Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ವರುಣಾರ್ಭಟ!

ರಾಜ್ಯದಲ್ಲಿ ತುಸು ಬಿಡುವು ನೀಡಿದ ವರುಣ ಮತ್ತೆ ಆರ್ಭಟಿಸಲಿದ್ದಾನೆ. ನಿನ್ನೆ (ಶನಿವಾರ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿದಿದ್ದು, ಇಂದು ಕೂಡ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆ ವರದಿಯಾಗಿದೆ. ಮುಂದುವರಿದಂತೆ ಭಾನುವಾರವೂ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ.

Heavy Rain Is Likely To Occur In Many Districts Of Karnataka Today

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ದಕ್ಷಿಣ ಒಳಭಾಗದಿಂದ ಮನ್ನಾರ್ ಕೊಲ್ಲಿಯವರೆಗೆ ತಮಿಳುನಾಡಿನ ಒಳಭಾಗದ ಮೂಲಕ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀನಲ್ಲಿ ಒಂದು ಟ್ರಫ್‌ ಸಂಭವಿಸಿರುವುದರಿಂದ ರಾಜ್ಯದ ಹಲವು ಪ್ರದೇಶದಲ್ಲಿ ಮಳೆ ಸುರಿಯಲಿದೆ ಎಂದು ವಿವರಿಸಿದೆ.

ಭಾನುವಾರದಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ರಾಮನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Heavy Rain Is Likely To Occur In Many Districts Of Karnataka Today

ಮುಖ್ಯವಾಗಿ ಇಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು. ಹಾಸನ, ಕೊಡಗು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಸೋಮವಾರದಂದು (ಸೆ.30) ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯ ಮುನ್ಸೂಚನೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ಸಹ ನೀಡಲಾಗಿದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ, ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಮಟ್ಟಿಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಾಗಾಗಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+