Karnataka Rain: ಯುಗಾದಿ ಸಂಭ್ರಮ ಹೆಚ್ಚಿಸಿದ ಮಳೆ; ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಹಲವು ಕಡೆಗಳಲ್ಲಿ ಆರಂಭವಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಯುಗಾದಿ ಹಬ್ಬದ ದಿನವಾದ ಭಾನುವಾರ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದ್ದು ಜನರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ.

ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಿದೆ. ಭಾನುವಾರ ಸಂಜೆ ಹುಬ್ಬಳ್ಳಿ ನಗರದಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಿದ್ದು ರಸ್ತೆಗಳು ತುಂಬಿ ಹರಿದವು. ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವಂತಾಗಿತ್ತು.

Heavy rain in many districts karnataka on yugadi festival day

ಅವಳಿ ನಗರಗಳಾದ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಭಾನುವಾರ ಸಂಜೆ ಉತ್ತಮ ಮಳೆಯಾಗಿದೆ. ಧಾರವಾಡದಲ್ಲಿ ಕೂಡ ಭಾರಿ ಮಳೆಯಾಗಿದ್ದು ಬೇಸಿಗೆ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪೆರೆದಿದೆ. ಬೆಳಗಾವಿ ಜಿಲ್ಲೆಯ ಹಲವು ಕಡೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಿದೆ.

ಹವ್ಯಾಸಿ ಹವಾಮಾನ ವೀಕ್ಷಕ ರವಿಕೀರ್ತಿಗೌಡ ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ಆಗಿರುವ ಮಳೆಯ ವರದಿಯನ್ನು ಹಂಚಿಕೊಂಡಿದ್ದಾರೆ. ಭಾನುವಾರ ರಾತ್ರಿ 9.30ರ ವೇಳೆಗೆ ಧಾರವಾಡ ಜಿಲ್ಲೆಯ ಮುಗದದಲ್ಲಿ 39 ಮಿ. ಮೀ ಮಳೆಯಾಗಿದೆ. ಮಮ್ಮಿಗಟ್ಟಿಯಲ್ಲಿ 31 ಮಿ. ಮೀ ಮಳೆಯಾಗಿದ್ದು, ಬೆಣಚಿಯಲ್ಲಿ 28 ಮಿ. ಮೀ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಭವಿಹಾಲ್‌ನಲ್ಲಿ 32 ಮಿ. ಮೀ ಮಳೆಯಾಗಿದ್ದು, ತುರಕರ್ಶಿಗಿಹಳ್ಳಿಯಲ್ಲಿ 28.50 ಮಿ. ಮೀ ಮಳೆಯಾಗಿದೆ ಎಂದು ತಿಳಿಸಿದ್ದಾರೆ. ಇಷ್ಟಲ್ಲದೆ ಗದಗ, ಬಾಗಲಕೋಟೆ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿದೆ.

ವ್ಯಾಪಕ ಮಳೆ ಸಾಧ್ಯತೆ

ಭಾನುವಾರ ರಾತ್ರಿ ಬಾಗಲಕೋಟೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಬೆಂಗಳೂರು ಮುನ್ಸೂಚನೆ ನೀಡಿದೆ. ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಾರ್ಚ್ ಎರಡನೇ ವಾರದಿಂದಲೇ ರಾಜ್ಯದ ಹಲವು ಕಡೆಗಳಲ್ಲಿ ವಸಂತ ಮಳೆ ಆರಂಭವಾಗಿದೆ. ಕೊಡಗು, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಚಾಮರಾಜನಗರ, ತುಮಕೂರು ಜಿಲ್ಲೆಯ ಹಲವು ಕಡೆಗಳಲ್ಲಿ ಈಗಾಗಲೇ ಮಳೆಯಾಗಿದೆ.

ಈ ಬಾರಿ ಪೂರ್ವ ಮುಂಗಾರು ಮಳೆ ಉತ್ತಮವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್‌ನಿಂದ ಜೂನ್‌ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದ್ದು, ಈ ಬಾರಿ ಹಿಂಗಾರು ಮಳೆ ದುರ್ಬಲವಾಗಿರಬಹುದು ಎಂದು ಅಂದಾಜಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+