Rain Alert: ಮಳೆ.. ಮಳೆ.. ಆರ್ಭಟ ಶುರು, ಇನ್ನಾದರೂ ಸರಿಯಾಗುತ್ತಾ ನೀರಿನ ಸಮಸ್ಯೆ?
ಕನ್ನಡಿಗರು ಮಳೆಗಾಗಿ ಕಾದು ಕೂತಿರುವ ಸಮಯದಲ್ಲೇ, ಮಳೆಯ ಅಬ್ಬರ ಮೆಲ್ಲಗೆ ಶುರು ಆಗಿದೆ. ಅದ್ರಲ್ಲೂ ಮಲೆನಾಡು ಪ್ರದೇಶದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಒಂದಲ್ಲ ಒಂದು ಜಿಲ್ಲೆಯಲ್ಲಿ ಮಳೆ ಬೀಳುತ್ತಿದೆ. ಹಾಗಾದ್ರೆ ಈ ಮಳೆರಾಯ ಮುಂದಿನ ಎಷ್ಟು ದಿನಗಳ ಕಾಲ ಇದೇ ರೀತಿ ಬೀಳಲಿದ್ದಾನೆ? ಆ ಬಗ್ಗೆ ಪೂರ್ತಿ ಮಾಹಿತಿಗೆ ಮುಂದೆ ಓದಿ.
ಬಿರು ಬಿಸಿಲು ನೆತ್ತಿಯನ್ನ ಸುಡುತ್ತಿದೆ, ಹೀಗಾಗಿ ಮಳೆ ಬರಲಿ ಅಂತಾ ಜನರು ಚಾತಕ ಪಕ್ಷಿ ರೀತಿ ಕಾಯುತ್ತಿದ್ದಾರೆ. ಅದ್ರಲ್ಲೂ ಕರ್ನಾಟಕದಲ್ಲಿ ಬಯಲು ಸೀಮೆ ಜಾಗದಲ್ಲಿ ದುರ್ಬೀನು ಹಾಕಿ ಹುಡುಕಿದ್ರೂ ಸುಲಭವಾಗಿ ಒಂದೇ ಒಂದು ಹನಿ ನೀರು ಸಹ ಸಿಗುವುದಿಲ್ಲ. ಹೀಗಾಗಿ ಜನರು ಕೂಡ ನರಳುತ್ತಿದ್ದು, ನೀರಿನ ಸಮಸ್ಯೆ ಬೇಗ ಬಗೆಹರಿಯಲಿ ದೇವರೆ ಅಂತಾ ಬೇಡಿಕೆ ಇಟ್ಟಿದ್ದರು. ಜನರು ಹೀಗೆ ಬೇಡಿಕೆ ಇಟ್ಟ ಕಾರಣಕ್ಕೆ ಇರಬೇಕು ವರುಣ ದೇವ ಮೆಲ್ಲಗೆ ತನ್ನ ಆರ್ಭಟ ಶುರು ಮಾಡಿದ್ದಾನೆ. ಹಾಗಾದರೆ ಎಲ್ಲೆಲ್ಲಿ ಮಳೆ ಬೀಳುತ್ತಿದೆ.

ಮಲೆನಾಡು ಭಾಗದಲ್ಲಿ ಭರ್ಜರಿ ಮಳೆ
ಮಳೆ ಇಲ್ಲದೆ ಬೆಳೆ ಇಲ್ಲ, ಬೆಳೆ ಇಲ್ಲದೆ ಬದುಕೇ ಇಲ್ಲ. ಈಗಾಗಲೇ ಕನ್ನಡ ನಾಡಿನ ರೈತ ಬಾಂಧವರು ತಮ್ಮ ಬೆಳೆಯನ್ನೇ ಕಳೆದುಕೊಂಡಿದ್ದಾರೆ. ಹೀಗಾಗಿ ಈಗ ಉಳಿದಿರುವ ಏಕೈಕ ನಂಬಿಕೆ ಎಂದರೆ ಅದು ಕುಡಿಯುವ ನೀರು. ರಾಜ್ಯದ ಬಹುತೇಕ ಪ್ರದೇಶದಲ್ಲಿ ಕುಡಿಯುವ ನೀರಿಗೂ ಭೀಕರ ಸಮಸ್ಯೆ ಎದುರಾಗಿದೆ. ಹೀಗಾಗಿ ಜನರು ನರಳುತ್ತಿದ್ದು, ಮಳೆ ಬರಲಿ ದೇವರೆ ಅಂತಾ ಬೇಡುತ್ತಿದ್ದಾರೆ. ಇಂತಹ ಸಮಯದಲ್ಲೇ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದ ಹಲವು ಪ್ರದೇಶದಲ್ಲಿ ಮಳೆ ಬೀಳುತ್ತಿದೆ. ಇನ್ನೂ ಸೋಷಿಯಲ್ ಮೀಡಿಯಾದಲ್ಲಿ ಮಳೆಯ ವಿಡಿಯೋಗಳು ವೈರಲ್ ಆಗುತ್ತಿವೆ.
