ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ: ಮುಳುಗುವ ಸ್ಥಿತಿಯಲ್ಲಿ ಹೆಬ್ಬಾಳ ಸೇತುವೆ

Recommended Video

      ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಮುಳುಗುವ ಸ್ಥಿತಿಯಲ್ಲಿದೆ ಹೆಬ್ಬಾಳೆ ಸೇತುವೆ

      ಚಿಕ್ಕಮಗಳೂರು, ಜುಲೈ.11: ಚಿಕ್ಕಮಗಳೂರಲ್ಲಿ ಇಂದು ಬುಧವಾರ ಕೂಡ ಮಳೆಯ ಅಬ್ಬರ ಮುಂದುವರಿದಿದೆ. ಮಲೆನಾಡಲ್ಲಿ ರಾತ್ರಿಯಿಡಿ ಮಳೆ ಸುರಿದಿದ್ದು, ಕೆಲ ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಲೇ ಇದೆ.

      ಕಳಸ, ಶೃಂಗೇರಿ, ಕುದುರೆಮುಖದಲ್ಲಿ ಭಾರೀ ಮಳೆಯಾಗಿದ್ದು, ಬಾಳೆಹೊನ್ನೂರು, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆಯಲ್ಲಿ ಬಿಟ್ಟು-ಬಿಟ್ಟು ಮಳೆ ಸುರಿಯುತ್ತಿದೆ. ಇದೀಗ ಕಳಸಾದ ಹೆಬ್ಬಾಳ ಸೇತುವೆ ಮುಳುಗುವ ಸ್ಥಿತಿಯಲ್ಲಿದೆ.

      ಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಈ ವರ್ಷದಲ್ಲಿ ನಾಲ್ಕನೇ ಬಾರಿ ಮಳುಗಡೆಯಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲ, ಇತ್ತ ಕಡೆ ತುಂಗಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಗಾಂಧಿ ಮೈದಾನಕ್ಕೆ ನೀರು ನುಗ್ಗಿದೆ.

      Heavy rain has been lashing Coastal and Malnad of Karnataka

      ನದಿ ಪಾತ್ರದ ಜನರಲ್ಲಿ ಹೆಚ್ಚಿದ ಆತಂಕ ಮನೆ ಮಾಡಿದ್ದು, ಮಲೆನಾಡಿನ ಜನಜೀವನ ಅಸ್ತವ್ಯಸ್ತಗೊಂಡಿದೆ.

      ಹಗಲಿರುಳು ಸುರಿದ ಮಳೆಗೆ ಕೊಟ್ಟಿಗೆಯ ಗೋಡೆ ಕುಸಿದು ತಾಲೂಕಿನ ಕಂಬಿಹಳ್ಳಿಯಲ್ಲಿ ಸೋಮವಾರ ಮಹಿಳೆ ಸಾವನ್ನಪ್ಪಿದ್ದರು. ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನ ಗಿರಿಶ್ರೇಣಿಯಲ್ಲಿ ಮಂಗಳವಾರ ಗುಡ್ಡ ಕುಸಿತವುಂಟಾಗಿತ್ತು.

      ರಸ್ತೆ ಪಕ್ಕದಲ್ಲಿಯೇ ಗುಡ್ಡ ನಿಧಾನವಾಗಿ ಕುಸಿಯುತ್ತಿದ್ದು, ಕವಿಕಲ್ ಗಂಡಿ ರಸ್ತೆಯಲ್ಲಿ ಕಲ್ಲುಗಳನ್ನಿಟ್ಟು ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡಲಾಗಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+