ಮಳೆ.. ಮಳೆ.. ಶಾಲಾ ಕಾಲೇಜಿಗೆ ರಜೆ ಘೋಷಣೆ!
ಮಳೆ ಬರಬೇಕಿದೆ, ಮಳೆ ಬರದೇ ಇದ್ದರೆ ಪರಿಸ್ಥಿತಿ ಕಷ್ಟವಾಗಲಿದೆ. ಅದ್ರಲ್ಲೂ ಕರ್ನಾಟಕದ ಜನರಿಗೆ ಮಳೆ ಬರದೇ ಇದ್ದರೆ ಪರಿಸ್ಥಿತಿ ಕುತ್ತಿಗೆಗೆ ಬಂದು ಕೂರಲಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ದೊಡ್ಡ ದೊಡ್ಡ ನಗರಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಈಗ ಕಾಡತೊಡಗಿದೆ. ಹೀಗಾಗಿ ಜನರು ಮಳೆ ಮೋಡಗಳನ್ನು ಹುಡುಕುತ್ತಾ ಆಕಾಶ ನೋಡುವಾಗ ಮಳೆ ಬರುವ ಬಗ್ಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ!
ಹೌದು, ಮಳೆ ಬರದೇ ಇದ್ದರೆ ಕನ್ನಡಿಗರ ಪರಿಸ್ಥಿತಿ ವ್ಯತಿರಿಕ್ತ ಆಗಲಿದೆ. ಯಾಕಂದ್ರೆ ಇದೀಗ ಕರ್ನಾಟಕದ ಬಹುತೇಕ ನದಿ & ಕೆರೆ ಸೇರಿದಂತೆ ಜಲ ಮೂಲಗಳು ಬತ್ತಿ ಹೋಗಿವೆ. ಹೀಗಾಗಿ ಮಳೆ ಬರಲೇಬೇಕು ದೇವರೆ ಅಂತಾ ಕಾಯುತ್ತಿದ್ದಾರೆ ಕನ್ನಡಿಗರು. ಹೀಗಿದ್ದಾಗ ಭರ್ಜರಿಯಾದ ಸುದ್ದಿಯನ್ನ ಹವಾಮಾನ ಇಲಾಖೆ ಕೊಟ್ಟಿದೆ. ಈಗಾಗಲೇ ಕೊಡಗು, ಚಿಕ್ಕಮಗಳೂರು ಸೇರಿ ಶಿವಮೊಗ್ಗ, ದಾವಣಗೆರೆ, ಬೆಳಗಾವಿ ಜಿಲ್ಲೆಗಳಲ್ಲಿ ಒಂದೊಂದು ಭಾರಿ ಮಳೆ ಬಿದ್ದಿದೆ. ಈಗ, ಇಡೀ ಕರ್ನಾಟಕದಲ್ಲಿ ಮಳೆ ಅಬ್ಬರಿಸಲಿದೆ ಎನ್ನಲಾಗುತ್ತಿದೆ. ಇದೇ ವೇಳೆ ಈ ಪ್ರದೇಶಗಳಲ್ಲಿ ಭರ್ಜರಿ ಆಲಿಕಲ್ಲು ಸಹಿತ ಮಳೆ ಬೀಳುವ ಸಾಧ್ಯತೆ ಇದ್ದು, ಶಾಲಾ & ಕಾಲೇಜಿಗೆ ರಜೆಯನ್ನೇ ಘೋಷಿಸಲಾಗಿದೆ. ಹಾಗಾದ್ರೆ ಕರ್ನಾಟಕದಲ್ಲಿ ಮಳೆ ಯಾವಾಗ.? ಶಾಲಾ & ಕಾಲೇಜಿಗೆ ರಜೆ ಘೋಷಿಸಿರುವುದು ಎಲ್ಲಿ.? ಮುಂದೆ ಓದಿ.

ಬೆಂಗಳೂರಿನಲ್ಲಿ ಮಳೆಯೋ ಮಳೆ?
