Karnataka Rains: ರಾಜ್ಯದಲ್ಲಿ ಧಾರಾಕಾರ ಮಳೆ ಶಾಲೆಗಳಿಗೆ ನಾಳೆ ರಜೆ!

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಿಂದಲೂ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈ ನಡುವೆ ಕರಾವಳಿ ಹಾಗೂ ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಸೋಮವಾರ ಜೂನ್ 16ರಂದು ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾವ ಜಿಲ್ಲೆಗಳಲ್ಲಿ ನಾಳೆಯ ದಿನ ಶಾಲಾ - ಕಾಲೇಜುಗಳಿಗೆ ರಜೆ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಪಡೆದುಕೊಂಡಿದೆ. ರಾಜ್ಯದ ವಿವಿಧ ಭಾಗದಲ್ಲಿ ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದು ಈ ವಾರವೂ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು. ಶಾಲಾ ಮಕ್ಕಳಿಗೆ ರಜೆ ಘೋಷಿಸಲಾಗುತ್ತಿದೆ. ಅದೇ ರೀತಿ ಸೋಮವಾರವೂ ವಿವಿಧ ಹಾಗೂ ನಾಲ್ಕು ಪ್ರಮುಖ ಜಿಲ್ಲೆಗಳು ಸೇರಿದಂತೆ ವಿವಿಧ ಭಾಗದಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಅದು ಎಲ್ಲೆಲ್ಲಿ ಅಂತ ಮುಂದಿದೆ.

Heavy rain in Karnataka schools to be closed on June 16th and 17th

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾಗುತ್ತಿದೆ. ಧಾರಾಕಾರ ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಉಡುಪಿ , ಮಂಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಜಿಲ್ಲಾಡಳಿತವು ಸೋಮವಾರ ಜೂನ್‌ 16 ರಂದು ಶಾಲೆಗಳಿಗೆ ರಜೆ ನೀಡಿರುವುದಾಗಿ ಅಧಿಕೃತ ಮಾಹಿತಿ ನೀಡಿದೆ. ನಾಳೆ ರಜೆ ಇರಲಿದೆ ಎಂದು ಈ ಜಿಲ್ಲೆಗಳ ಜಿಲ್ಲಾಡಳಿತವು ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಯಾವ ರೀತಿ ಇದೆ ಹಾಗೂ ಎಲ್ಲೆಲ್ಲಿ ಶಾಲೆಗಳಿಗೆ ರಜೆ ಎನ್ನುವ ಇನ್ನಷ್ಟು ವಿಸ್ತಾರವಾದ ಮಾಹಿತಿ ಮುಂದಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಹೀಗಾಗಿ, ಈ ಭಾಗದಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಸೋಮವಾರ ರಜೆ ಇರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಫ್ರೌಡ ಶಾಲೆಯ ವಿದ್ಯಾರ್ಥಿಗಳಿಗೆ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ಆದೇಶ ಹೊಡಿಸಿದ್ದಾರೆ. ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಹೀಗಾಗಿ ಈ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಪದೇ ಪದೇ ರಜೆ ಘೋಷಣೆ ಮಾಡಲಾಗುತ್ತಿದೆ.

ಇನ್ನು ಕರಾವಳಿಯ ಮತ್ತೊಂದು ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು ಈ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಜಿಲ್ಲೆಯಲ್ಲಿ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ಮಕ್ಕಳಿಗೆ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+