ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ 24 ಗಂಟೆ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 03 : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 24 ಗಂಟೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಸೋಮವಾರ ಬೆಳಗ್ಗೆಯಿಂದ ಮಳೆಯಾಗುತ್ತಿದೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಳೆಯ ಕುರಿತು ಎಚ್ಚರಿಕೆ ನೀಡಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಘಟ್ಟ ಪ್ರದೇಶ, ಕರಾವಳಿ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ವರುಣನ ಆರ್ಭಟಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ವರುಣನ ಆರ್ಭಟ

ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಂಗಳವಾರ ಮಧ್ಯಾಹ್ನ ಸುಮಾರು 20 ನಿಮಿಷಗಳ ಕಾಲ ಮಳೆಯಾಗಿದೆ. ಮುಂದಿನ 24 ಗಂಟೆ ನಗರದಲ್ಲಿ ಮುಳೆ ಮುಂದುವರೆಯಲಿದೆ ಎಂದು ಎಂದು ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ.

ಉತ್ತರ ಭಾರತದಲ್ಲಿ ಮಳೆಯ ಆರ್ಭಟ; 25 ಬಲಿಉತ್ತರ ಭಾರತದಲ್ಲಿ ಮಳೆಯ ಆರ್ಭಟ; 25 ಬಲಿ

Heavy Rain In Bengaluru And Other District Next 24 Hours

ಬೆಳಗಾವಿ, ಧಾರವಾಡ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಒಂದು ದಿನ ಮಳೆ ಮುಂದುವರೆಯಲಿದೆ. ಭೀಕರ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿರುವ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದರೆ ಜನರು ಮತ್ತೆ ಸಂಕಷ್ಟಕ್ಕೆ ಒಳಗಾಗಲಿದ್ದಾರೆ.

ಕೊಡಗಿನಲ್ಲಿ ಮಳೆ ಕಡಿಮೆಯಾಗಿದ್ದರೂ ಸದ್ದಿಲ್ಲದೆ ಹೋಗುತ್ತಿದೆ ಪ್ರಾಣಕೊಡಗಿನಲ್ಲಿ ಮಳೆ ಕಡಿಮೆಯಾಗಿದ್ದರೂ ಸದ್ದಿಲ್ಲದೆ ಹೋಗುತ್ತಿದೆ ಪ್ರಾಣ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಲಿಂಗನಮಕ್ಕಿ ಜಲಾಶಯದ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಾದ ಹಿನ್ನಲೆಯಲ್ಲಿ ಸೋಮವಾರ ರಾತ್ರಿ 11ಗೇಟ್‌ಗಳ ಮೂಲಕ 15,993 ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ.

ತೀರ್ಥಹಳ್ಳಿ ಭಾಗದಲ್ಲಿ ಮಳೆಯಾಗುತ್ತಿದ್ದು ತುಂಗಾ ನದಿಯಲ್ಲಿಯೂ ನೀರಿನ ಮಟ್ಟ ಹೆಚ್ಚುತ್ತಿದೆ. ಭದ್ರಾ ಜಲಾಶಯದಿಂದ 7581 ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ. ಹೊಸನಗರ ತಾಲೂಕಿನಲ್ಲೂ ಮಳೆಯ ಆರ್ಭಟ ಹೆಚ್ಚಿದೆ.

ಹೊಸನಗರದಲ್ಲಿ ಸೋಮವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಮೇಲೆ ಎರಡು ಅಡಿ ನೀರು ನಿಂತಿದ್ದು, ಬಾಳೆಕೊಪ್ಪ ಮಾರ್ಗ ಬಂದ್ ಆಗಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಶ್ರೀಧರಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

job

ಲಿಂಗನಮಕ್ಕಿ ಜಲಾಶಯದಿಂದ ನೀರನ್ನು ಹೊರಬಿಟ್ಟ ಕಾರಣ ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿದೆ. ನೂರಾರು ಪ್ರವಾಸಿಗರು ಜೋಗಕ್ಕೆ ಆಗಮಿಸುತ್ತಿದ್ದು ಧುಮ್ಮಿಕ್ಕುವ ಶರಾವತಿಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

English summary
Karnataka State Natural Disaster Monitoring Cell (KSNDMC) issued heavy rainfall warning in Bengaluru and other district of Karnataka for next 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X