ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಕರಾವಳಿಯಲ್ಲಿ ಜೂನ್ 13ರ ತನಕ ಮಳೆ

|
Google Oneindia Kannada News

ಬೆಂಗಳೂರು, ಜೂನ್ 09; ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 10 ರಿಂದ 13ರ ತನಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಈಗಾಗಲೇ ರಾಜ್ಯ ಪ್ರವೇಶಿಸಿದರೂ ಮಳೆಯಾಗುತ್ತಿಲ್ಲ.

ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಗಾರು ರಾಜ್ಯಕ್ಕೆ ಪ್ರವೇಶವಾದ ಮೇಲೆ ಎರಡು ದಿನಗಳ ಕಾಲ ಮಳೆಯಾಗಿತ್ತು, ಬಳಿಕ ಮಳೆ ಕಡಿಮೆಯಾಗಿದೆ.

ಕೊಡಗಿನ ಹೋಬಳಿವಾರು ಮಳೆ ವಿವರ, ಹಾರಂಗಿ ನೀರಿನ ಮಟ್ಟ ಎಷ್ಟು? ಕೊಡಗಿನ ಹೋಬಳಿವಾರು ಮಳೆ ವಿವರ, ಹಾರಂಗಿ ನೀರಿನ ಮಟ್ಟ ಎಷ್ಟು?

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಈ ವಾರ ಪೂರ್ತಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಅವಧಿಯಲ್ಲಿ ರಾಜ್ಯದ 23 ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಮುಂಗಾರು ಆಗಮನ; ಮಲೆನಾಡು, ಕರಾವಳಿ ಪ್ರದೇಶಗಳಿಗೆ ಮಳೆ ಸೂಚನೆಮುಂಗಾರು ಆಗಮನ; ಮಲೆನಾಡು, ಕರಾವಳಿ ಪ್ರದೇಶಗಳಿಗೆ ಮಳೆ ಸೂಚನೆ

rain

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ನೈಋತ್ಯ ಮುಂಗಾರು: ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಅಧಿಕ ಮಳೆನೈಋತ್ಯ ಮುಂಗಾರು: ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಅಧಿಕ ಮಳೆ

ಸೋಮವಾರ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿತ್ತು. ರಾಯಚೂರು ಜಿಲ್ಲೆಯ ಮುದ್ಗಲ್‌ನಲ್ಲಿ 2 ಸೆಂ. ಮೀ., ಉತ್ತರ ಕನ್ನಡದ ಕದ್ರಾ ಮತ್ತು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ 1 ಸೆಂ. ಮೀ. ಮಳೆಯಾಗಿತ್ತು.

Recommended Video

ಹವಾಮಾನ ಇಲಾಖೆಯಿಂದ ಎಚ್ಚರಿಕೆಯ ಸೂಚನೆ! | Oneindia Kannada

ಮಂಗಳವಾರ ಕೊಡಗು ಜಿಲ್ಲೆಯ ಪೊನ್ನಂಪೇಟೆ, ತಿತಿಮತಿ ಮತ್ತು ಮಡಿಕೇರಿಯಲ್ಲಿ ಸಾಧಾರಣ ಮಳೆಯಾಗಿದೆ. ಕಾರವಾರ ಮತ್ತು ಶಿರಸಿಯಲ್ಲಿ ಜಿಟಿಜಿಟಿ ಮಳೆ ಸುರಿದಿದೆ. ದಾಂಡೇಲಿ, ಜೋಯಿಡಾ, ಅಂಕೋಲಾ, ಸಿದ್ದಾಪುರ, ಹೊನ್ನಾವರ ಮತ್ತು ಗೋಕರ್ಣ ಸುತ್ತಮುತ್ತಲೂ ಮಳೆಯಾಗಿದೆ.

English summary
Karnataka Karavali region may get heavy rain from June 10 to 13. The India Meteorological Department (IMD) has predicted heavy rain and Yellow alert has also been issued.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X