School Holidays On June 13: ರಣಭೀಕರ ಮಳೆ ಜೂನ್ 13ಕ್ಕೆ ಈ ಜಿಲ್ಲೆಗಳಲ್ಲಿ ಶಾಲಾ - ಕಾಲೇಜುಗಳಿಗೆ ರಜೆ!

School Holidays On June 13: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲಾ - ಕಾಲೇಜುಗಳಿಗೆ ಜೂನ್ 13ರಂದು ರಜೆ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ರಣಭೀಕರ ಮಳೆಯಾಗುತ್ತಿದ್ದು. ಈ ಹಿನ್ನೆಲೆಯಲ್ಲಿ ಜೂನ್ 13ಕ್ಕೆ ಪ್ರಮುಖ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಪಡೆದುಕೊಂಡಿದೆ. ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 12 ಗುರುವಾರದಂದು ವಿವಿಧ ಜಿಲ್ಲೆಗಳಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ಶುಕ್ರವಾರ ಜೂನ್ 13ಕ್ಕೂ ರಜೆ ಘೋಷಣೆ ಮಾಡಲಾಗಿದೆ. ಯಾವ ಜಿಲ್ಲೆಗಳಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಏನು ನಿರ್ದೇಶನ ನೀಡಲಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

Heavy rain holiday for schools and colleges in these districts on June 13

ಕರಾವಳಿಯ ಉಡುಪಿ ಹಾಗೂ ಉತ್ತರ ಕರ್ನಾಟಕದ ಧಾರವಾಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜೂನ್‌ 13ಕ್ಕೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಜೂನ್ 12ರ ಹವಾಮಾನ ಇಲಾಖೆಯ ರೆಡ್ ಆಲರ್ಟ್‌ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:13.06.2025 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.

ಉಳಿದಂತೆ ಎಲ್ಲಾ ಪದವಿ ಪೂರ್ವ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಹಾಗೂ ಐ.ಟಿ.ಐ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಧಾರವಾಡದಲ್ಲೂ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ

ಜಿಲ್ಲೆಯಲ್ಲಿ ಭಾರಿ ಮಳೆ: ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಜೂ.13 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಮಾಡಿದ್ದಾರೆ. ಭಾರತೀಯ ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ಜೂನ್‌ 13ಕ್ಕೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು ಘೋಷಿಸಿರುವ ರಜೆಯನ್ನು ನಾಳೆ ಜೂ.13 ರಂದು ಸಹ ಮುಂದುವರಿಸಲಾಗಿದೆ. ಶುಕ್ರವಾರ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಇಂದು ಹವಾಮಾನ ಇಲಾಖೆಯಿಂದ ಜಿಲ್ಲೆಗೆ ರೆಡ್ ಅಲರ್ಟ್ ಸೂಚಿಸಲಾಗಿತ್ತು. ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಅನೇಕ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ನಾಳೆಯೂ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+