ತೋಟ ಉಳಿಸಲು ರೈತರ ಪರದಾಟ
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಶುರುವಾಗಿರುವುದು ಸಂತಸ ಮೂಡಿಸಿದೆ. ಇಷ್ಟೇ ಅಲ್ಲದೆ ಬಯಲು ಸೀಮೆ ಭಾಗದಲ್ಲೂ ಮಳೆ ಬೀಳುತ್ತಿದೆ. ಮೊನ್ನೆ ವಿಜಯಪುರ ಜಿಲ್ಲೆಯಲ್ಲೂ ಮಳೆ ಅಬ್ಬರಿಸಿದೆ, ಇದೀಗ ಶಿವಮೊಗ್ಗದ, ಭದ್ರಾವತಿ ಭಾಗದಲ್ಲೂ ಮಳೆ ಬಿದ್ದಿದೆ. ಹೀಗಾಗಿ ರೈತರು, ಅದರಲ್ಲೂ ತೋಟ ಉಳಿಸೋಕೆ ಪರದಾಡುತ್ತಿದ್ದ ರೈತರು ಈಗ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಮಳೆ ಬಿದ್ದ ಹಿನ್ನೆಲೆ ಒಂದಷ್ಟು ನೆಮ್ಮದಿಯಾಗಿದ್ದಾರೆ. ಮಳೆ ಬೀಳುತ್ತಿರುವ ವಿಡಿಯೋ ವೈರಲ್ ಆಗುತ್ತಿವೆ.
Thunderstorm in Bhadravati ⛈️#Karnatakarains @ravikeerthi22 pic.twitter.com/IZt56Yv2TF
— ಸಂಕೇತ್./.Sanket. (@IamSanket0014) April 3, 2024
ಎಲ್ಲೆಲ್ಲೂ ಹಬ್ಬುತ್ತಿದೆ ಭೀಕರ ಬಿಸಿಲು
ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ & ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ ಜಿಲ್ಲೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಭಾರಿ ಬಿಸಿಲು ಇದೀಗ ಬೀಳುತ್ತಿದೆ. ಬಿಸಿಲಿನ ನಡುವೆ ಅಲ್ಲಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಹೀಗಾಗಿ ಜನರಲ್ಲಿಯು ಹೊಸ ಆಶಾಭಾವನೆ ಮೂಡಿದೆ.
ಡ್ಯಾಂಗಳ ಪರಿಸ್ಥಿತಿ ಏನಾಗಿದೆ ಗೊತ್ತಾ?
ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟ ಕಾರಣ ಆತಂಕ ಎದುರಾಗಿತ್ತು. ಹೀಗಾಗಿ, ಡ್ಯಾಂಗಳ ನೀರಿನ ಮಟ್ಟ ಕುಸಿದು ಬಿದ್ದು ರೈತರು ಆತಂಕದಲ್ಲೇ ದಿನ ದೂಡುವ ಸ್ಥಿತಿ ಇತ್ತು. ಬೇಸಿಗೆ ಬೇಗೆ ಮಧ್ಯೆ ಇದೀಗ ಮಳೆಯ ಅಬ್ಬರ ಮೆಲ್ಲಗೆ ಶುರುವಾಗಿದೆ. ಹವಾಮಾನ ತಜ್ಞರ ಮುನ್ಸೂಚನೆ ಪ್ರಕಾರ ಮಳೆ ಬೀಳುವ ನಿರೀಕ್ಷೆ ಇದೆ. ಅಲ್ಲಲ್ಲಿ ಮೋಡಗಳು ಕವಿದು, ಮಳೆ ಸೂಚನೆ ಶುರುವಾಗಿದೆ. ಈ ಮಧ್ಯೆ ಕೊಡಗು ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳ ಜನ ಭರ್ಜರಿ ಮಳೆ ನೋಡಿ ಖುಷಿಯಾಗಿದ್ದಾರೆ. ಹಾಗೇ ಇನ್ನೂ ಕೆಲ ದಿನಗಳ ಕಾಲ ಇದೇ ರೀತಿ ಭರ್ಜರಿ ಮಳೆ ಸುರಿಯುವ ನಿರೀಕ್ಷೆ ದಟ್ಟವಾಗಿದೆ.
ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ!
ಹವಾಮಾನ ಮುನ್ಸೂಚನೆ ಮಾಹಿತಿ ನೀಡುವಂತೆ ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 2ನೇ ವಾರದಿಂದಲೇ ಮಳೆಯಾಗಲಿದೆ ಅಂತಾ ಹೇಳಲಾಗಿದೆ. ಇದು ಒಂದು ಕಡೆಯಾದರೆ ಈಗಾಗಲೇ, ಕಾವೇರಿ ನದಿ ತವರು ಕೊಡಗು ಸೇರಿದಂತೆ ಚಿಕ್ಕಮಗಳೂರು, ಹುಬ್ಬಳ್ಳಿ & ಧಾರವಾಡ ಸೇರಿ ಗಡಿನಾಡು ಬೆಳಗಾವಿ ಜಿಲ್ಲೆಯಲ್ಲೂ ಮಳೆ ಬಿದ್ದಿದೆ. ನಿನ್ನೆ ಕೂಡ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಮಳೆ ಬಿದ್ದಿದ್ದು ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಮತ್ತೊಂದು ಕಡೆ ಮುಂದಿನ ಕೆಲವೇ ದಿನದಲ್ಲಿ ಭರ್ಜರಿ ಮಳೆ ಶುರುವಾಗುವ ಮುನ್ಸೂಚನೆ ಕೂಡ ಸಿಗುತ್ತಿದೆ.
ಮಳೆ ಬರುತ್ತಾ? ಮಳೆ ಬರಲ್ವಾ?
ಹೌದು, ಮಳೆ ಬರದೇ ಇದ್ದರೆ ಕನ್ನಡಿಗರ ಪರಿಸ್ಥಿತಿ ವ್ಯತಿರಿಕ್ತ ಆಗಲಿದೆ. ಯಾಕಂದ್ರೆ ಇದೀಗ ಕರ್ನಾಟಕದ ಬಹುತೇಕ ನದಿ & ಕೆರೆ ಸೇರಿದಂತೆ ಜಲ ಮೂಲಗಳು ಬತ್ತಿ ಹೋಗಿವೆ. ಹೀಗಾಗಿ ಮಳೆ ಬರಲೇಬೇಕು ದೇವರೆ ಅಂತಾ ಕಾಯುತ್ತಿದ್ದಾರೆ ಕನ್ನಡಿಗರು. ಹೀಗಿದ್ದಾಗ ಭರ್ಜರಿಯಾದ ಸುದ್ದಿಯನ್ನ ಹವಾಮಾನ ಇಲಾಖೆ ಕೊಟ್ಟಿದೆ. ಈಗಾಗಲೇ ಕೊಡಗು, ಚಿಕ್ಕಮಗಳೂರು ಸೇರಿ ಶಿವಮೊಗ್ಗ, ದಾವಣಗೆರೆ, ಬೆಳಗಾವಿ ಜಿಲ್ಲೆಗಳಲ್ಲಿ ಒಂದೊಂದು ಭಾರಿ ಮಳೆ ಬಿದ್ದಿದೆ. ಈಗ, ಇಡೀ ಕರ್ನಾಟಕದಲ್ಲಿ ಮಳೆ ಅಬ್ಬರಿಸಲಿದೆ ಎನ್ನಲಾಗುತ್ತಿದೆ. ಈ ನಡುವೆ ಕಳೆದ ತಿಂಗಳು ಕೂಡ ಇದೇ ರೀತಿ ಮಳೆ ಬೀಳುವ ಮುನ್ಸುಚನೆ ಹವಾಮಾನ ತಜ್ಞರಿಂದ ಸಿಕ್ಕಿತ್ತು. ಆದರೂ ಮಳೆ ಬೀಳಲೇ ಇಲ್ಲ! ಈ ಬಾರಿ ಕೂಡ ಹಂಗೆ ಆಗುತ್ತಾ? ಕಾದು ನೋಡಬೇಕು.
