ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ
ಬೆಂಗಳೂರು, ಸೆ.21: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಷ್ಟೇ ಅಲ್ಲದೆ ಉತ್ತರ ಕರ್ನಾಟಕ ಭಾಗಗಳಲ್ಲಿ ಸೆ.23ರವರೆಗೂ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಲಭ್ಯವಾಗಿದೆ.
ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಂಡಿದ್ದು ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದೆ. ಬೆಳಗಾವಿ, ಹಾವೇರಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗುರುವಾರ ಸಂಜೆಯಿಂದಲೇ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮಳೆ ಆರಂಭವಾಗಿದೆ, ವಿಜಯಪುರ, ಗದಗ, ವಿಜಯಪುರ, ಮುದ್ದೇಬಿಹಾಳ, ಸೇಡಂ, ಚಿತ್ತಾಪುರ, ಸಂಡೂರು ಭಾಗಗಳಲ್ಲಿ ಮಳೆಯಾಗಿದೆ.

ಶುಕ್ರವಾರದಿಂದ ಮಳೆ ಜೋರಾಗುವ ಸಾಧ್ಯತೆ ಇದೆ, ಮುಂಗಾರು ಆರಂಭದಿಂದಲೂ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಭಾರಿ ಮಳೆ ಬಂದಿದ್ದು, ಉತ್ತರ ಒಳನಾಡಿನ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ, ಮುಂಗಾರು ಅಂತ್ಯಗೊಳ್ಳುವ ಅವಧಿಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಆರಂಭವಾಗಿದೆ.ಅಕ್ಟೋಬರ್ ನಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.












Click it and Unblock the Notifications