ಎಲ್ಲಿ ನೋಡಿದರು ನೀರಿಗೆ ಹಾಹಾಕಾರ ಶುರುವಾಗಿದೆ. ಒಂದು ಟ್ಯಾಂಕರ್ ನೀರು ಬೇಕು ಅಂದ್ರೆ 3000 ರೂಪಾಯಿಗೂ ಹೆಚ್ಚು ಹಣ ಕೊಡಬೇಕಿದೆ ಎಂಬ ಆರೋಪವೂ ಕೇಳಿಬಂದಿದೆ. ಪರಿಸ್ಥಿತಿ ಕೈಮೀರಿ ಹೋಗಿರುವ ಸಮಯದಲ್ಲೇ ಜನರು ಕೂಡ ಆಕ್ರೋಶ ಹೊರಹಾಕುತ್ತಿದ್ದು ಮಳೆರಾಯ ಬೇಗ ಬಾರಪ್ಪ ಅಂತಾ ಬೇಡಿಕೊಳ್ಳುತ್ತಿದ್ದರು. ಹೀಗಾಗಿ, ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಮಳೆರಾಯನ ಎಂಟ್ರಿ ಆಗುತ್ತಿದೆ.
ಮಳೆ.. ಮಳೆ.. ಭರ್ಜರಿ ಮಳೆ!
ನಾಳೆ ಕೊಡಗು, ಚಿಕ್ಕಮಗಳೂರು, ಮೈಸೂರು & ಮಂಡ್ಯ ಮತ್ತೆ ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ. ಏಪ್ರಿಲ್ 8ಕ್ಕೆ ದ. ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ ಸೇರಿದಂತೆ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ & ಮೈಸೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಯುಗಾದಿ ಹಬ್ಬದ ಬಳಿಕ ಅಂದ್ರೆ, ಏಪ್ರಿಲ್ 13 ಹಾಗೂ 14 ಕ್ಕೆ ಭರ್ಜರಿ ಮಳೆ ಬೀಳುವ ನಿರೀಕ್ಷೆ ಇದೆ ಎನ್ನಲಾಗಿದೆ. ಹಾಗಾದ್ರೆ ಶಾಲಾ & ಕಾಲೇಜಿಗೆ ರಜೆ ಘೋಷಿಸಿರುವುದು ಎಲ್ಲಿ.? ಬನ್ನಿ ತಿಳಿಯೋಣ.

ಭಾರಿ ಮಳೆ, ಶಾಲಾ & ಕಾಲೇಜಿಗೆ ರಜೆ!
ಮತ್ತೊಂದ್ಕಡೆ ಉತ್ತರ ಭಾರತದಲ್ಲಿ ಭರ್ಜರಿ ಮಳೆ ಮುಂದುವರಿದಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ ಗಢ, ವಿದರ್ಭ ಹಾಗೇ ಬಿಹಾರ ರಾಜ್ಯಗಳಲ್ಲಿ ಭರ್ಜರಿ ಮಳೆ ಶುರುವಾಗಲಿದೆ. ಏಪ್ರಿಲ್ 7 & 8ಕ್ಕೆ ಛತ್ತೀಸ್‌ಗಢದ ವಿವಿಧ ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 7ಕ್ಕೆ ಒಡಿಶಾದ ಕೆಲ ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 7 ರಿಂದ 9 ರವರೆಗೂ, ವಿವಿಧ ಸ್ಥಳಗಳಲ್ಲಿ ಆಲಿಕಲ್ಲು ಮಳೆ ಬೀಳುವ ಸಾಧ್ಯತೆ ಇರುವ ಕಾರಣ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೋಡ ಬಿತ್ತನೆ ಮಾಡುತ್ತಾ ಸರ್ಕಾರ?
ಈಗಿನ ಪರಿಸ್ಥಿತಿ ನೋಡುತ್ತಿದ್ದರೆ ಅಕಸ್ಮಾತ್ ಮಳೆಯ ಕೊರತೆ ಹೀಗೆಯೇ ಮುಂದುವರಿದಿದ್ದೇ ಆದರೆ, ಪರಿಸ್ಥಿತಿ ಕೈಮೀರಿ ಹೋಗಲಿದೆ. ಹೀಗಾಗಿ ರಾಜ್ಯ ಸರ್ಕಾರ ಮೋಡ ಬಿತ್ತನೆ ಮಾಡಿ, ಮಳೆ ಬರಿಸಲು ವ್ಯವಸ್ಥೆ ಮಾಡುತ್ತಾ? ಅನ್ನೋ ಕುತೂಹಲ ಕೂಡ ಕಾಡುತ್ತಿದೆ. ಕುತೂಹಲ ಮತ್ತು ಪ್ರಶ್ನೆಗಳಿಗೆ ಉತ್ತರ ಸಿಗಲು ಇನ್ನಷ್ಟು ದಿನ ಕಾದು ನೋಡಬೇಕಿದೆ. ಮತ್ತೊಂದು ಕಡೆ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಈ ಬಾರಿ ಕರ್ನಾಟಕದಲ್ಲಿ ಉತ್ತಮವಾಗಿ ಮುಂಗಾರು ಮಳೆ ಬೀಳಲಿದೆ ಎನ್ನಲಾಗಿದೆ. ಇದು ಕನ್ನಡಿಗರಿಗೆ ಒಂದಷ್ಟು ಹರ್ಷ ನೀಡಿದ್ದು, ಬೇಸಿಗೆ ಕಾಲದಲ್ಲಿ ಒಂದಷ್ಟು ಮಳೆ ಬಿದ್ದರೆ ಅದೇ ಲಾಟರಿ ಎಂಬಂತಾಗಿದೆ.
