Heavy Rain: ರಾಜ್ಯದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ; ಮಾಹಿತಿ, ವಿವರ
ಕರ್ನಾಟಕದಲ್ಲಿ ವಸಂತ ಮಳೆ ಆರಂಭವಾಗಿದೆ. ಬೇಸಿಗೆ ಮಳೆಯಿಂದಾಗಿ ಜನರಲ್ಲಿ ಸಂತಸ ಮೂಡಿದೆ. ಏಪ್ರಿಲ್, ಜೂನ್ ತಿಂಗಳಿನಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕರ್ನಾಟಕ, ಕರಾವಳಿ ಭಾಗದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದರೂ ಮಳೆಯಾಗುವ ಸಾಧ್ಯತೆ ಇದೆ.
ಯುಗಾದಿ ಹಬ್ಬದ ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಏಪ್ರಿಲ್ ಮೊದಲನೇ ವಾರದಲ್ಲಿ ಹಲವು ಜಿಲ್ಲೆಗಳಲ್ಲಿ ಸಿಡಿಲು ಗುಡುಗಿನೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಟ್ಟಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ದಕ್ಷಿಣ ಒಳನಾಡಿಗ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆ ಆರಂಭವಾಗಿದ್ದು ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಾದರೆ ಹಳ್ಳ ಕೊಳ್ಳಗಳು ತುಂಬಿ ಹರಿಯಲಿದ್ದು ಜಲಾಶಯಗಳಿಗೂ ಒಳಹರಿವು ಆರಂಭವಾಗಬಹುದು.
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಡಿಸೆಂಬರ್ ಕೊನೆಯವರೆಗೂ ನೀರಿನ ಪ್ರಮಾಣ ಅಷ್ಟೇನೂ ಕಡಿಮೆಯಾಗಿರಲಿಲ್ಲ, ಬೇಸಿಗೆ ಆರಂಭವಾದ ಬಳಿಕ ನದಿಗಳಿಗೆ ನೀರು ಹರಿಸಿದ್ದು ನೀರಿನ ಮಟ್ಟ ಕಡಿಮೆಯಾಗುತ್ತಿದೆ. ರಾಜ್ಯದ ಜಲಾಶಯಗಳ ಒಟ್ಟು ಗರಿಷ್ಠ ಸಂಗ್ರಹ ಸಾಮರ್ಥ್ಯ 895.62 ಟಿಎಂಸಿ ಆಗಿದ್ದು ಏಪ್ರಿಲ್ 1ರಂದು 375.25 ಟಿಎಂಸಿ ನೀರು ಸಂಗ್ರಹದಲ್ಲಿದೆ.
ಪ್ರಮುಖ ಜಲಾಶಯಗಳ ನೀರಿನ ಮಟ್ಟ
ಲಿಂಗನಮಕ್ಕಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 554 ಮೀಟರ್/ 151.75 ಟಿಎಂಸಿ
ಇಂದಿನ ನೀರಿನ ಮಟ್ಟ: 543.48 ಮೀಟರ್ / 60.14 ಟಿಎಂಸಿ
ಒಳಹರಿವು: 265 ಕ್ಯೂಸೆಕ್ಸ್
ಹೊರಹರಿವು: 7133 ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 564 ಮೀಟರ್/ 145.33 ಟಿಎಂಸಿ
ಇಂದಿನ ನೀರಿನ ಮಟ್ಟ: 542.06 ಮೀಟರ್ / 67.56 ಟಿಎಂಸಿ
ಒಳಹರಿವು: 0
ಹೊರಹರಿವು: 7236 ಕ್ಯೂಸೆಕ್ಸ್
ವಾರಾಹಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 594.36 ಮೀಟರ್/ 31.10 ಟಿಎಂಸಿ
ಇಂದಿನ ನೀರಿನ ಮಟ್ಟ: 582.81 ಮೀಟರ್ / 12.99 ಟಿಎಂಸಿ
ಒಳಹರಿವು: 0
ಹೊರಹರಿವು: 759 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2859.00 ಅಡಿ / 8.50 ಟಿಎಂಸಿ
ಇಂದಿನ ನೀರಿನ ಮಟ್ಟ: 2834.07 ಅಡಿ / 3.55 ಟಿಎಂಸಿ
