Heavy Rain: Karnataka Floods ಮಳೆ: ವೀಕೆಂಡ್ ಸರ್ಕಾರಿ ನೌಕರರಿಗೆ ಶಾಕ್, ರಜೆ ಇಲ್ಲ!
ರಾಜ್ಯದಲ್ಲಿ ಇನ್ನು ಆರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅಕ್ಟೋಬರ್ 16ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಐಎಂಡಿ ವರದಿ ಹೇಳಿದೆ. ಇನ್ನು ಹಿಂಗಾರು ಚುರುಕಾಗಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ, 10 ಜಿಲ್ಲೆಗಳಲ್ಲಿ ಇದೀಗ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ನೌಕರರಿಗೆ ವಾರಾಂತ್ಯದ ರಜೆಯನ್ನು ಕ್ಯಾನ್ಸಲ್ ಮಾಡಲಾಗಿದೆ. ರಾಜ್ಯದ ಪ್ರಮುಖ ಹತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಸಹ ನೀಡಲಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವ ಜಿಲ್ಲೆಗಳಲ್ಲಿ ಧಾರವಾಡ ಜಿಲ್ಲೆಯೂ ಒಂದಾಗಿದ್ದು, ಈ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಜಿಲ್ಲೆಯಲ್ಲಿ ಸರ್ಕಾರಿ ನೌಕರರಿಗೆ ಅಲರ್ಟ್ ನೀಡಲಾಗಿದೆ. ವಾಯುಭಾರ ಕುಸಿತದಿಂದ ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಪ್ರವಾಹದ ಮುನ್ಸೂಚನೆ ಇದೆ. ಹೀಗಾಗಿ, ಈ ಜಿಲ್ಲೆಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ (ಜಿಲ್ಲೆಯಲ್ಲಿ ಕೆಲಸ ಮಾಡುವ ಸ್ಥಳದಿಂದ) ಬಿಡದಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಈ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ಆದೇಶ ಮಾಡಿದ್ದಾರೆ.
ಜಿಲ್ಲೆಯಲ್ಲಿ ನಾಲ್ಕು ದಿನ ಮಳೆ: ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸಾಮಾನ್ಯ ಮಳೆ 4.4 ಮೀ.ಮೀ. ಬದಲಾಗಿ 26.8 ಮೀ.ಮೀ ಮಳೆಯಾಗಿದೆ. ಅಣ್ಣಿಗೇರಿ ತಾಲ್ಲೂಕು ಹೊರತು ಪಡಿಸಿ ಉಳಿದ 7 ತಾಲ್ಲೂಕುಗಳಲ್ಲಿ ಸಾಮಾನ್ಯ ಮಳೆಗಿಂತ ಹೆಚ್ಚು ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ 4 ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅವರು ನಿರ್ದೇಶನ ಮಾಡಿದ್ದಾರೆ.

ಸರ್ಕಾರಿ ನೌಕರರಿಗೆ ರಜೆ ಇಲ್ಲ: ಧಾರವಾಡದಲ್ಲಿ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲಾಮಟ್ಟದ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಅವರ ಸಿಬ್ಬಂದಿಗಳಿಗೆ ರಜೆ ಕ್ಯಾನ್ಸಲ್ ಮಾಡಲಾಗಿದೆ. ಯಾರೂ ರಜೆಯ ಮೇಲೆ ಹೋಗಬಾರದು ಎಂದು ನಿರ್ದೇಶನ ನೀಡಲಾಗಿದೆ. ಅನಿವಾರ್ಯ ಪರಿಸ್ಥಿತಿಯಲ್ಲಿ ರಜೆಯ ಮೇಲೆ ಹೋಗಬೇಕಾದರೆ, ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದುಕೊಂಡೇ ರಜೆ ಹಾಕಬೇಕು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ, 2005ರ ಅನ್ವಯ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಧಾರವಾಡ ಸಹಾಯವಾಣಿ: 0836-2233840, ಧಾರವಾಡ ಉಪವಿಭಾಗಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ: 0836-2233860, ಅಣ್ಣಿಗೇರಿ ತಹಶೀಲ್ದಾರರ ಕಚೇರಿ ದೂರವಾಣಿ ಸಂಖ್ಯೆ: 8618405276, ಹುಬ್ಬಳ್ಳಿ ನಗರ ತಹಶೀಲ್ದಾರರ ಕಚೇರಿ ದೂರವಾಣಿ ಸಂಖ್ಯೆ:0836-2358035, ಅಳ್ನಾವರ ತಹಶೀಲ್ದಾರರ ಕಚೇರಿ ದೂರವಾಣಿ ಸಂಖ್ಯೆ: 0836-2385544, ನವಲಗುಂದ ತಹಶೀಲ್ದಾರರ ಕಚೇರಿ ದೂರವಾಣಿ ಸಂಖ್ಯೆ: 08380-229240, ಕುಂದಗೋಳ ತಹಶೀಲ್ದಾರರ ಕಚೇರಿ ದೂರವಾಣಿ ಸಂಖ್ಯೆ: 08304-290239, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರ ಕಚೇರಿ ದೂರವಾಣಿ ಸಂಖ್ಯೆ: 0836-2233844, ಧಾರವಾಡ ತಹಶೀಲ್ದಾರರ ಕಚೇರಿ ದೂರವಾಣಿ ಸಂಖ್ಯೆ: 0836-2233822, ಕಲಘಟಗಿ ತಹಶೀಲ್ದಾರರ ಕಚೇರಿ ದೂರವಾಣಿ ಸಂಖ್ಯೆ: 08370-284535 ಹಾಗೂ ಅವಳಿನಗರದ ಸಾರ್ವಜನಿಕರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ದೂರವಾಣಿ ಸಂಖ್ಯೆ: 0836-2213888 ಮತ್ತು 8277803778 ಗೆ ತುರ್ತು ಸಂದರ್ಭದಲ್ಲಿ ಸಂಪರ್ಕಿಸಬಹುದಾಗಿದೆ.












Click it and Unblock the Notifications