ಕನ್ನಡಿಗರ ಆಸೆಯನ್ನ ವರುಣ ದೇವ...
ಕರ್ನಾಟಕದಲ್ಲಿ ಮಳೆ ಇಲ್ಲದೆ ಭೀಕರ ಬರಗಾಲ ಎದುರಾದ ಕಾರಣಕ್ಕೆ ರಾಜ್ಯ ಸರ್ಕಾರಕ್ಕೂ ದೊಡ್ಡ ತಲೆನೋವು ಶುರುವಾಗಿದೆ. ಯಾಕಂದ್ರೆ ಪರಿಸ್ಥಿತಿ ಇದೇ ರೀತಿ ಮುಂದುವರಿದು, ಈ ಬರ ಇನ್ನೂ ಹಲವು ತಿಂಗಳು ಮುಂದುವರಿಯುತ್ತೆ ಎಂಬ ಭಯ ಆವರಿಸಿತ್ತು. ಈ ಕಾರಣಕ್ಕೆ ತಕ್ಷಣಕ್ಕೆ ಮಳೆ ಬರಬೇಕು ಅಂತಾ ಹೇಳಿದ್ದರು ತಜ್ಞರು. ಅದೇ ರೀತಿ ಈಗ ಮಳೆಯ ಆಗಮನ ಆಗಿದೆ. ಅದರಲ್ಲೂ ಕಾವೇರಿ ನದಿಯ ತವರು ಕೊಡಗು ಜಿಲ್ಲೆಯಲ್ಲಿ ಭರ್ಜರಿ ಮಳೆ ಬಂದು, ಭೂಮಿ ಕೆಸರಾಗಿದೆ. ಕಾವೇರಿ ತಾಯಿಯ ಒಡಲಿಗೂ ಭರ್ಜರಿ ನೀರು ಸೇರ್ಪಡೆಯಾಗಿದೆ. ಈ ರೀತಿ ಕರ್ನಾಟಕದ ವಿವಿಧ ಪ್ರದೇಶದಲ್ಲೂ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಮಳೆ ಬಂದ್ರೆ ಸಾಕಪ್ಪಾ ಅಂತಿದ್ದಾರೆ ಜನ. ಕನ್ನಡಿಗರ ಆಸೆಯನ್ನ ವರುಣ ದೇವ ಈಡೇರಿಸುತ್ತಾನಾ? ಅನ್ನೋದನ್ನ ಕಾದು ನೋಡಬೇಕಿದೆ.
ಕರ್ನಾಟಕದ ಪರಿಸ್ಥಿತಿ ಈಗ ಹೇಗಿದೆ?
ಮಳೆ ಬರಬೇಕಿದೆ, ಮಳೆ ಬರದೇ ಇದ್ದರೆ ಪರಿಸ್ಥಿತಿ ಕಷ್ಟವಾಗಲಿದೆ. ಅದರಲ್ಲೂ ಕರ್ನಾಟಕದ ಜನರಿಗೆ ಮಳೆ ಬರದೇ ಇದ್ದರೆ ಪರಿಸ್ಥಿತಿ ಕುತ್ತಿಗೆಗೆ ಬಂದು ಕೂರಲಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ದೊಡ್ಡ ದೊಡ್ಡ ನಗರಗಳಲ್ಲಿ ಕುಡಿವ ನೀರಿಗೆ ಸಮಸ್ಯೆ ಈಗ ಕಾಡತೊಡಗಿದೆ. ಮಳೆ ಬರದೇ ಇದ್ದರೆ ಕನ್ನಡಿಗರ ಪರಿಸ್ಥಿತಿ ವ್ಯತಿರಿಕ್ತ ಆಗಲಿದೆ. ಯಾಕಂದ್ರೆ ಇದೀಗ ಕರ್ನಾಟಕದ ಬಹುತೇಕ ನದಿ & ಕೆರೆ ಸೇರಿದಂತೆ ಜಲ ಮೂಲಗಳು ಬತ್ತಿ ಹೋಗಿವೆ. ಹೀಗಾಗಿ ಮಳೆ ಬರಲೇಬೇಕು ದೇವರೆ ಅಂತಾ ಕಾಯುತ್ತಿದ್ದಾರೆ ಕನ್ನಡಿಗರು. ಹೀಗಿದ್ದಾಗಲೇ, ಭರ್ಜರಿ ಸುದ್ದಿಯನ್ನ ಹವಾಮಾನ ಇಲಾಖೆ ಕೊಟ್ಟಿದೆ. ಕೊಡಗು, ಚಿಕ್ಕಮಗಳೂರು ಸೇರಿ ಶಿವಮೊಗ್ಗ, ದಾವಣಗೆರೆ, ಬೆಳಗಾವಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಬಿದ್ದಿದೆ. ಈಗ ಇಡೀ ಕರ್ನಾಟಕದಲ್ಲಿ ಮಳೆ ಅಬ್ಬರಿಸುತ್ತೆ ಎನ್ನಲಾಗುತ್ತಿದೆ.
