Karnataka Weather: ಭೀಕರ ಚಳಿ ನಡುವೆಯೂ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮೂರು ದಿನ ಭಾರೀ ಮಳೆ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿ ಆವರಿಸಿಬಿಟ್ಟಿದೆ. ಈ ನಡುವೆಯೇ ರಾಜಧಾನಿ ಬೆಂಗಳೂರು ಸೇರಿದಂದತೆ ಹಲವೆಡೆ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 20) ಬೆಳಗ್ಗೆ ಮಂಜು ಮುಸುಕಿದ ವಾತಾವರಣ ಇದ್ದು, ಜೊತೆಗೆ ಚಳಿ ಮುಂದುವರೆದಿದೆ. ಈ ನಡುವೆಯೇ ನಗರದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಮುನ್ಸೂಚನೆ ನೀಡಿದೆ. ಹಾಗೆಯೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ ಸುಮಾರು 25 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ ಸುಮಾರು 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಈ ವಾರ ಪೂರ್ತಿ ನಗರದಲ್ಲಿ ಚಳಿಯ ನಡುವೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನು ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಚಳಿ ಇರಲಿದೆ ಎಂದು ಎಚ್ಚರಿಕೆ ನೀಡಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಇದ್ದು, ಒಣಹವೆ ಮುಂದುವರಿದಿದೆ. ಈ ನಡುವೆಯೇ ಬೆಂಗಳೂರು ಸೇರಿ ಕೆಲವೇ ಕೆಲವು ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಇರಲಿದ್ದು, ಈ ನಡುವೆಯೇ ಈ ಭಾಗದ ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ಕಲಬುರಗಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಉತ್ತರ ಒಳನಾಡಿದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೀದರ್ನಲ್ಲಿ ರಾಜ್ಯದಲ್ಲೇ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಮುಂದಿನ ದಿನಗಳಲ್ಲಿ ಈ ಭಾಗಳಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕಾರವಾರ ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಚಳಿ ವಾತಾವರ ಇರಲಿದ್ದು, ಕೆಲವೆಡ ಮಾತ್ರ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆಯಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಸಂಪೂರ್ಣವಾಗಿ ತಗ್ಗಿದೆ. ಸದ್ಯ ತಾಪಮಾನದಲ್ಲಿ ದಿನದಿಂದ ದಿನಕ್ಕೆ ಕುಸಿತ ಕಾಣುತ್ತಿದ್ದು, ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಹೆಚ್ಚಿದೆ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.












Click it and Unblock the Notifications