ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆ; ಯೆಲ್ಲೂ ಅಲರ್ಟ್

ಬೆಂಗಳೂರು, ಜುಲೈ 23 : ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಜುಲೈ 24ರಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಒಟ್ಟು 11 ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

Recommended Video

      India vs China : ಪಾಕಿಸ್ತಾನವನ್ನು ಬಿಟ್ಟು ಚೀನಾವನ್ನು ಟಾರ್ಗೆಟ್ ಮಾಡಿದ ಭಾರತ | Oneindia Kannada

      ಭಾರತೀಯ ಹವಾಮಾನ ಇಲಾಖೆ ರಾಜ್ಯದ 11 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಗುರುವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಬೆಂಗಳೂರು ನಗರದಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆ ಇದೆ.

      ಶುಕ್ರವಾರ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಯಚೂರು, ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

      Heavy Rain IMD Issues Yellow Alert In 11 Districts

      ಕರಾವಳಿ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 2.9 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

      ಗುರುವಾರ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆ ನಿರೀಕ್ಷೆ ಇದೆ. ಬುಧವಾರ ಮಂಡ್ಯದ ಬಸರಾಳು ಗ್ರಾಮದಲ್ಲಿ ಗರಿಷ್ಟ 2 ಸೆಂ. ಮೀ. ಮಳೆಯಾಗಿದೆ. ಕೊಲ್ಲೂರು, ವಿಜಯಪುರ, ಅಜ್ಜಂಪುರ, ಹಿರಿಯೂರು ಮತ್ತು ಶಿರಾದಲ್ಲಿ 1 ಸೆಂ. ಮೀ. ಮಳೆಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+