ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಆಗಸ್ಟ್ 17 : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 20ರ ತನಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿಯ ಕಿರಿ ಮಂಜೇಶ್ವರ ಬಳಿ ಮೀನುಗಾರಿಕೆಗೆ ತೆರಳಿದ್ದ ನಾಲ್ವರು ನಾಪತ್ತೆಯಾಗಿದ್ದಾರೆ.
Recommended Video
ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 20ರ ತನಕ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣ ನದಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಕೊಯ್ನಾ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಭಾನುವಾರ 35 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಹರಿದು ಬರುವ ನೀರಿನ ಮಟ್ಟದಲ್ಲಿ ಇನ್ನೂ ಏರಿಕೆಯಾಗಲಿದೆ. ಇದರಿಂದಾಗಿ ಕೃಷ್ಣಾ ನದಿ ಪಾತ್ರದ ಜಿಲ್ಲೆಗಳ ಜನರಲ್ಲಿ ಪ್ರವಾಹದ ಆತಂಕ ಎದುರಿಸುತ್ತಿದ್ದಾರೆ.
ನಾಲ್ವರು ನಾಪತ್ತೆ : ಕಿರಿಮಂಜೇಶ್ವರ ಸಮೀಪದ ಕೊಡೇರಿಯಿಂದ ಭಾನುವಾರ ಮೀನುಗಾರಿಕೆಗೆ ತೆರಳಿದ್ದ ನಾಲ್ವರು ನಾಪತ್ತೆಯಾಗಿದ್ದಾರೆ. ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮುಗುಚಿದೆ. ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ. ಭಾನುವಾರ ಸಂಜೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ. ನಗರದಲ್ಲಿ ಮಳೆಯಾಗದಿದ್ದರೂ ಉಷ್ಣಾಂಶ ಕುಸಿದಿದೆ.












Click it and Unblock the Notifications