Monsoon Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಮುಂದಿನ 5 ದಿನಗಳ ಕಾಲ ವರುಣಾರ್ಭಟ, ಇಲ್ಲಿದೆ ವಿವರ
ಕರ್ನಾಟಕ, ಜೂನ್, 19: ಬಿಪರ್‌ಜಾಯ್ ಚಂಡಮಾರುತ ಪ್ರಭಾವ ಹಿನ್ನೆಲೆ ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದೆ. ಹಾಗೇಯೆ ಮುಂದಿನ 5 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಾತ್ರ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ ಕಡೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ ಅನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ (ಜೂನ್ 18) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಆದರೆ ನಗರದಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಮೋಡ ಕವಿದ ವಾತಾವರಣವೇ ಮುಂದುವರೆದಿತ್ತು. ಆದರೆ ಮಳೆ ಸದ್ದು ಮಾತ್ರ ಸುಳಿವಿಲ್ಲ. ಹಾಗೆಯೇ ಸೋಮವಾರವೂ (ಜುಲೈ 19) ಬೆಳಗ್ಗೆಯಿಂದಲೂ ಮೋಡ ಮುಚ್ಚಿದ ವಾತಾವರಣ ನಿರ್ಮಾಣವಾಗಿದ್ದು, ಇನ್ನೂ ಕೆಲವೇ ಗಂಟೆಗಳಲ್ಲಿ ಅಥವಾ ಸಂಜೆ ವೇಳೆಗೆ ಇಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಹಲವೆಡೆ ಮಾತ್ರ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 5 ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಹಾಗೆಯೇ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆ ಬೀಳುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ರವಾನಿಸಿದೆ.
ಸಿಲಿಕಾನ್ ಸಿಟಿ ಬೆಂಗಳೂರು, ರಾಮನಗರ, ತುಮಕೂರು, ಹಾಸನ, ಮಂಡ್ಯ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿ ಭಾಗದ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಾತ್ರ ಮಳೆರಾಯ ಆರ್ಭಟಿಸಲಿದ್ದಾನೆ. ಆದ ಕಾರಣ ಈ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಗಾಳಿವೆ ವೇಗವು ಗಂಟೆಗೆ 45-55 ಕಿ.ಮೀ. ವೇಗದಲ್ಲಿ ಇರಲಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ.
ಚಂಡಮಾರುತ ಹಿನ್ನೆಲೆ ಕರಾವಳಿ ಭಾಗದಲ್ಲಿ ಮಳೆರಾಯ ಬಿಡುವಿಲ್ಲದೆ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹೀಗೆ ಹಲವೆಡೆ ಮಾತ್ರ ಮಳೆರಾಯ ಆರ್ಭಟ ಶುರು ಮಾಡುವ ಮೂಲಕ ಬಿಸಿಲಿನಿಂದ ಕಾದಿದ್ದ ಭೂಮಿಯನ್ನು ತಂಪುಗೊಳಿಸಿದ್ದಾನೆ. ಮತ್ತೊಂದೆಡೆ ಮುಂಗಾರು ಆರಂಭವಾಗಿ 2 ವಾರಗಳು ಕಳೆದರೂ ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದಂತಾಗಿದ್ದು, ಇದರಿಂದ ಬಿತ್ತನೆ ಕಾರ್ಯಕ್ಕೆ ಸಜ್ಜು ಮಾಡಿಕೊಂಡಿದ್ದ ರೈತರು ಆತಂಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಬರೀ ಬಯಲು ಸೀಮೆಯಷ್ಟೇ ಅಲ್ಲದೆ ಮಲೆನಾಡಿದ ಕೆಲವು ಭಾಗಗಳಲ್ಲಿ ಮಳೆಯೇ ಇಲ್ಲದಂತಾಗಿದೆ.












Click it and Unblock the Notifications