ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಮಂಡ್ಯ, ಚಾಮರಾಜನಗರ, ರಾಮನಗರದಲ್ಲಿ ಶಾಲೆಗಳಿಗೆ ರಜೆ

|
Google Oneindia Kannada News

ರಾಮನಗರ, ಆಗಸ್ಟ್ 29: ಭಾರಿ ಮಳೆಯ ಹಿನ್ನೆಲೆಯಲ್ಲಿ ರಾಮನಗರ, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.

ರಾಮನಗರ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣರಭಟಕ್ಕೆ ಹಲವು ಪ್ರದೇಶಗಳು ಜಲಾವೃತವಾಗಿವೆ. ರಾಮನಗರ ತಾಲೂಕಿನ ಪಾಲಭೋವಿದೊಡ್ಡಿ ಗ್ರಾಮದ ಬಳಿ ಜಮೀನು, ಮನೆಗಳು ಜಲಾವೃತಗೊಂಡಿವೆ. ರಾಮನಗರ ಪಟ್ಟಣ ಅರ್ಕೇಶ್ವರ ಕಾಲೋನಿ ಜಲಾವೃತವಾಗಿದ್ದು, ಹಲವು ಮನೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದ ಜನರು ಪರದಾಡುತ್ತಿದ್ದಾರೆ.

Breaking: ಜೆಡಿಎಸ್‌ನಿಂದಲೂ ಮಳೆ ಸಂತ್ರಸ್ತರಿಗೆ ಪರಿಹಾರ, ಎಚ್‌ಡಿಕೆBreaking: ಜೆಡಿಎಸ್‌ನಿಂದಲೂ ಮಳೆ ಸಂತ್ರಸ್ತರಿಗೆ ಪರಿಹಾರ, ಎಚ್‌ಡಿಕೆ

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಯಾ ಬ್ಲಾಕ್‌ಗಳ ಶಿಕ್ಷಣಾಧಿಕಾರಿಗಳು ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

Heavy rain: Holiday announced for schools and colleges in Mandya, Ramanagara, chamarajnagar

ರಾಮನಗರದ ಹನುಮಂತನಗರದಲ್ಲಿ ಮಳೆಯಿಂದಾಗಿ ರಂಗರಾಯನದೊಡ್ಡಿ ಕೆರೆ ಕುಸಿದಿದ್ದು, ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರಿಂದ 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, ನಿವಾಸಿಗಳು ಮನೆಯಿಂದ ಹೊರಬರಲು ಹರಸಾಹಸ ಪಡುತ್ತಿದ್ದಾರೆ.

ಅಲ್ಲದೇ ಚನ್ನಪಟ್ಟಣದಲ್ಲಿ ಭಾರೀ ಮಳೆಗೆ ಎಲೆಕೇರಿ-ರಾಂಪುರ ರಸ್ತೆ ಜಲಾವೃತವಾಗಿದ್ದು, 4 ಅಡಿಗೂ ಹೆಚ್ಚು ನೀರು ರಸ್ತೆಯಲ್ಲಿ ಹರಿಯುತ್ತಿದೆ. ಈ ಭಾಗದಲ್ಲಿ ನೀರು ಪ್ರವಾಹದಂತೆ ಹರಿಯುತ್ತಿರುವುದರಿಂದ ಅಕ್ಕಪಕ್ಕದ ಗ್ರಾಮಗಳು, ಮನೆಗಳು ಸಂಪೂರ್ಣ ಜಲಾವೃತಗೊಂಡು ಜನರು ಪರದಾಡುತ್ತಿದ್ದಾರೆ. ವಾಹನ ಸವಾರರಿಗೆ ವಾಹನ ಚಲಾಯಿಸುವುದೇ ಸವಾಲಾಗಿದೆ.

ಬಿಡದಿ ಮತ್ತು ರಾಮನಗರ ನಡುವೆ ಭಾರೀ ಮಳೆಯಿಂದಾಗಿ 12785 ಕಾಚೇಗೌಡ-ಮೈಸೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರಾಮನಗರ ನಿಲ್ದಾಣದಲ್ಲಿ ಒಂದು ಗಂಟೆಗೂ ಹೆಚ್ಚು ವಿಳಂಬವಾಗಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Heavy rain: Holiday announced for schools and colleges in Mandya, Ramanagara, chamarajnagar

ರಾಮನಗರ ತಾಲೂಕಿನ ಬಸವನಪುರ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಅಂಡರ್ ಪಾಸ್ ನಲ್ಲಿ ಮಳೆ ನೀರು ತುಂಬಿಕೊಂಡಿದೆ. ಇದರಿಂದ ಬೆಂಗಳೂರಿನಿಂದ ರಾಮನಗರಕ್ಕೆ ತೆರಳುತ್ತಿದ್ದ ಮೂರು ಕಾರು ಹಾಗೂ ಬಸ್‌ಗಳು ಅಂಡರ್‌ಪಾಸ್‌ನಲ್ಲಿ ಸಿಲುಕಿಕೊಂಡಿವೆ.

ರಾಮನಗರದ ಕನಕಪುರ ವೃತ್ತದಲ್ಲಿ ನೀರು ತುಂಬಿರುವ ಕಾರಣ ಬೆಂಗಳೂರು-ಮೈಸೂರು ಸಂಪರ್ಕ ಕಡಿತಗೊಂಡಿದೆ. ರಂಗರಾಯನದೊಡ್ಡಿ ಕೆರೆ ಬಳಿ ರಸ್ತೆ ಮೇಲೆ ನೀರು ಧಾರಾಕಾರವಾಗಿ ಹರಿಯುತ್ತಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಹರಿಯುತ್ತಿದ್ದು ವಾಹನ ದಟ್ಟಣೆ ಹೆಚ್ಚಾಗಿದೆ. ಹೆದ್ದಾರಿಯಲ್ಲಿ ಕಿಲೋಮೀಟರ್‌ಗೂ ಹೆಚ್ಚು ದೂರ ವಾಹನಗಳು ನಿಂತಿವೆ.

ಚಾಮರಾಜನಗರ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಲಾಗಿದೆ. ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.

ಇನ್ನು, ರಾಮನಗರದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ರಾಮನಗರದ ಮುಖ್ಯ ಸರ್ಕಾರಿ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ನೀರಿನಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ತಕ್ಷಣವೇ ಎರಡು ದೋಣಿಗಳ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ.

English summary
Holiday announced for schools and colleges in Ramanagara, Mandya and chamarajnagar district due to Heavy rainfall. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X