ಮುಂದಿನ 2 ದಿನಗಳಲ್ಲಿ ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು, ಜೂನ್ 15: ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ.
Recommended Video
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಚಿತ್ರದುರ್ಗ ಬೆಂಗಳೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣೆಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂದಿನ ಎರಡು ದಿನಗಳ ಕಾಲ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ನಷ್ಟಿರಲಿದೆ.
ಗೇರುಸೊಪ್ಪ, ಭಾಗಮಂಡಲ, ಕುಂದಾಪುರ, ಶಿರಾಲಿ, ಮೂಡಬಿದಿರೆ, ಗೋಕರ್ಣ, ಮಾಣಿ, ಸುಬ್ರಹ್ಮಣ್ಯ, ಹೊನ್ನಾವರ, ತಾಳಗುಪ್ಪ, ಸಕಲೇಶಪುರ, ಸೋಮವಾರಪೇಟೆ, ನಂಜನಗೂಡು, ಬೆಳಗಾವಿ, ಆನವಟ್ಟಿಯಲ್ಲಿ ಮಳೆಯಾಗಿದೆ.
ಇನ್ನು ಮಹಾರಾಷ್ಟ್ರಕ್ಕೆ ಈಗಾಗಲೇ ಮುಂಗಾರು ಪ್ರವೇಶವಾಗಿದ್ದು ಮುಂದಿನ ಐದು ದಿನಗಳ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೊಂಕಣ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಹಾಗೂ ವಿದರ್ಭಾದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ, ಇನ್ನು ಕೇರಳದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications