ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 10 : ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಭಾರೀ ಮಳೆಯಾಗಿದೆ. ಕೆರೆ, ಹಳ್ಳಗಳು ಭರ್ತಿಯಾಗಿದೆ. ನದಿ ಪಾತ್ರದ ಜನರಿಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.

ವಿಜಯಪುರದ ತಾಳಿಕೋಟೆಯಲ್ಲಿ ಡೋಣಿ ನದಿಯಲ್ಲಿ ಬುಧವಾರ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಬೆಂಗಳೂರು ನಗರದಲ್ಲಿ ಸಂಜೆ 6 ಗಂಟೆಯಿಂದ 9 ಗಂಟೆ ತನಕ ಭಾರೀ ಮಳೆ ಸುರಿದಿದ್ದು, ತಗ್ಗು ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿತ್ತು.

ಕೊಡಗು ಜಿಲ್ಲೆಯ ತಾಲೂಕು, ಹೋಬಳಿವಾರು ಮಳೆ ವಿವರ ಕೊಡಗು ಜಿಲ್ಲೆಯ ತಾಲೂಕು, ಹೋಬಳಿವಾರು ಮಳೆ ವಿವರ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಶ್ರೀಜನ್ಯ (6) ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಶಿವಮೊಗ್ಗ ನಗರದಲ್ಲಿ ಸಂಜೆ ಧಾರಾಕಾರ ಮಳೆಯಾಗಿದೆ.

ರಾಜ್ಯದ ಮಳೆ ಮನ್ಸೂಚನೆ, ಜಲಾಶಯಗಳ ನೀರಿನ ಮಟ್ಟ ರಾಜ್ಯದ ಮಳೆ ಮನ್ಸೂಚನೆ, ಜಲಾಶಯಗಳ ನೀರಿನ ಮಟ್ಟ

ಬಾಗಲಕೋಟೆಯ ರಬಕವಿಯಲ್ಲಿ ಒಂದು ಗಂಟೆ ಮಳೆಯಾಗಿದೆ. ಇದರಿಂದಾಗಿ ಅನೇಕ ಮನೆಗಳಿಗೆ ನೀರು ನುಗ್ಗಿತ್ತು. ಭದ್ರಾ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದೆ. ಜಲಾಶಯ ಭರ್ತಿಯಾಗಲು ಕೇವಲ 2 ಅಡಿ ಮಾತ್ರ ಬಾಕಿ ಇದೆ.

 ಮಳೆ ಕೊರತೆ ಜೊತೆ ಅಂತರ್ಜಲ ಸಮಸ್ಯೆ; ಬೆಳೆಗೆ ಟ್ಯಾಂಕರ್ ನೀರು ಹಾಯಿಸಿದ ರೈತ ಮಳೆ ಕೊರತೆ ಜೊತೆ ಅಂತರ್ಜಲ ಸಮಸ್ಯೆ; ಬೆಳೆಗೆ ಟ್ಯಾಂಕರ್ ನೀರು ಹಾಯಿಸಿದ ರೈತ

ಕೆರೆ, ಚೆಕ್ ಡ್ಯಾಂ ಭರ್ತಿ

ಕೆರೆ, ಚೆಕ್ ಡ್ಯಾಂ ಭರ್ತಿ

ತುಮಕೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಕೆರೆ, ಚೆಕ್ ಡ್ಯಾಂ ತುಂಬಿದೆ. ಕೊರಟಗೆರೆ ಪಟ್ಟಣದ ಹೊರವಲಯದಲ್ಲಿ ಸುವರ್ಣಮುಖಿ ನದಿ ಮೈದುಂಬಿ ಹರಿಯುತ್ತಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಮಳೆಯಾಗಿದೆ.

ಕರಾವಳಿಯಲ್ಲಿ ರೆಡ್ ಅಲರ್ಟ್

ಕರಾವಳಿಯಲ್ಲಿ ರೆಡ್ ಅಲರ್ಟ್

"ಕರ್ನಾಟಕದ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೆ.11ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆ. 14ರ ತನಕ ರಾಜ್ಯದಲ್ಲಿ ಮಳೆಯಾಗಲಿದೆ" ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ. ಎಸ್. ಪಾಟೀಲ್ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ 2.6 ಮೀಟರ್ ಎತ್ತರದ ಅಲೆಗಳು ಏಳುತ್ತಿವೆ.

ಆರೆಂಜ್ ಅಲರ್ಟ್

ಆರೆಂಜ್ ಅಲರ್ಟ್

ಗುರುವಾರ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ, ತುಮಕೂರು ಜಿಲ್ಲೆಯಲ್ಲಿ ಎರಡು ದಿನ ಮಳೆ ಮುಂದುವರೆಯಲಿದೆ.

ಗರಿಷ್ಠ 15 ಸೆಂ. ಮೀ. ಮಳೆ

ಗರಿಷ್ಠ 15 ಸೆಂ. ಮೀ. ಮಳೆ

ಬೆಂಗಳೂರು ಹೊರವಲಯದಲ್ಲಿ ಬುಧವಾರ 15 ಸೆಂ. ಮೀ. ಮಳೆಯಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 10. ದಾವಣಗೆರೆಯಲ್ಲಿ 8. ಚಿಕ್ಕೋಡಿ, ನಿಪ್ಪಾಣಿ, ಬಂಗಾರಪೇಟೆಯಲ್ಲಿ 7 ಸೆಂ. ಮೀ. ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿತ್ತು.

Recommended Video

ಚಿತ್ರೋದ್ಯಮ ಬಂದ್ ? ಇವರಿಗೆಲ್ಲ ತುಂಬಾ loss! | Shivarajkumar | Filmibeat Kannada
ಕೊಡಗಿನಲ್ಲಿ ಮಳೆ

ಕೊಡಗಿನಲ್ಲಿ ಮಳೆ

9/9/2020 ರಿಂದ 13/9/2020ರ ತನಕ ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ. 115.6 ಮಿ. ಮೀ. ನಿಂದ 204.4 ಮಿ. ಮೀ. ತನಕ ಮಳೆ ಸುರಿಯುವ ಸಾಧ್ಯತೆ ಇದೆ.

English summary
Heavy rain lashed various districts of Karnataka on September 9, 2020. The India Meteorological Department (IMD) has issued rain alert till September 11.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X