Rain Alert: ಮುಂದಿನ ನಾಲ್ಕು ದಿನ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು, ಅಕ್ಟೋಬರ್‌ 24: ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನರು ಕಂಗಾಲಾಗಿದ್ದಾರೆ. ಈ ಬೆನ್ನಲ್ಲೇ ಇಂದು (ಗುರುವಾರ) ಸೇರಿ ಇನ್ನೂ ನಾಲ್ಕು ನಾಲ್ಕು ದಿನ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇಂದು ಬೆಳಗ್ಗೆಯೇ ಸತತ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ.

heavy rain in bengaluru for 4 more days

ನಿರಂತರ ಮಳೆಯಿಂದ ಉದ್ಯಮಗಳು ಹಾಗೂ ಉದ್ಯೋಗಿಗಳ ಮೇಲೆ ಪರಿಣಾಮ: ಸಮಿತಿ ರಚನೆ

ನಿರಂತರ ಮಳೆಯಿಂದಾಗಿ ಬೆಂಗಳೂರು ನಗರದಲ್ಲಿನ ಐಟಿ ಕಂಪೆನಿಗಳು ಸೇರಿದಂತೆ ಉದ್ಯಮಗಳ ಮೇಲೆ ಉಂಟಾಗಿರುವ ಗಂಭೀರ ಪರಿಣಾಮಗಳನ್ನು ಸರ್ಕಾರ ಅತ್ಯಂತ ತೀವ್ರವಾಗಿ ಗಮನಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರು ನಗರ ಮತ್ತು ನಗರದ ನಿವಾಸಿಗಳಿಗೆ ತೀವ್ರ ಸವಾಲುಗಳಿಗೆ ಕಾರಣವಾಗಿರುವ ವಾತಾವರಣ ವೈಪರೀತ್ಯದಿಂದಾಗಿ 92 ಮಿಮೀ ನಿಂದ 157 ಮಿಮೀ ನಷ್ಟು ಭಾರೀ ಮಳೆಯಾಗಿ ಜನಜೀವನ ಜರ್ಜರಿತವಾಗಿದೆ, ಇದರ ಪರಿಣಾಮದಿಂದಾಗಿ ಐಟಿ ಕಂಪೆನಿಗಳು ಹಾಗೂ ಉದ್ಯೋಗಿಗಳು ತೊಂದರೆಗೀಡಾಗಿದ್ದಾರೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮನಗೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದ್ದಾರೆ ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಅದರಂತೆ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಪರಿಹಾರೋಪಾಯಗಳನ್ನು ಕಲ್ಪಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದ್ದು, ಈ ಸಮಿತಿಯು ಐಟಿ, ಬಿಟಿ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್‌ಗಳ ಮುಖ್ಯಸ್ಥರನ್ನು ಸಹ ಒಳಗೊಂಡಿದೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರದ ಮೂಲಸೌಕರ್ಯವನ್ನು ಬಲಪಡಿಸಲು ತಕ್ಷಣದ, ಅಲ್ಪಾವಧಿಯ ಮತ್ತು ದೀರ್ಘಾವಧಿಯ ಪರಿಹಾರಗಳನ್ನು ಚರ್ಚಿಸಿ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲು ಮತ್ತು ತುರ್ತಾಗಿ ಇವುಗಳನ್ನು ಕಾರ್ಯಗತಗೊಳಿಸಲು ಕೈಗಾರಿಕೆಗಳು, ಕಾರ್ಪೊರೇಟ್‌ಗಳು, ಉದ್ಯಮ ಸಂಘಗಳು, ವ್ಯಾಪಾರ ಪಾರ್ಕ್ ಸಂಘಗಳು ಮತ್ತು ನಾಗರಿಕ ಗುಂಪುಗಳೊಂದಿಗೆ ಕೂಡಲೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿಯೂ ಸಚಿವ ಪ್ರಿಯಾಂಕ್ ಖರ್ಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+