ಸೆಪ್ಟೆಂಬರ್ 11ರ ತನಕ ಕರ್ನಾಟಕದಲ್ಲಿ ಮಳೆ
ಬೆಂಗಳೂರು, ಸೆಪ್ಟೆಂಬರ್ 09 : ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದೆ. ಸೆಪ್ಟೆಂಬರ್ 11ರ ತನಕ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Recommended Video
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ಮಂಗಳವಾರ ಸಂಜೆ ಭಾರಿ ಮಳೆಯಾಗಿದೆ. ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆ 9 ಗಂಟೆ ತನಕ ಬಂದಿದೆ. ಬುಧವಾರ ಸಹ ನಗರದಲ್ಲಿ ಮಳೆಯಾಗಲಿದೆ.

ದಾವಣಗೆರೆ, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರದಲ್ಲಿಯೂ ಮುಂದಿನ 24 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಮಂಗಳವಾರ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿಚಖಂಡಿ ಕೆ. ಡಿ. ಗ್ರಾಮದ ಬಾಲಕ ದರ್ಶನ್ ಫಕೀರಪ್ಪ ಮಾದರ (14) ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಹೊಲದಲ್ಲಿ ಕುರಿ ಕಾಯುತ್ತಿದ್ದಾಗ ಸಿಡಿಲು ಬಡಿದಿದೆ.
ಕಲಬುರಗಿ ನಗರ ಮತ್ತು ಜಿಲ್ಲೆಯ ಚಿಂಚೋಳಿ, ಕಾಳಗಿ, ಯಡ್ರಾಮಿಯಲ್ಲಿ ಮಂಗಳವಾರ ಮಳೆಯಾಗಿದೆ. ಚಿಂಚೋಳಿ ತಾಲೂಕಿನ ಚಿಮ್ಮನಚೋಡ ಬಳಿಯ ನೆಲಗಂಗಿ ಜಲಪಾತ ಉಕ್ಕಿ ಹರಿಯುತ್ತಿದೆ.












Click it and Unblock the Notifications