ಕಲಬುರಗಿ, ಬೀದರ್‌ನಲ್ಲಿ ಧಾರಾಕಾರ ಮಳೆ; ವ್ಯಕ್ತಿ ಸಾವು
ಬೀದರ್, ಸೆಪ್ಟೆಂಬರ್ 17 : ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ವ್ಯಕ್ತಿಯೊಬ್ಬ ಬೈಕ್ ಸಮೇತ ಕೊಚ್ಚಿ ಹೋಗಿದ್ದಾನೆ.
ಮೂರು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗಿದೆ. ಬೆಳೆದು ನಿಂತಿದ್ದ ಬೆಳೆಗಳಿಗೆ ಹಾನಿಯಾಗಿದ್ದು, ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. ಹಳ್ಳಗಳು ತುಂಬಿ ಹರಿಯುತ್ತಿದ್ದು, ಹಲವು ಗ್ರಾಮಗಳ ನಡುವಿನ ಸಂಪರ್ಕ ಕಡಿತವಾಗಿದೆ.
ಕಲಬುರಗಿ ನಗರ, ಚಿಂಚೋಳಿ, ಕಾಳಗಿ, ಚಿತ್ತಾಪುರ, ಜೇವರ್ಗಿ, ಕಮಲಾಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದೆ. ಕಾಗಿಣಾ ನದಿ ಉಕ್ಕಿ ಹರಿದಿದ್ದು, ಇಂಗಳಗಿ-ಶಹಬಾದ್ ರಸ್ತೆ ಸಂಪರ್ಕ ಕಡಿತವಾಗಿತ್ತು.
ಬೀದರ್ ಜಿಲ್ಲಾಧಿಕಾರಿಗ ರಾಮಚಂದ್ರನ್ ಬುಧವಾರ ಕಮಲನಗರ ತಾಲೂಕಿನಲ್ಲಿ ಸಂಚಾರ ನಡೆಸಿದರು. ಮಳೆಯಿಂದ ಹಾನಿಯಾದ ಖುದ್ದು ವೀಕ್ಷಣೆ ನಡೆಸಿದರು. ಬಿಸಿಎಂ ಹಾಸ್ಟೆಲ್‌ನಲ್ಲಿನ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದರು.

ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸಾಯಿಗಾಂವ ಹತ್ತಿರದ ಹಳ್ಳದ ಸೇತುವೆಯನ್ನು ದಾಟುವಾಗ ಬೋಳೆಗಾಂವ ಗ್ರಾಮದ ಮನೋಜ ಗುಂಡಾಜಿ (31) ಎಂಬುವವರು ಕೊಚ್ಚಿ ಹೋಗಿದ್ದಾರೆ. ಭಾಲ್ಕಿ, ಕಮಲನಗರ, ಔರಾದ್ ತಾಲೂಕಿನಲ್ಲಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ಜಿಲ್ಲಾಧಿಕಾರಿಗಳ ಭೇಟಿ
ಬೀದರ್ ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಬೇರೆ ಬೇರೆ ಪ್ರದೇಶಗಳಿಗೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಭೇಟಿ ನೀಡಿ ಹಾನಿಯ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದಾರೆ.

ಕರಾವಳಿಯಲ್ಲಿ ಸಾಧಾರಣ ಮಳೆ
ಶಿವಮೊಗ್ಗ, ದಾವಣಗೆರೆ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ಹೆಚ್ಚು ಮಳೆಯಾಗಿದೆ. ಮಲ್ಪೆ ಬಂದರಿನಿಂದ ಹೊರಟಿದ್ದ 'ಹನುಮತೀರ್ಥ' ಬೋಟ್ ಸೆಂಟ್ ಮೇರಿಸ್ ದ್ವೀಪದ ಬಳಿ ಮುಳುಗಿದೆ. ಬೋಟ್‌ನಲ್ಲಿದ್ದ 29 ಜನರನ್ನು ರಕ್ಷಣೆ ಮಾಡಲಾಗಿದೆ.
Recommended Video

ಅಗತ್ಯ ವ್ಯವಸ್ಥೆ ಮಾಡಲು ಸೂಚನೆ
ಬೀದರ್‌ನ ಕಮಲನಗರ ತಾಲೂಕಿನಲ್ಲಿ ಜಿಲ್ಲಾಧಿಕಾರಿಗಳು ಅತಿವೃಷ್ಠಿಯಿಂದಾದ ಹಾನಿಯನ್ನು ವೀಕ್ಷಣೆ ಮಾಡಿದರು. ಬಿಸಿಎಂ ಹಾಸ್ಟೆಲ್‌ನ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಪರಿಶೀಲಿಸಿದರು. ಕೇಂದ್ರದಲ್ಲಿರುವ ಜನರಿಗೆ ಸರಿಯಾದ ಊಟ ಮತ್ತು ಇತರ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.












Click it and Unblock the Notifications