ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಸುರಿಯಲಿದೆ ಭಾರಿ ಮಳೆ
Recommended Video
ಬೆಂಗಳೂರು, ಡಿಸೆಂಬರ್ 13: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈಗಾಗಲೇ ಕಳೆದ 20 ಗಂಟೆಗಳಿಂದ ದೆಹಲಿಯಲ್ಲಿ ಮಳೆ ಸುರಿಯುತ್ತಿದ್ದು, ಗುರುವಾರ ಕನಿಷ್ಠ 12.8ಡಿಗ್ರಿ ಸೆಲ್ಸಿಯಸ್, ಗರಿಷ್ಠ 21.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಆನಂದ ವಿಹಾರ್, ಪಂಜಾಬಿ ಭಾಗ್, ಲೋಧಿ ರಸ್ತೆ, ಇಂಡಿಯಾ ಗೇಟ್ ಸೇರಿದಂತೆ ಹಲವೆಡೆ ಮಳೆಯಾಗಿದೆ.
ಸಂಜೆ 8.30ರವರೆಗೆ 1.9 ಮಿ.ಮೀನಷ್ಟು ಮಳೆಯಾಗಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಹಿಮಪಾತ ಮುಂದುವರೆದಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಹೆಚಚ್ಇನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಹೊರವಲಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಬೆಂಗಳೂರು ನಗರದಲ್ಲಿ ಗರಿಷ್ಠ 28.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.4 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 28.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16.6 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.












Click it and Unblock the Notifications