ಜೂನ್ 24ರಿಂದ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು, ಜೂನ್ 22 : ಕರ್ನಾಟಕಕ್ಕೆ ಮುಂಗಾರು ನಿಗದಿತ ವೇಳೆಗೆ ಆಗಮಿಸಿದರೂ ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಕರಾವಳಿ, ಮಲೆನಾಡು ಭಾಗದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಜೂನ್ 24ರಿಂದ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಈ ಕುರಿತು ಮಾಹಿತಿ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜೂನ್ 24 ರಿಂದ ತಿಂಗಳ ಅಂತ್ಯದ ತನಕ ಧಾರಾಕಾರ ಮಳೆ ಸುರಿಯಲಿದೆ.
ಕರ್ನಾಟಕದಲ್ಲಿ ಮುಂಗಾರು ದುರ್ಬಲ: ದೆಹಲಿಯಲ್ಲಿ ಭಾರಿ ಮಳೆ ಶುರು
ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗುತ್ತಿದೆ. ಇದರ ಪ್ರಭಾವದಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಸೋಮವಾರ ಮಧ್ಯಾಹ್ನ ಬೆಂಗಳೂರು ನಗರದಲ್ಲಿ ದಟ್ಟವಾದ ಮೋಡ ಕವಿದಿದ್ದು ಕೆಲವು ಬಡಾವಣೆಗಳಲ್ಲಿ ತುಂತುರು ಮಳೆಯಾಗಿದೆ.
ಕೊಡಗಿನಲ್ಲಿ ಬಿರುಸು ಪಡೆದುಕೊಂಡಿದೆ ಮುಂಗಾರು ಮಳೆ
ಜೂನ್ 10ರ ಬಳಿಕ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯಾಗುತ್ತಿತ್ತು. ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಮಹಾರಾಷ್ಟ್ರದಲ್ಲಿಯೂ ಮಳೆ ಕಡಿಮೆಯಾಗಿದ್ದು, ಬೆಳಗಾವಿಯಲ್ಲಿ ಮುಳುಗಡೆಯಾಗಿದ್ದ 6 ಬ್ಯಾರೇಜ್ ಸಂಚಾರಕ್ಕೆ ಮುಕ್ತವಾಗಿವೆ.
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲೀಗ ಹಿಮದ ಮಳೆ...
ದಕ್ಷಿಣ ಕನ್ನಡ, ಉಡುಪಿ, ಕೊಪ್ಪ ಸುತ್ತಮುತ್ತ ಭಾನುವಾರ ಸಾಧಾರಣ ಮಳೆಯಾಗಿದೆ. ಚಿತ್ರದುರ್ಗದ ಹೊಳಲ್ಕೆರೆ ಪಟ್ಟಣ ಮತ್ತು ಸುತ್ತಮುತ್ತ ಮಳೆಯಾಗಿದೆ. ದಾವಣಗೆರೆಯ ಮಲೆಬೆನ್ನೂರಿನಲ್ಲಿ ಎರಡು ಗಂಟೆ ಮಳೆ ಸುರಿದಿದೆ.
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಗಾಜನೂರಿನ ತುಂಗಾ ಜಲಾಶಯದಿಂದ ಸುಮಾರು 2 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.