ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ: ಸಿದ್ದುಗೆ ಶುಭಸೂಚನೆ ಎಂದ ನೆಟ್ಟಿಗರು
ಬೆಂಗಳೂರಿನ ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿ, ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಮಳೆ ಬೀಳುತ್ತಿದೆ. ಮುಂಗಾರು ಪೂರ್ವದ ಮಳೆಯು ಅಬ್ಬರದೊಂದಿಗೆ ಪ್ರಾರಂಭವಾಗಿದೆ. ವಿಶೇಷವಾಗಿ ನಗರದ ದಕ್ಷಿಣ ಮತ್ತು ಮಧ್ಯ ಭಾಗಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ರಾಜ್ಯದ ಹಲವು ಪ್ರದೇಶದಲ್ಲಿಯೂ ಮಳೆಯು ಸುರಿಯುತ್ತಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನದಂದೇ ಸುರಿಯುತ್ತಿರುವ ಮಳೆಯು ಶುಭ ಸೂಚನೆ ಎಂದು ನೆಟ್ಟಿಗರು ತಿಳಿಸಿದ್ದಾರೆ.
HAIL STORM IN BENGALURU ⚠️⚠️⚠️
— Karnataka Weather (@Bnglrweatherman) May 20, 2023
Heavy rains with gusty winds, thunders, lightning & hailstorms at isolated places here in #Bengaluru
Final phase of pre monsoon thunderstorms begin with a bang
Particularly people in the Southern & Central parts of the city, please don't step out… https://t.co/oomKHCBMGR pic.twitter.com/8z5llB3wAy
ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆಯಿರುವುದರಿಂದ ಬೆಂಗಳೂರಿಗೆ ವಾರಾಂತ್ಯದಲ್ಲಿ ಶಾಖದಿಂದ ವಿರಾಮ ಸಿಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಅದರಂತೆ ಶನಿವಾರ, ಮೇ 21 ಮತ್ತು ಮೇ 22 ರ ಭಾನುವಾರದಂದು ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮೇ 22 ರಂದು ಕರಾವಳಿ ಕರ್ನಾಟಕಕ್ಕೂ ಇದೇ ರೀತಿಯ ಮುನ್ಸೂಚನೆಯನ್ನು ನೀಡಲಾಗಿದೆ.

ಮೇ 21 ಮತ್ತು 22 ರಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯನ್ನು ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಬುಲೆಟಿನ್ ಹೇಳಿದೆ. ಮೋಡ ಕವಿದ ವಾತಾವರಣವಿರುವ ನಿರೀಕ್ಷೆಯಿದೆ. ವಾರಾಂತ್ಯದಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನವು 22 ರಿಂದ 33 ರ ನಡುವೆ ಇರುವ ಸಾಧ್ಯತೆಯಿದೆ ಎಂದು ಹೇಳಿದೆ.
ಬೆಂಗಳೂರಿನಲ್ಲಿ ಒಂದು ವಾರದಿಂದ ಆರ್ದ್ರ ವಾತಾವರಣ ಮುಂದುವರೆದಿದೆ. ಗುರುವಾರ, ಮೇ 18 ರ ಹೊತ್ತಿಗೆ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂಡಿಯಾ ಟುಡೇ ಪ್ರಕಾರ, ಇದು ಬೇಸಿಗೆಯಲ್ಲಿ ನಗರದಲ್ಲಿರುವ ಸರಾಸರಿ ತಾಪಮಾನಕ್ಕಿಂತ ಎರಡು ಡಿಗ್ರಿ ಹೆಚ್ಚಾಗಿದೆ.

ಹವಾಮಾನ ಇಲಾಖೆಯ ಮಾಹಿತಿಯಂತೆ ಶನಿವಾರ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸುರಿಯುತ್ತಿದೆ. ಕಾಕತಾಳೀಯವೆಂಬಂತೆ ಇಂದು ಬೆಳಿಗ್ಗೆ ಸಿದ್ದರಾಮಯ್ಯನವರು ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅವರ ಸಂಪುಟದಲ್ಲಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ನೇಮಕವಾಗಿದ್ದಾರೆ. ಎಂಟು ಜನರನ್ನು ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಇದೇ ಸಂದರ್ಭವನ್ನು ಬಳಸಿಕೊಂಡಿರುವ ಸಿದ್ದರಾಮಯ್ಯ ಬೆಂಬಲಿಗರು ಇದು ಶುಭ ಸಂಕೇತವೆಂದು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಪ್ರಾಯಪಟ್ಟಿದ್ದಾರೆ.












Click it and Unblock the Notifications