ಒಳಹರಿವು: 84 ಕ್ಯೂಸೆಕ್ಸ್
ಹೊರಹರಿವು: 100 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ನೀರಿನ ಮಟ್ಟ: 2922 ಅಡಿ / 37.10 ಟಿಎಂಸಿ
ಇಂದಿನ ನೀರಿನ ಮಟ್ಟ: 2900.08 ಅಡಿ / 19.74 ಟಿಎಂಸಿ
ಒಳಹರಿವು: 22 ಕ್ಯೂಸೆಕ್ಸ್
ಹೊರಹರಿವು: 330 ಕ್ಯೂಸೆಕ್ಸ್
ಕೆಆರ್ ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ: 124.80 ಅಡಿ / 49.45ಟಿಎಂಸಿ
ಇಂದಿನ ನೀರಿನ ಮಟ್ಟ: 104.33 ಅಡಿ / 26.40 ಟಿಎಂಸಿ
ಒಳಹರಿವು: 122 ಕ್ಯೂಸೆಕ್ಸ್
ಹೊರಹರಿವು: 793 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 2284 ಅಡಿ / 19.52 ಟಿಎಂಸಿ
ಇಂದಿನ ನೀರಿನ ಮಟ್ಟ: 2270.05 ಅಡಿ / 11.71 ಟಿಎಂಸಿ
ಒಳಹರಿವು: 49 ಕ್ಯೂಸೆಕ್ಸ್
ಹೊರಹರಿವು: 0
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2158 ಅಡಿ / 71.54 ಟಿಎಂಸಿ
ಇಂದಿನ ನೀರಿನ ಮಟ್ಟ: 2130.45 ಅಡಿ / 41.50 ಟಿಎಂಸಿ
ಒಳಹರಿವು: 44 ಕ್ಯೂಸೆಕ್ಸ್
ಹೊರಹರಿವು: 3771 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 1633 ಅಡಿ / 105.79 ಟಿಎಂಸಿ
ಇಂದಿನ ನೀರಿನ ಮಟ್ಟ: 1590 ಅಡಿ / 11.03 ಟಿಎಂಸಿ
ಒಳಹರಿವು: 0
ಹೊರಹರಿವು: 10,767 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2175 ಅಡಿ / 51.00 ಟಿಎಂಸಿ
ಇಂದಿನ ನೀರಿನ ಮಟ್ಟ: 2133.83 ಅಡಿ / 23.76 ಟಿಎಂಸಿ
ಒಳಹರಿವು: 0
ಹೊರಹರಿವು: 5168 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ : 2079.50 ಅಡಿ / 37.73 ಟಿಎಂಸಿ
ಇಂದಿನ ನೀರಿನ ಮಟ್ಟ: 2058.07 ಅಡಿ / 15.05 ಟಿಎಂಸಿ
ಒಳಹರಿವು: 0
ಹೊರಹರಿವು: 194 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ನೀರಿನ ಮಟ್ಟ : 519.60 ಮೀಟರ್ / 123.08 ಟಿಎಂಸಿ
ಇಂದಿನ ನೀರಿನ ಮಟ್ಟ: 510.59 ಮೀಟರ್ / 33.03 ಟಿಎಂಸಿ
ಒಳಹರಿವು: 0
ಹೊರಹರಿವು: 1204 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಗರಿಷ್ಠ ನೀರಿನ ಮಟ್ಟ : 492.25 ಮೀಟರ್ / 33.31 ಟಿಎಂಸಿ
ಇಂದಿನ ನೀರಿನ ಮಟ್ಟ: 489.03 ಮೀಟರ್ / 20.69 ಟಿಎಂಸಿ
ಒಳಹರಿವು: 0
ಹೊರಹರಿವು: 0
ವಾಣಿ ವಿಲಾಸ ಸಾಗರ
ಗರಿಷ್ಠ ನೀರಿನ ಮಟ್ಟ : 2140 ಅಡಿ / 30.42 ಟಿಎಂಸಿ
ಇಂದಿನ ನೀರಿನ ಮಟ್ಟ: 2137.25 ಅಡಿ / 28.11 ಟಿಎಂಸಿ
ಒಳಹರಿವು: 0 ಕ್ಯೂಸೆಕ್ಸ್
ಹೊರಹರಿವು: 145 ಕ್ಯೂಸೆಕ್ಸ್












Click it and Unblock the Notifications