Get Updates
Get notified of breaking news, exclusive insights, and must-see stories!

Karnataka Weather: ಶೀತಗಾಳಿ ನಡುವೆಯೂ ಬೆಂಗಳೂರು ಸೇರಿ ರಾಜ್ಯದ ಹಲವೆಡೆ 3 ದಿನ ಭಾರೀ ಮಳೆ ಮುನ್ಸೂಚನೆ

Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿ ಆವರಿಸಿದೆ. ಈ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ಈ ಭಾಗಗಳಲ್ಲಿ ಶಿತಗಾಳಿ ಮಧ್ಯೆಯೇ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 21) ಬೆಳಗ್ಗೆ ಮಂಜು ಕವಿದ ವಾತಾವರಣ ಇದ್ದು, ಚಳಿ ಮುಂದುವರೆದಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ನಗರದ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗೆಯೇ ಬೆಂಗಳೂರು ಸೇರಿದಂತೆ ಮುಂದಿನ ಹಲವು ದಿನಗಳವರೆಗೆ ಹಲವು ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ. ಈಗಾಗಲೇ ಮಳೆರಾಯನ ಆರ್ಭಟ ಬಹುತೇಕ ತಗ್ಗಿದ್ದು, ಹಲವು ಭಾಗಗಳಲ್ಲಿ ಮಾತ್ರ ಆಗಾಗ ಮಳೆಯಾಗುತ್ತಿದೆ. ಉಳಿದೆಡೆ ಚಳಿ ಮುಂದುವರೆದಿದೆ.

Heavy rain forecast for next 3 days from november 21 in karnataka s several parts amid Cold wave

ರಾಜ್ಯದ ಹಲವು ಭಾಗಗಳಲ್ಲಿ ಶೀತಗಾಳಿ ನಡುವೆಯೂ ಮುಂದಿನ ಕೆಲವು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಕಲವು ಬಹುತೇಜ ಜಿಲ್ಲೆಗಳಲ್ಲಿ ಚಳಿ ಇರಲಿದೆ. ಇದೀಗ ದಿನದಿಂದ ದಿನಕ್ಕೆ ತಾಪಮಾನ ಕುಸಿಯುತ್ತಿದ್ದು, ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಮಂಜು ಮುಸುಕಿದ ವಾತಾವರಣದ ಜೊತೆ ಶೀತಗಾಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಳ ಆದರೂ ಆಶ್ಚರ್ಯವಿಲ್ಲ ಎನ್ನುವ ಮುನ್ಸೂಚನೆಯೂ ಇದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಕೆಲವೆಡೆ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಹಲವೆಡೆ ಮುಂದಿನ ಹಲವು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ಇದೆ. ನಗರದಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಶೀತಗಾಳಿ ಇರಲಿದೆ. ಇನ್ನೂ ಇಂದು (ನವೆಂಬರ್ 21) ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ಸಾಧ್ಯತೆಯಿದ ಎಂದು ವರದಿ ಆಗಿದೆ.

ಅಲ್ಲದೆ, ಮುಂದಿನ ದಿನಗಳಲ್ಲಿ ಕಲಬುರಗಿ, ಬೀದರ್, ರಾಯಚೂರು ಹಾಗೂ ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು 4 ರಿಂದ 6ಡಿಗ್ರಿಗಳಷ್ಟು ಕುಸಿತ ಆಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಈಗಾಗಲೇ ಈ ಭಾಗಗಳಲ್ಲಿ ದಿನದಿಂದ ದಿನಕ್ಕೆ ತಾಪಮಾನದಲ್ಲಿ ಕುಸಿತ ಕಂಡುಬರುತ್ತಿದ್ದು, ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಕರಾವಳಿ ಭಾಗದ ಬಹುತೇಕ ಭಾಗಗಳಲ್ಲಿ ನಿಧಾನವಾಗಿ ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ.

ಇನ್ನು ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಪ್ರಯಾಣ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಜನರು ಆರೋಗ್ಯ ಸಂಬಂಧ ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆ ಕ್ರಮಗಳನ್ನು ಅನುಸರಿಸಿದರೆ ಉತ್ತಮ. ಈ ವೇಳೆಯೇ ಹೆಚ್ಚಾಗಿ ಶೀತ, ನೆಗಡಿ, ಕೆಮ್ಮು, ಜ್ವರದಂತಹ ಸಣ್ಣಪುಟ್ಟ ಕಾಯಿಲೆಗಳು ಬರುವುದು ಹೆಚ್ಚು. ಆದ್ದರಿಂದ ಚಿಕ್ಕ ಮಕ್ಕಳು ಸೇರಿದಂತೆ ಹಿರಿಯರವರೆಗೂ ಎಲ್ಲಾರೂ ಕಿವಿಗೆ ಟೋಪಿ ಹಾಗೂ ಶ್ವೆಟ್ಟರ್‌ಗಳನ್ನು ಧರಿಸುವುದು ಉತ್ತಮ ಎಂದು ಸಲಹೆ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+