Heavy Rain: ಚಂಡಮಾರುತ ಪ್ರಸರಣ ಪ್ರಭಾವ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ!

Heavy Rain: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ವಾಯು ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲೂ ಕಳೆದ ಮೂರು ನಾಲ್ಕು ದಿನಗಳಿಂದ ತಂಪಾದ ವಾತಾವರಣವಿದೆ. ಇನ್ನೂ ಮೂರರಿಂದ ನಾಲ್ಕು ದಿನಗಳ ಅವಧಿಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಸರಾಸರಿ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ತಗ್ಗು ಈಗ ಶ್ರೀ ಗಂಗಾನಗರ, ರೋಹ್ಟಕ್, ಶಹಜಹಾನ್‌ಪುರ, ಸುಲ್ತಾನ್‌ಪುರ, ಗಯಾ, ಬಂಕುರಾ ಮೂಲಕ ಹಾದುಹೋಗುತ್ತದೆ ಮತ್ತು ಅಲ್ಲಿಂದ ಪೂರ್ವಕ್ಕೆ ಮಿಜೋರಾಂ ಕಡೆಗೆ ಹೋಗುತ್ತದೆ. ದಕ್ಷಿಣ ತಮಿಳುನಾಡು-ಪುದುಚೇರಿಯ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 5.8 ಮತ್ತು 7.6 ಕಿ.ಮೀ. ನಡುವಿನ ಮೇಲ್ಬಾಗದ ವಾಯು ಚಂಡಮಾರುತದ ಪರಿಚಲನೆ ಮುಂದುವರೆದಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ. ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆ ಮುಂದುವರೆದಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಧಾರಾಕಾರ ಮಳೆ ಆಗಿದೆ.

Heavy Rain

Heavy Rain:ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ವಿವಿಧ ಭಾಗದಲ್ಲಿ ಭಾರೀ ಮಳೆ ಇರಲಿದೆ. ಅಲ್ಲದೆ ಗಾಳಿಯ ವೇಗವು ಪ್ರತಿ ಗಂಟೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ ಹಾಗೂ ವಿಜಯನಗರದಲ್ಲಿ ಮಳೆ ಆಗಲಿದೆ. ಅಲ್ಲದೆ ಗಾಳಿಯ ವೇಗವು 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ.

ಬೆಂಗಳೂರಿನಲ್ಲಿ ಹೇಗಿದೆ ವಾತಾವರಣ ?

ಬೆಂಗಳೂರಿನಲ್ಲಿ ಆಗಸ್ಟ್‌ 6ರ ಗುರುವಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲದೆ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಅಲ್ಲದೆ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+