ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಕರ್ನಾಟಕದಲ್ಲಿ ಅಬ್ಬರಿಸಿದ ವರುಣ: ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ

|
Google Oneindia Kannada News

ಕಲಬುರಗಿ, ಸೆಪ್ಟೆಂಬರ್ 27: ಉತ್ತರ ಕರ್ನಾಟಕ ಭಾಗದ ಹಲವೆಡೆ ವರುಣನ ಆರ್ಭಟ ಮತ್ತೆ ಮುಂದುವರೆಸಿದ್ದು. ಭಾರೀ ಮಳೆಯಿಂದಾಗಿ ಕಲಬುರಗಿ, ವಿಜಯಪುರ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಮತ್ತೆ ಪ್ರವಾಹ ಸಾಧ್ಯತೆ ಉಂಟಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಬಿಟ್ಟುಬಿಡದೇ ಮಳೆ ಸುರಿಯುತ್ತಿದ್ದು, ರಸ್ತೆಗಳಲ್ಲಿ ಮೊಳಕಾಲಿನವರೆಗೂ ನೀರು ಹರಿಯುತ್ತಿದೆ. ತಗ್ಗು ಪ್ರದೇಶದ ಮನೆಗಳೆಲ್ಲಾ ಜಲಾವೃತವಾಗಿ ಜನ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಮನೆಗಳಿಗೆ ನಿರಂತರ ನೀರು ನುಗ್ಗುತ್ತಿದ್ದು, ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಬಹುತೇಕ ಭಾಗ ಜಲಾವೃತವಾಗಿದೆ.

ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ, ತುಂಬಿವೆ ಜಲಾಶಯಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ, ತುಂಬಿವೆ ಜಲಾಶಯ

ವಿಜಯಪುರ ಜಿಲ್ಲೆಯಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದ್ದು, ಎರಡು ದಿನಗಳಿಂದ ಶುರುವಾದ ಮಳೆ ಇದುವರೆಗೂ ನಿಂತಿಲ್ಲ. ಮುದ್ದೇಬಿಹಾಳ, ಬಸವನಬಾಗೇವಾಡಿ, ದೇವರಹಿಪ್ಪರಗಿ, ತಾಳಿಕೋಟಿ ಹಾಗೂ ಸಿಂದಗಿ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ.

ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ

ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ

ಭಾರಿ ಮಳೆಗೆ ವಿಜಯಪುರ ಜಿಲ್ಲೆಯಲ್ಲಿ 135 ಮನೆಗಳು ಬಿದ್ದಿದ್ದು, ಸಾವಿರಾರು ಹೆಕ್ಟೆರ್ ಬೆಳೆಗಳು ಜಲಾವೃತಗೊಂಡಿದೆ. ಡೋಣಿ ಮತ್ತು ಭೀಮಾ ನದಿ ಮತ್ತೆ ಉಕ್ಕಿ ಹರಿಯುತ್ತಿವೆ. ಹಡಗಿನಾಳ, ಶಿವಪುರ, ಮೂಕಿಹಾಳ, ನಾಗೂರು, ಹರನಾಳ ಸೇರಿದಂತೆ 8 ಗ್ರಾಮಗಳು ತಾಳಿಕೋಟೆ ಸಂಪರ್ಕವನ್ನು ಕಡಿದುಕೊಂಡಿವೆ. ಆದರೂ ಮೈದುಂಬಿ ಹರಿಯುತ್ತಿರುವ ಸೇತುವೆ ಮೇಲೆ ಜನ ಹುಚ್ಚು ಸಾಹಸ ಮಾಡುತ್ತಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯ ಭೀಮಾ ಹಾಗೂ ಕಾಗಿಣಾ ನದಿಗಳು ಉಕ್ಕಿ ಹರಿಯುತ್ತಿವೆ. ಕಾಗಿಣಾ ನದಿಯಲ್ಲಿ ಮೀನು ಹಿಡಿಯಲು ಹೋದ ಸಂಜೀವ್ ಕುಮಾರ್ ನದಿಯ ಪಾಲಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ತಗ್ಗು ಪ್ರದೇಶದಲ್ಲಿನ ಹಲವು ಮನೆಗಳು ಜಲಾವೃತ

ತಗ್ಗು ಪ್ರದೇಶದಲ್ಲಿನ ಹಲವು ಮನೆಗಳು ಜಲಾವೃತ

ಕಲಬುರಗಿ ಜಿಲ್ಲೆಯ ನೀಲಕಂಠೇಶ್ವರ ದೇವಾಲಯ ಮತ್ತೆ ಮುಳುಗಡೆಯಾಗಿದ್ದು, ಧಾರಾಕಾರ ಮಳೆಗೆ ಜಿಲ್ಲೆಯ ಬಹುತೇಕ ಸೇತುವೆಗಳು ಜಲಾವೃತಗೊಂಡಿವೆ. ತೊಗರಿ, ಹೆಸರು, ಉದ್ದು ಸೇರಿದಂತೆ ಅಪಾರ ಪ್ರಮಾಣದ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿವೆ. ತಗ್ಗು ಪ್ರದೇಶದಲ್ಲಿನ ಹಲವು ಮನೆಗಳು ಜಲಾವೃತಗೊಂಡಿವೆ.