ನೀರು ಬೇಕೆಂದು ತಮಿಳುನಾಡು ಕಿರಿಕ್!
ಒಂದ್ಕಡೆ ಕಳೆದ ವರ್ಷ, ಅಂದ್ರೆ 2023ರಲ್ಲಿ ಕರ್ನಾಟಕದಲ್ಲಿ ಸರಿಯಾಗಿ ಮಳೆಯೇ ಬಂದಿಲ್ಲ ಎಂಬ ಕೊರಗು ಕಾಡುತ್ತಿತ್ತು. ಈ ನಡುವೆಯು ತಮಿಳುನಾಡು ಬೇರೆ ನೀರಿಗಾಗಿ ಭಾರಿ ಕಿರಿ, ಕಿರಿ ಮಾಡಿತ್ತು. ಹೀಗಾಗಿ ಕರ್ನಾಟಕ ಕೂಡ ಸಾಕಷ್ಟು ಪ್ರಮಾಣದ ನೀರನ್ನು ತಮಿಳುನಾಡು ರಾಜ್ಯಕ್ಕೆ ಹರಿಸಿತ್ತು. ಇಷ್ಟೆಲ್ಲದರ ಪರಿಣಾಮ ಇದೀಗ ಬೆಂಗಳೂರಿಗೂ ಮುಂದಿನ ದಿನಗಳಲ್ಲಿ, ಕುಡಿಯುವ ನೀರಿಗೆ ಸಂಕಷ್ಟ ಎದುರಾಗುತ್ತಾ? ಎಂಬ ಪ್ರಶ್ನೆ ಕಾಡುತ್ತಿದೆ. ಆದ್ರೆ ಕರ್ನಾಟಕದ ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ 3 ತಿಂಗಳಿಗೆ ಆಗುವಷ್ಟು ನೀರು ಇದೆ ಎಂದು ಸರ್ಕಾರದಿಂದ ಮಾಹಿತಿ ಸಿಗುತ್ತಿದೆ. ಹೀಗಾಗಿ ಬೆಂಗಳೂರಿಗರು ಸೇರಿದಂತೆ ಹಳೇ ಮೈಸೂರು ಭಾಗದ ಜನರು ಇದರಿಂದ ಒಂದಷ್ಟು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ
ಕರ್ನಾಟಕದ ಕರಾವಳಿ ಜಿಲ್ಲೆ ಸೇರಿ ಬೆಂಗಳೂರು ನಗರ, ಬೆಂಗಳೂರು ಗ್ರಾಂ. ರಾಮನಗರ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು & ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಸಿಂಚನ ಖುಷಿ ಕೊಟ್ಟಿದೆ. ಹಾಗೇ ಇಂದು ಕೂಡ ಭರ್ಜರಿ ಮಳೆ ಬಿದ್ದಿದ್ದು, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಬೀಳುತ್ತೆ ಎಂಬ ಮುನ್ಸೂಚನೆ ನೀಡಲಾಗಿದೆ. ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಮಳೆ ಬೀಳಲಿದೆ ಎನ್ನಲಾಗಿದೆ. ಹೀಗಾಗಿ ಜನರು ಕೂಡ ಫುಲ್ ಖುಷ್ ಆಗಿದ್ದಾರೆ.












Click it and Unblock the Notifications