ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ 19ರವರೆಗೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

By Lekhaka
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇನ್ನಷ್ಟು ದಿನ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಸೆಪ್ಟೆಂಬರ್ 16ರಿಂದ ಮುಂದಿನ ನಾಲ್ಕು ದಿನಗಳ ಕಾಲ, ಅಂದರೆ ಸೆಪ್ಟೆಂಬರ್ 19ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿರುವುದಾಗಿ ತಿಳಿದುಬಂದಿದೆ. ಮುಂಜಾಗ್ರತೆಯಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಯಾದಗಿರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲೂ ಮಳೆ ಮುಂದುವರೆಯುವುದಾಗಿ ತಿಳಿದುಬಂದಿದೆ.

 ಸೆಪ್ಟೆಂಬರ್ 19ರವರೆಗೂ ಮಳೆ

ಸೆಪ್ಟೆಂಬರ್ 19ರವರೆಗೂ ಮಳೆ

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 19ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.ಈ ನಡುವೆ ಚಿಕ್ಕಮಗಳೂರು, ಮಡಿಕೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದೆ.

ಕಲಬುರಗಿಯಲ್ಲಿ ಭಾರೀ ಮಳೆ; ಕಾಗಿಣಾ ಸೇತುವೆ ಸಂಪೂರ್ಣ ಮುಳುಗಡೆಕಲಬುರಗಿಯಲ್ಲಿ ಭಾರೀ ಮಳೆ; ಕಾಗಿಣಾ ಸೇತುವೆ ಸಂಪೂರ್ಣ ಮುಳುಗಡೆ

 ಉತ್ತರ ಕರ್ನಾಟಕದಲ್ಲೂ ಮಳೆ ಮುಂದುವರಿಕೆ

ಉತ್ತರ ಕರ್ನಾಟಕದಲ್ಲೂ ಮಳೆ ಮುಂದುವರಿಕೆ

ಉತ್ತರ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬೀದರ್ ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗಲಿದ್ದು, ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇದೆ.

 ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚಾದ ಮಳೆ

ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚಾದ ಮಳೆ

ಕಲಬುರಗಿ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಕಲಬುರಗಿಯ ಸೇಡಂ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಗಿಣಾ ನದಿ ಉಕ್ಕಿ ಹರಿದು, ಮಳಖೇಡ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಹೀಗಾಗಿ ಕಲಬುರಗಿಗೆ ಸಂಪರ್ಕ ಕಡಿತಗೊಂಡಿದೆ. ಕಲಬುರಗಿಯ ಕಮಲಾಪುರದಲ್ಲಿಯೂ ಅತಿಹೆಚ್ಚು ಮಳೆಯಾಗಿದೆ.

ರಾಜ್ಯದೆಲ್ಲೆಡೆ ಮಳೆ ಆರ್ಭಟ, ಜಲಾಶಯಗಳ ನೀರಿನ ಪ್ರಮಾಣ?ರಾಜ್ಯದೆಲ್ಲೆಡೆ ಮಳೆ ಆರ್ಭಟ, ಜಲಾಶಯಗಳ ನೀರಿನ ಪ್ರಮಾಣ?

 ಬಳ್ಳಾರಿ, ಬೀದರ್ ನಲ್ಲಿ ಮುಂದುವರೆದ ಮಳೆ

ಬಳ್ಳಾರಿ, ಬೀದರ್ ನಲ್ಲಿ ಮುಂದುವರೆದ ಮಳೆ

ಬಳ್ಳಾರಿ ಹಾಗೂ ಬೀದರ್ ಜಿಲ್ಲೆಗಳಲ್ಲೂ ಮಳೆಯ ಆರ್ಭಟ ನಿಲ್ಲುವಂತೆ ಕಾಣುತ್ತಿಲ್ಲ. ಬೀದರ್ ನಲ್ಲಿ ಮಳೆಯಿಂದಾಗಿ ಜಮೀನುಗಳು ಜಲಾವೃತವಾಗಿದ್ದು, ಬೆಳೆಹಾನಿ ಸಂಭವಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಸಂಡೂರು, ಹೊಸಪೇಟೆ ಹಾಗೂ ಕೂಡ್ಲಿಗಿ ತಾಲೂಕುಗಳಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಸಂಡೂರು ತಾಲೂಕಿನಲ್ಲಿ ಮಳೆಯಿಂದಾಗಿ ಅದಿರು ಸಾಗಣೆ‌ ಮಾಡುವ ಲಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

English summary
The meteorological department has issued a forecast for rainfall till september 19 in karavali and north Karnataka districts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X