Rain: ಕರ್ನಾಟಕದ 19 ಜಿಲ್ಲೆಗಳಲ್ಲಿ ರಣಭೀಕರ ಮಳೆ, ಯೆಲ್ಲೋ ಅಲರ್ಟ್‌!

Heavy Rain: ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಪಶ್ಚಿಮ ವಿದರ್ಭದಿಂದ ಮರಾಠವಾಡ, ಮನ್ನಾರ್ ಕೊಲ್ಲಿಯವರೆಗೆ ಕರ್ನಾಟಕದ ಒಳನಾಡು ಮತ್ತು ತಮಿಳುನಾಡಿನಾದ್ಯಂತ ಉತ್ತರ-ದಕ್ಷಿಣ ವಾಯುಭಾರವು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ವರೆಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದರೂ. ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಶಾಖದ ಅಲೆ ಸಹ ಇದೆ. ಯಾವ ಜಿಲ್ಲೆಯಲ್ಲಿ ವೆದರ್ ಹೇಗಿದೆ. ಎಲ್ಲೆಲ್ಲಿ ರಣಭೀಕರ ಮಳೆಯಾಗ್ತಿದೆ ಎನ್ನುವುದನ್ನು ನೋಡೋಣ....

ಕರ್ನಾಟಕದಲ್ಲಿ ಇತ್ತೀಚಿನ ವರ್ಷಗಳಲ್ಲಿ ಪೂರ್ವ ಮುಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಅದೇ ಪರಿಸ್ಥಿತಿ ಈಗಲೂ ಮುಂದುವರಿದಿದೆ. ಏಪ್ರಿಲ್‌ 3ರ ವರೆಗೆ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಇನ್ನೊಂದು ವಾರದ ಅವಧಿಗೆ ರಾಜ್ಯದಲ್ಲಿ ಮಳೆ ಧಾರಾಕಾರವಾಗಿ ಬೀಳಲಿದೆ. ಅಲ್ಲದೇ 19 ಜಿಲ್ಲೆಗಳಲ್ಲಿ ರಣಭೀಕರ ಮಳೆ ಇರಲಿದೆ. ಹೀಗಾಗಿ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐಎಂಡಿ ಯೆಲ್ಲೋ ಅಲರ್ಟ್‌ ನೀಡಿದೆ.

Heavy Rain in 19 Districts of Karnataka IMD Yellow Alert

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗದಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿದಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯನಗರ ಹಾಗೂ ಗದಗನಲ್ಲೂ ಮಳೆ ಇರಲಿದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಚಾಮರಾಜನಗರ, ಮಂಡ್ಯ ಹಾಗೂ ಮೈಸೂರಿನಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಆದರೆ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಅಲರ್ಟ್‌ ನೀಡಿದೆ.

26 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಇನ್ನು ರಾಜ್ಯದಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್‌ ನೀಡಿದೆ. ಏಪ್ರಿಲ್‌ 30ಕ್ಕೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, 26 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Heavy Rain in 19 Districts of Karnataka IMD Yellow Alert

ಯಾವ ಜಿಲ್ಲೆಯಲ್ಲಿ ಯಾವ ದಿನ ಮಳೆಯಾಗಲಿದೆ ?

ಏಪ್ರಿಲ್‌ 28: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಇನ್ನು ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಗಾಳಿಯ ವೇಗವು 50ರಿಂದ 60 ಕಿ.ಮೀ ವೇಗದಲ್ಲಿ ಇರಲಿದೆ. ವಿವಿಧ ಭಾಗದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯೂ ಇದೆ. ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳದಲ್ಲಿ ಭರ್ಜರಿ ಮಳೆಯಾಗಲಿದೆ. ಇನ್ನು ಬಾಗಲಕೋಟೆ, ರಾಯಚೂರು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ರಾಮನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ ಹಾಗೂ ಮೈಸೂರಿನಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರಿಪೋರ್ಟ್ ಹೇಳಿದೆ.

