Get Updates
Get notified of breaking news, exclusive insights, and must-see stories!

Karnataka Rain: ಬಿಸಿಲಿನಿಂದ ಬಳಲಿದ್ದ ಉತ್ತರ ಕರ್ನಾಟಕದಲ್ಲಿ ಮಳೆ

ತಾಪಮಾನ ಹೆಚ್ಚಳದಿಂದ ಕಂಗೆಟ್ಟಿರುವ ಕರ್ನಾಟಕದ ಹಲವು ಭಾಗಗಳಲ್ಲಿ ಬೇಸಿಗೆಯಲ್ಲೇ ಮಳೆಯಾಗುತ್ತಿದ್ದು ಸ್ವಲ್ಪ ತಂಪಾಗಿಸುತ್ತಿದೆ. ಅದರಲ್ಲೂ ಬಿರು ಬೇಸಿಗೆ, ಹೆಚ್ಚು ತಾಪಮಾನ ಇರುವ ಉತ್ತರ ಕರ್ನಾಟಕ ಭಾಗದಲ್ಲಿ ಕೂಡ ಮಳೆಯಾಗುತ್ತಿರುವುದು ಸಮಾಧಾನ ತರಿಸಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಮಡಿಕೇರಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾದ ಬಳಿಕ, ಬೀದರ್, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಕೂಡ ಮಳೆಯಾಗಿತ್ತು.

Heavy Rain in Uttara Karnataka s Bidar Vijayapura Bagalakote amp amp Yadgir Districts

ಭಾನುವಾರ ಬಾಗಲಕೋಟೆ, ಬೀದರ್, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಿದ್ದು ಜನರಲ್ಲಿ ಆಶಾಭಾವನೆ ಮೂಡಿಸಿದೆ. ಇನ್ನು ಶನಿವಾರ ಧಾರವಾಡ ನಗರದಲ್ಲಿ ಮಳೆಯಾದರೆ, ಭಾನುವಾರ ಹುಬ್ಬಳ್ಳಿಯಲ್ಲಿ ಮಳೆಯ ದರ್ಶನವಾಗಿದೆ.

ಹಲವು ಜಿಲ್ಲೆಗಳಲ್ಲಿ ಮಳೆ

ಬೀದರ್ ಜಿಲ್ಲೆಯ ಬಸವಕಲ್ಯಾಣ ಸೇರಿದಂತೆ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಲಘು ಮಳೆಯಾಗಿದೆ. ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಯ ಹಲವು ಕಡೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ.

ಮಾರ್ಚ್ ಅಂತ್ಯದ ವೇಳೆಗೆ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಶನಿವಾರ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಈ ಬಾರಿ ರಾಜ್ಯದಲ್ಲಿ ವಾಡಿಕೆಯಂತೆ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಮಳೆ ಯಾವಾಗ?

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ದರ್ಶನವಾಗಿದೆ. ಆದರೆ ಕುಡಿಯುವ ನೀರಿಗೂ ಅಭಾವ ಎದುರಿಸುತ್ತಿರುವ ರಾಜಧಾನಿ ಬೆಂಗಳೂರಿಗೆ ಮಳೆ ಯಾವಾಗ ಎನ್ನುವ ಪ್ರಶ್ನೆ ಎದುರಾಗಿದೆ.

ಹವಾಮಾನ ತಜ್ಞರ ಪ್ರಕಾರ ಬೆಂಗಳೂರಿನಲ್ಲಿ ಕೂಡ ಶೀಘ್ರದಲ್ಲೇ ಮಳೆಯಾಗುವ ಲಕ್ಷಣಗಳಿದೆ. ಮಾರ್ಚ್ ತಿಂಗಳ ಕೊನೆಯ ದಿನಗಳಲ್ಲಿ ಅಥವಾ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಕೂಡ ಮಳೆಯಾಗುವ ಮುನ್ಸೂಚನೆ ಇದೆ.

ಬೆಂಗಳೂರು ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಏಪ್ರಿಲ್ ತಿಂಗಳ ಮೊದಲ ಎರಡು ವಾರಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ಮಾತ್ರವಲ್ಲದೆ ರಾಜ್ಯಾದ್ಯಂತ ಆದಷ್ಟು ಬೇಗ ಮಳೆ ಆರಂಭವಾದರೆ ಸಾಕು ಎನ್ನುವಂತಹ ಪರಿಸ್ಥಿತಿ ಇದೆ. ಆದಷ್ಟು ಬೇಗ ಮಳೆ ಬಂದು ವಾತಾವರಣ ಸ್ವಲ್ಪ ತಂಪಾದರೆ ಸಾಕು ಎಂದು ಜನ ಕಾಯುತ್ತಿದ್ದಾರೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿಗೂ ತೊಂದರೆಯಾಗಿದೆ. ಒಂದೆರಡು ಹದ ಮಳೆಯಾದರೆ ಸ್ವಲ್ಪ ದಿನ ನೆಮ್ಮದಿಯಾಗಿರಬಹುದು ಎನ್ನುತ್ತಿದ್ದಾರೆ ಜನ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+