ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ: ಮುಳುಗುವ ಸ್ಥಿತಿಯಲ್ಲಿ ಹೆಬ್ಬಾಳ ಸೇತುವೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಮುಳುಗುವ ಸ್ಥಿತಿಯಲ್ಲಿದೆ ಹೆಬ್ಬಾಳೆ ಸೇತುವೆ

ಚಿಕ್ಕಮಗಳೂರು, ಜುಲೈ.11: ಚಿಕ್ಕಮಗಳೂರಲ್ಲಿ ಇಂದು ಬುಧವಾರ ಕೂಡ ಮಳೆಯ ಅಬ್ಬರ ಮುಂದುವರಿದಿದೆ. ಮಲೆನಾಡಲ್ಲಿ ರಾತ್ರಿಯಿಡಿ ಮಳೆ ಸುರಿದಿದ್ದು, ಕೆಲ ಭಾಗಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಲೇ ಇದೆ.

ಕಳಸ, ಶೃಂಗೇರಿ, ಕುದುರೆಮುಖದಲ್ಲಿ ಭಾರೀ ಮಳೆಯಾಗಿದ್ದು, ಬಾಳೆಹೊನ್ನೂರು, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆಯಲ್ಲಿ ಬಿಟ್ಟು-ಬಿಟ್ಟು ಮಳೆ ಸುರಿಯುತ್ತಿದೆ. ಇದೀಗ ಕಳಸಾದ ಹೆಬ್ಬಾಳ ಸೇತುವೆ ಮುಳುಗುವ ಸ್ಥಿತಿಯಲ್ಲಿದೆ.

ಕರ್ನಾಟಕ ಕರಾವಳಿಯಲ್ಲಿ ಮತ್ತೆ ಸುರಿಯಲಿದೆ ಧಾರಾಕಾರ ಮಳೆಕರ್ನಾಟಕ ಕರಾವಳಿಯಲ್ಲಿ ಮತ್ತೆ ಸುರಿಯಲಿದೆ ಧಾರಾಕಾರ ಮಳೆ

ಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಈ ವರ್ಷದಲ್ಲಿ ನಾಲ್ಕನೇ ಬಾರಿ ಮಳುಗಡೆಯಾಗುವ ಸಾಧ್ಯತೆಯಿದೆ. ಅಷ್ಟೇ ಅಲ್ಲ, ಇತ್ತ ಕಡೆ ತುಂಗಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಗಾಂಧಿ ಮೈದಾನಕ್ಕೆ ನೀರು ನುಗ್ಗಿದೆ.

Heavy rain has been lashing Coastal and Malnad of Karnataka

ನದಿ ಪಾತ್ರದ ಜನರಲ್ಲಿ ಹೆಚ್ಚಿದ ಆತಂಕ ಮನೆ ಮಾಡಿದ್ದು, ಮಲೆನಾಡಿನ ಜನಜೀವನ ಅಸ್ತವ್ಯಸ್ತಗೊಂಡಿದೆ.

ಹಗಲಿರುಳು ಸುರಿದ ಮಳೆಗೆ ಕೊಟ್ಟಿಗೆಯ ಗೋಡೆ ಕುಸಿದು ತಾಲೂಕಿನ ಕಂಬಿಹಳ್ಳಿಯಲ್ಲಿ ಸೋಮವಾರ ಮಹಿಳೆ ಸಾವನ್ನಪ್ಪಿದ್ದರು. ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನ ಗಿರಿಶ್ರೇಣಿಯಲ್ಲಿ ಮಂಗಳವಾರ ಗುಡ್ಡ ಕುಸಿತವುಂಟಾಗಿತ್ತು.

ಮಲೆನಾಡಿನಲ್ಲಿ ನಿಲ್ಲದ ಮಳೆಯ ಆರ್ಭಟ: ಮಹಿಳೆ ಸಾವುಮಲೆನಾಡಿನಲ್ಲಿ ನಿಲ್ಲದ ಮಳೆಯ ಆರ್ಭಟ: ಮಹಿಳೆ ಸಾವು

ರಸ್ತೆ ಪಕ್ಕದಲ್ಲಿಯೇ ಗುಡ್ಡ ನಿಧಾನವಾಗಿ ಕುಸಿಯುತ್ತಿದ್ದು, ಕವಿಕಲ್ ಗಂಡಿ ರಸ್ತೆಯಲ್ಲಿ ಕಲ್ಲುಗಳನ್ನಿಟ್ಟು ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡಲಾಗಿತ್ತು.

English summary
Heavy rain has been lashing Coastal and Malnad (hilly region) of Karnataka for the past three days. It has claimed the life of a 48-year-old woman Vanaja in Chikmagalur district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X