ಚಿತ್ರಗಳು : ರಾಯಚೂರಿನಲ್ಲಿ ಮಳೆಯ ಅವಾಂತರ

By: ನಮ್ಮ ಪ್ರತಿನಿಧಿ
Subscribe to Oneindia Kannada

ರಾಯಚೂರು, ಅಕ್ಟೋಬರ್ 11 : ರಾಯಚೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ದೇವದುರ್ಗ ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿ ಜನರ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ರಾಯಚೂರು ಜಿಲ್ಲೆಯ ಹಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿದ್ದು, ರಸ್ತೆ ಮೇಲೆ ನೀರು ಹರಿಯುತ್ತಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ.

rain

ದೇವದುರ್ಗ ತಾಲೂಕಿನ ಹಿರೇಬೂದುರು ಹಾಗೂ ಮಶಾಳ ಗ್ರಾಮಗಳ ನಡುವಿನ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ರಾಯಚೂರು ತಾಲೂಕಿನ ಹೆಂಬೆರಾಳ ಹಳ್ಳ ತುಂಬಿದ್ದರಿಂದ ಸಂಪರ್ಕ ಕಡಿತಗೊಂಡಿದೆ.

raichur

ರಾಮನಗರ : ಮಂಗಳವಾರ ರಾತ್ರಿ ರಾಮನಗರ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ. ಕನಕಪುರ ತಾಲೂಕಿನ ಹಾರೋಹಳ್ಳಿ ಸಮೀಪದ ಗಾಣಾಳುದೊಡ್ಡಿ ಕೆರೆ ಕೋಡಿ ಒಡೆದು ರಸ್ತೆಗೆ ನೀರು ನುಗ್ಗಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಭಾರೀ ನೀರು ಹರಿಯುತ್ತಿತ್ತು. ಕನಕಪುರದಲ್ಲಿ 174 ಮಿ.ಮೀ.ನಷ್ಟು ಮಳೆಯಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Heavy rain lashed Raichur district. Road closed in many villages in Devadurga and Raichur taluk.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