ಇನ್ನೊಂದು ವಾರ ಮಳೆ: ರಾಜ್ಯದಲ್ಲಿ ಇನ್ನೊಂದು ವಾರ ಮಳೆ ಮುಂದುವರಿಯಲಿದೆ. ವಾಯುಭಾರ ಕುಸಿತ ಹಾಗೂ ಪೂರ್ವ ಮುಂಗಾರು ರಾಜ್ಯಕ್ಕೆ ವರದಾನವಾಗಿದ್ದು. ರಾಜ್ಯದಲ್ಲಿ ಮಳೆ ಮುಂದುವರಿಯುತ್ತಿದೆ. ಮೇ ಮೊದಲ ವಾರದಲ್ಲಿ ಮಳೆ ಇನ್ನಷ್ಟು ಚುರುಕು ಪಡೆದುಕೊಳ್ಳಲಿದ್ದು, ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.

ಬೆಂಗಳೂರಿನ ಹವಾಮಾನ ಹೇಗಿದೆ ?

ರಾಜ್ಯದ ಉತ್ತರ ಭಾಗ ಹಾಗೂ ದಕ್ಷಿಣ ಭಾಗ ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾಗುತ್ತಿದ್ದರೂ. ಬೆಂಗಳೂರಿನಲ್ಲಿ ಮಳೆ ಇಲ್ಲ. ಬೆಂಗಳೂರಿನಲ್ಲಿ ಏಪ್ರಿಲ್‌ 28ಕ್ಕೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡದ್ದರೂ ಬಹುತೇಕ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಗಾಳಿಯ ವೇಗವು 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಐಎಂಡಿ ರಿಪೋರ್ಟ್‌ ಹೇಳಿದೆ. ಮುಂದಿನ 48 ಗಂಟೆಯ ಅವಧಿಯಲ್ಲೂ ಬೆಂಗಳೂರಿನಲ್ಲಿ ಇದೇ ವಾತಾವರಣ ಇರಲಿದೆ ಎಂದು ಹೇಳಲಾಗಿದೆ.

ಉಳಿದಂತೆ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದಲೂ ಬಿಸಿಲ ಝಳ ಹೆಚ್ಚಾಗುತ್ತಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದ್ದರೂ. ಬೆಂಗಳೂರಿನಲ್ಲಿ ಮಳೆಯ ಲಕ್ಷಣಗಳು ಇಲ್ಲ. ಮೋಡ ಕವಿದ ವಾತಾವರಣ ಇದೆಯಾದರೂ ಗಾಳಿಯ ತೀವ್ರತೆಯಿಂದಾಗಿ ಮಳೆ ಆಗುತ್ತಿಲ್ಲ.

ಮೇ 5ರ ವರೆಗೆ ಮಳೆ: ಕರ್ನಾಟಕದ ವಿವಿಧ ಭಾಗದಲ್ಲಿ ಮೇ 5ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗದಲ್ಲಿ ಈಗಾಗಲೇ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದೆ. ಇನ್ನೊಂದು ವಾರ ಮಳೆ ಮುಂದುವರಿಯಲಿದೆ ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ.

ಭಾರತದ ವಿವಿಧ ಭಾಗದಲ್ಲಿ ಮಳೆ: ಇನ್ನು ಭಾರತದ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದೆ. ಉತ್ತರ ಭಾರತದ ವಿವಿಧ ಶಾಖದ ಅಲೆ ಹೆಚ್ಚಳವಾಗಿದ್ದರೆ, ಈಶಾನ್ಯ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ನೆರೆಯ ತೆಲಂಗಾಣ ಹಾಗೂ ರಾಯಲಸೀಮಾ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನಾ ವರದಿ ಉಲ್ಲೇಖಿಸಿದೆ.

ಉಳಿದಂತೆ ಕರ್ನಾಟಕದಲ್ಲಿ ಮೀನುಗಾರರಿಗೆ ಯಾವುದೇ ಮುನ್ಸೂಚನೆಯನ್ನು ಸಹ ನೀಡಿಲ್ಲ. ಬಿಹಾರ, ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಮಳೆಯಾಗುತ್ತಿದೆ. ಭಾರತದ ಈಶಾನ್ಯ ರಾಜ್ಯಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+