ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜು. 27ರ ತನಕ ಮಳೆ

|
Google Oneindia Kannada News

ಬೆಂಗಳೂರು, ಜುಲೈ 25; ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜುಲೈ 27ರ ತನಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 3.7 ಮೀಟರ್ ನಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಮಳೆ ಆರ್ಭಟಕ್ಕೆ ಕೆರೆಯಂತಾದ ನವುಲೆ ಕ್ರಿಕೆಟ್ ಸ್ಟೇಡಿಯಂಮಳೆ ಆರ್ಭಟಕ್ಕೆ ಕೆರೆಯಂತಾದ ನವುಲೆ ಕ್ರಿಕೆಟ್ ಸ್ಟೇಡಿಯಂ

ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಹ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 26ರ ನಂತರ ಮಳೆ ಕಡಿಮೆಯಾಗಲಿದೆ.

 ರಾಜ್ಯಾದ್ಯಂತ ಅಬ್ಬರದ ಮಳೆ, ಒಟ್ಟು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ರಾಜ್ಯಾದ್ಯಂತ ಅಬ್ಬರದ ಮಳೆ, ಒಟ್ಟು 7 ಜಿಲ್ಲೆಗಳಿಗೆ ರೆಡ್ ಅಲರ್ಟ್

Heavy Rain In Karnataka Karavali Till July 26

ಜುಲೈ 26ರ ಸೋಮವಾರದ ಬಳಿಕ ಹಲವು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಿಡಿಯೋ; ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ ವಿಡಿಯೋ; ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ

ಶನಿವಾರವೇ ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ನದಿಗಳಿಗೆ ಹರಿದು ಬರುವ ನೀರಿನ ಪ್ರಮಾಣ ಇಳಿಕೆಯಾಗಿಲ್ಲ.

ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದೆ. ತುಂಗ ಮತ್ತು ಭದ್ರಾ ನದಿಗಳು ತುಂಬಿ ಹರಿಯುತ್ತಿವೆ. ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ಜಲಾಶಯಕ್ಕೆ 12 ಟಿಎಂಸಿ ಅಡಿ ನೀರು ಬಂದಿದೆ.

ಜಲಾಶಯದ ಒಳಹರಿವು 1.73 ಸಾವಿರ ಕ್ಯುಸೆಕ್ ಆಗಿದ್ದು, ಜಲಾಶಯದ ಪೂರ್ಣ ಮಟ್ಟ 1,633 ಅಡಿ. ಈಗ ಜಲಾಶಯದಲ್ಲಿ 1,628 ಅಡಿ ನೀರಿನ ಸಂಗ್ರಹವಿದೆ. 10 ಗೇಟ್ ಮೂಲಕ 17 ಸಾವಿರ ಕ್ಯುಸೆಕ್ ನೀರನ್ನು ಭಾನುವಾರ ನದಿಗೆ ಬಿಡಲಾಗಿದೆ.

Recommended Video

ಖಚಡ ಮಂತ್ರಿಗಳಿಂದ ಯಡಿಯೂರಪ್ಪನಿಗೆ ಸಂಕಷ್ಟ | Oneindia Kannada

English summary
The India Meteorological Department (IMD) has predicted heavy rain in Karnataka Karavali till July 26, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X