ಕನ್ನಡಿಗರ ಆಸೆಯನ್ನ ವರುಣ ದೇವ...
ಕರ್ನಾಟಕದಲ್ಲಿ ಮಳೆ ಇಲ್ಲದೆ ಭೀಕರ ಬರಗಾಲ ಎದುರಾದ ಕಾರಣಕ್ಕೆ ರಾಜ್ಯ ಸರ್ಕಾರಕ್ಕೂ ದೊಡ್ಡ ತಲೆನೋವು ಶುರುವಾಗಿದೆ. ಯಾಕಂದ್ರೆ ಪರಿಸ್ಥಿತಿ ಇದೇ ರೀತಿ ಮುಂದುವರಿದು, ಈ ಬರ ಇನ್ನೂ ಹಲವು ತಿಂಗಳು ಮುಂದುವರಿಯುತ್ತೆ ಎಂಬ ಭಯ ಆವರಿಸಿತ್ತು. ಈ ಕಾರಣಕ್ಕೆ ತಕ್ಷಣಕ್ಕೆ ಮಳೆ ಬರಬೇಕು ಅಂತಾ ಹೇಳಿದ್ದರು ತಜ್ಞರು. ಅದೇ ರೀತಿ ಈಗ ಮಳೆಯ ಆಗಮನ ಆಗಿದೆ. ಅದರಲ್ಲೂ ಕಾವೇರಿ ನದಿಯ ತವರು ಕೊಡಗು ಜಿಲ್ಲೆಯಲ್ಲಿ ಭರ್ಜರಿ ಮಳೆ ಬಂದು, ಭೂಮಿ ಕೆಸರಾಗಿದೆ. ಕಾವೇರಿ ತಾಯಿಯ ಒಡಲಿಗೂ ಭರ್ಜರಿ ನೀರು ಸೇರ್ಪಡೆಯಾಗಿದೆ. ಈ ರೀತಿ ಕರ್ನಾಟಕದ ವಿವಿಧ ಪ್ರದೇಶದಲ್ಲೂ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಮಳೆ ಬಂದ್ರೆ ಸಾಕಪ್ಪಾ ಅಂತಿದ್ದಾರೆ ಜನ. ಕನ್ನಡಿಗರ ಆಸೆಯನ್ನ ವರುಣ ದೇವ ಈಡೇರಿಸುತ್ತಾನಾ? ಅನ್ನೋದನ್ನ ಕಾದು ನೋಡಬೇಕಿದೆ.
ಕರ್ನಾಟಕದ ಪರಿಸ್ಥಿತಿ ಈಗ ಹೇಗಿದೆ?
ಮಳೆ ಬರಬೇಕಿದೆ, ಮಳೆ ಬರದೇ ಇದ್ದರೆ ಪರಿಸ್ಥಿತಿ ಕಷ್ಟವಾಗಲಿದೆ. ಅದರಲ್ಲೂ ಕರ್ನಾಟಕದ ಜನರಿಗೆ ಮಳೆ ಬರದೇ ಇದ್ದರೆ ಪರಿಸ್ಥಿತಿ ಕುತ್ತಿಗೆಗೆ ಬಂದು ಕೂರಲಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ದೊಡ್ಡ ದೊಡ್ಡ ನಗರಗಳಲ್ಲಿ ಕುಡಿವ ನೀರಿಗೆ ಸಮಸ್ಯೆ ಈಗ ಕಾಡತೊಡಗಿದೆ. ಮಳೆ ಬರದೇ ಇದ್ದರೆ ಕನ್ನಡಿಗರ ಪರಿಸ್ಥಿತಿ ವ್ಯತಿರಿಕ್ತ ಆಗಲಿದೆ. ಯಾಕಂದ್ರೆ ಇದೀಗ ಕರ್ನಾಟಕದ ಬಹುತೇಕ ನದಿ & ಕೆರೆ ಸೇರಿದಂತೆ ಜಲ ಮೂಲಗಳು ಬತ್ತಿ ಹೋಗಿವೆ. ಹೀಗಾಗಿ ಮಳೆ ಬರಲೇಬೇಕು ದೇವರೆ ಅಂತಾ ಕಾಯುತ್ತಿದ್ದಾರೆ ಕನ್ನಡಿಗರು. ಹೀಗಿದ್ದಾಗಲೇ, ಭರ್ಜರಿ ಸುದ್ದಿಯನ್ನ ಹವಾಮಾನ ಇಲಾಖೆ ಕೊಟ್ಟಿದೆ. ಕೊಡಗು, ಚಿಕ್ಕಮಗಳೂರು ಸೇರಿ ಶಿವಮೊಗ್ಗ, ದಾವಣಗೆರೆ, ಬೆಳಗಾವಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಬಿದ್ದಿದೆ. ಈಗ ಇಡೀ ಕರ್ನಾಟಕದಲ್ಲಿ ಮಳೆ ಅಬ್ಬರಿಸುತ್ತೆ ಎನ್ನಲಾಗುತ್ತಿದೆ.
