Rain alert: ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಧಾರಾಕಾರ ಮಳೆ!

ಹವಾಮಾನ ವೈಪರೀತ್ಯದ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಳೆ ಜೊತೆಗೆ ಚಳಿ ಕೂಡ ವಿಪರೀತವಾಗಲಿದ್ದು, ದಟ್ಟ ಮಂಜು ಸಹ ಆವರಿಸಿಕೊಳ್ಳಲಿದೆ ಎಂದು ಮಾಹಿತಿ ನೀಡಿದೆ.

ಇಲಾಖೆ ಮಾಹಿತಿ ಪ್ರಕಾರ ಒಂದು ಚಂಡಮಾರುತದ ಪರಿಚಲನೆಯು ಮನ್ನಾರ್ ಗಲ್ಫ್ ಮತ್ತು ನೆರೆಹೊರೆಯ ಮೇಲೆ ಇದೆ. ಇದು ಸರಾಸರಿ ಸಮುದ್ರ ಮಟ್ಟದಿಂದ 3.6 ಕಿ.ಮೀವರೆಗೆ ವಿಸ್ತರಿಸಲಿದೆ. ದಕ್ಷಿಣ ಆಂಧ್ರಪ್ರದೇಶದಿಂದ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ 3.1 ಮತ್ತು 5.8 ಕಿ.ಮೀ ಸರಾಸರಿ ಸಮುದ್ರ ಮಟ್ಟದಿಂದ ಮೇಲಿನ ವಾಯು ಚಂಡಮಾರುತದ ಪರಿಚಲನೆಯು ಕಡಿಮೆ ಗುರುತಿಸಲ್ಪಟ್ಟಿದೆ.

Heavy Rain Is Likely To Occur In Various Districts Of Karnataka For Three Days

ಇನ್ನು ಮನ್ನಾರ್ ಗಲ್ಫ್ ಮತ್ತು ನೆರೆಹೊರೆಯಲ್ಲಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆಯು ಕಡಿಮೆ ಗುರುತಿಸಲ್ಪಟ್ಟಿದೆ. ಇದರ ಪರಿಣಾಮ ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಕಂಡುಬರಲಿದೆ.

ಶುಕ್ರವಾರ (ನಿನ್ನೆ) ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ಚಾಮರಾಜನಗರ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ. ಹಾವೇರಿ, ಧಾರವಾಡ, ಬೆಳಗಾವಿ, ಬೀದರ್ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ.

ನವೆಂಬರ್‌ 2ರಂದು (ಇಂದು) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ, ಬೀದರ್, ಕಲಬುರ್ಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

Heavy Rain Is Likely To Occur In Various Districts Of Karnataka For Three Days

ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಕಂಡುಬರಲಿದೆ.

ನವೆಂಬರ್‌ 3ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಮೈಸೂರು, ಮಂಡ್ಯ, ಕೊಡಗು, ರಾಮನಗರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದೆ.

Heavy Rain Is Likely To Occur In Various Districts Of Karnataka For Three Days

ನವೆಂಬರ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಕಂಡುಬರಲಿದೆ. ಇನ್ನು ನವೆಂಬರ್‌ 5ರಿಂದ 7ರವರೆಗೆ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಕಂಡುಬರಲಿದೆ. ಕೆಲವೆಡೆ ಮಾತ್ರ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್‌ ಹಾಗೂ 21 ಡಿಗ್ರಿ ಸೆಲ್ಸಿಯಸ್‌ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+