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆ ಕಡಿಮೆಯಾಗಿದ್ದು, ಪ್ರವಾಜ ಇಳಿಮುಖವಾಗಿದೆ. ಸಮುದ್ರದ ಅಬ್ಬರ ಮಾತ್ರ ವಿಪರೀತವಾಗಿದೆ. ಉಡುಪಿ ಜಿಲ್ಲೆಯ ಉದ್ದಕ್ಕೂ ಭಾರಿ ಪ್ರಮಾಣದ ನೀರು ಸಮುದ್ರ ಸೇರಿರುವುದರಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ನಾಡದೋಣಿ ಮೀನುಗಾರರು ಆತಂಕದಿಂದ ಸಮುದ್ರಕ್ಕೆ ಇಳಿದಿಲ್ಲ. ಬೋಟುಗಳನ್ನು ದಡದಲ್ಲಿ ಲಂಗರು ಹಾಕಿಸಿದ್ದಾರೆ.

ಯಾದಗಿರಿ-ಸೇಡಂಗೆ ಸಂಪರ್ಕ ಕಲ್ಪಿಸುವ ರಸ್ತೆ ಮುಳುಗಡೆ

ಯಾದಗಿರಿ-ಸೇಡಂಗೆ ಸಂಪರ್ಕ ಕಲ್ಪಿಸುವ ರಸ್ತೆ ಮುಳುಗಡೆ

ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಬೀದರ್ ಜಿಲ್ಲೆ ತತ್ತರಿಸಿ ಹೋಗಿದ್ದು, ಜಿಲ್ಲೆಯ ಜೀವನದಿ ಮಾಂಜ್ರಾ ಉಕ್ಕಿ ಹರಿಯುತ್ತಿದೆ. ಔರಾದ್, ಕಲಾನಗರ ಹಾಗೂ ಬೀದರ್ ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗ್ತಿದೆ. ಲಕ್ಷಾಂತರ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. ಮಹಾಮಳೆಯಿಂದಾಗಿ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ.

ಯಾದಗಿರಿ ಜಿಲ್ಲೆಯಾದ್ಯಂತ ಕೂಡ ಭಾರೀ ಮಳೆಯಾಗುತ್ತಿದ್ದು, 30ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ನಾಗನೂರ ಗ್ರಾಮದ ರಸ್ತೆ ಜಲಾವೃತಗೊಂಡಿದೆ. ಕೊಟಗೇರಾ ರಸ್ತೆ ಜಲಾವೃತಗೊಂಡಿದೆ. ಯಾದಗಿರಿ-ಸೇಡಂಗೆ ಸಂಪರ್ಕ ಕಲ್ಪಿಸುವ ರಸ್ತೆ ಮುಳುಗಡೆಯಾಗಿದ್ದು, ಜನ ಅಪಾಯದ ನಡುವೆ ಸಂಚರಿಸುತ್ತಿದ್ದಾರೆ.

Recommended Video

ಸ್ಮಾರ್ಟ್ ತಂತ್ರಜ್ಞಾನದೊಂದಿಗೆ DL RC | Oneindia Kannada
ರಾಜ್ಯದಲ್ಲಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮಳೆ ಮುನ್ಸೂಚನೆ

ಇನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೆ ವರುಣ ಅಬ್ಬರಿಸ್ತಿದ್ದು ಮುಧೋಳದ ಹಳ್ಳದಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿಹೋಗಿ ಸಾವನ್ನಪ್ಪಿದ್ದಾರೆ. ಹಾಲು ತರಲು ಬೈಕ್ ನಲ್ಲಿ ಹೊರಟಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇನ್ನು ಕಾಡರಕೊಪ್ಪ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದೆ. ತುಳಸಿಗೇರಿ ಆಂಜನೇಯ ದೇವಸ್ಥಾನ ಆವರಣ, ಯಾತ್ರಿನಿವಾಸ, ರಸ್ತೆ, ಹೋಟೆಲ್‍ಗಳು, ಕಾಯಿ ಅಂಗಡಿಗಳು ಜಲಾವೃತಗೊಂಡಿದೆ. ಆದರೂ ಭಕ್ತರು ನೀರನಲ್ಲಿಯೇ ಬಂದು ದೇವರ ದರ್ಶನ ಮಾಡಿತ್ತಿದ್ದಾರೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಮಳೆ ಮತ್ತೆ ಮುಂದುವರೆಯಲಿದೆ.

English summary
Heavy Rainfall continues in across North Karnataka. Heavy rains have caused flooding in Kalaburagi, Vijayapura, Raichur and Bagalakote districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X