ನೀರು ಬೇಕೆಂದು ತಮಿಳುನಾಡು ಕಿರಿಕ್!
ಒಂದ್ಕಡೆ ಕಳೆದ ವರ್ಷ, ಅಂದ್ರೆ 2023ರಲ್ಲಿ ಕರ್ನಾಟಕದಲ್ಲಿ ಸರಿಯಾಗಿ ಮಳೆಯೇ ಬಂದಿಲ್ಲ ಎಂಬ ಕೊರಗು ಕಾಡುತ್ತಿತ್ತು. ಈ ನಡುವೆಯು ತಮಿಳುನಾಡು ಬೇರೆ ನೀರಿಗಾಗಿ ಭಾರಿ ಕಿರಿ, ಕಿರಿ ಮಾಡಿತ್ತು. ಹೀಗಾಗಿ ಕರ್ನಾಟಕ ಕೂಡ ಸಾಕಷ್ಟು ಪ್ರಮಾಣದ ನೀರನ್ನು ತಮಿಳುನಾಡು ರಾಜ್ಯಕ್ಕೆ ಹರಿಸಿತ್ತು. ಇಷ್ಟೆಲ್ಲದರ ಪರಿಣಾಮ ಇದೀಗ ಬೆಂಗಳೂರಿಗೂ ಮುಂದಿನ ದಿನಗಳಲ್ಲಿ, ಕುಡಿಯುವ ನೀರಿಗೆ ಸಂಕಷ್ಟ ಎದುರಾಗುತ್ತಾ? ಎಂಬ ಪ್ರಶ್ನೆ ಕಾಡುತ್ತಿದೆ. ಆದ್ರೆ ಕರ್ನಾಟಕದ ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ 3 ತಿಂಗಳಿಗೆ ಆಗುವಷ್ಟು ನೀರು ಇದೆ ಎಂದು ಸರ್ಕಾರದಿಂದ ಮಾಹಿತಿ ಸಿಗುತ್ತಿದೆ. ಹೀಗಾಗಿ ಬೆಂಗಳೂರಿಗರು ಸೇರಿದಂತೆ ಹಳೇ ಮೈಸೂರು ಭಾಗದ ಜನರು ಇದರಿಂದ ಒಂದಷ್ಟು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ
ಕರ್ನಾಟಕದ ಕರಾವಳಿ ಜಿಲ್ಲೆ ಸೇರಿ ಬೆಂಗಳೂರು ನಗರ, ಬೆಂಗಳೂರು ಗ್ರಾಂ. ರಾಮನಗರ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು & ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಿಂಚನ ಖುಷಿ ಕೊಟ್ಟಿದೆ. ಹಾಗೇ ಇಂದು ಕೂಡ ಭರ್ಜರಿ ಮಳೆ ಬಿದ್ದಿದ್ದು, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಬೀಳುತ್ತೆ ಎಂಬ ಮುನ್ಸೂಚನೆ ನೀಡಲಾಗಿದೆ. ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಮಳೆ ಬೀಳಲಿದೆ ಎನ್ನಲಾಗಿದೆ. ಹೀಗಾಗಿ ಜನರು ಕೂಡ ಫುಲ್ ಖುಷ್ ಆಗಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ












Click it and Unblock the Notifications