ ಇದ್ದು, ಇದರ ಪರಿಣಾಮ ಇಂದು ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳ ಅಲ್ಲಲ್ಲಿ ಚದುರಿದಂತೆ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ರಣಭೀಕರ ಚಳಿ ಮುಂದುವರೆದಿದೆ. ಮುಂಗಾರು ವೇಳೆ ಭಾರೀ ಮಳೆ ಸುರಿದ ಪರಿಣಾಮ ಬಹುತೇಕ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಪರಿಣಾಮ ಇದೀಗ ಚಳಿಗಾಲಕ್ಕೂ ಮುನ್ನ ರಾಜ್ಯದಲ್ಲಿ ದಟ್ಟ ಮಂಜಿನ ಜೊತೆ ಭೀಕರ ಚಳಿ ವಾತಾವರಣ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಇದೀಗ ಸದ್ಯ ಚಳಿ ನಡುವೆಯೂ ಮುಂದಿನ ಹಲವು ದಿನಗಳವರೆಗೆ ಚಂಡಮಾರುತ ಹಿನ್ನೆಲೆ ಕೆಲವೆಡೆ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.












Click it and Unblock the Notifications