Karnataka Rain: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ... ರೆಡ್ & ಆರೆಂಜ್ ಅಲರ್ಟ್!
Karnataka Rain: ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ಮುಗುಳು ನಗೆ ಮೂಡಿಸಿದೆ. ಇಂದು ಸಹ ಬಾನದಾರಿಯಲ್ಲಿ ಮೋಡಗಳ ಸಂಚನ ಜೋರಾಗಿಯೇ ಇದೆ. ಈ ಬಾರಿ ಮುಂಗಾರು ಮಳೆ ರೈತರಲ್ಲಿ ಉಲ್ಲಾಸ ಉತ್ಸಾಹ ಮೂಡಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿತ್ತು. ಇಂದು ಸಹ ಮುಂಜಾನೆಯಿಂದಲೇ ರಾಜ್ಯದ ವಿವಿಧ ಭಾಗದಲ್ಲಿ ಮೋಡ ಕವಿದ ವಾತಾವರಣ ಇದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದು ಸಹ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ವಾರವೆಲ್ಲವೂ ಅಬ್ಬರಿಸಿದ್ದ ಮಳೆ ಈ ವಾರ ಚಮಕ್ ಕೊಟ್ಟಿದೆ. ಈ ವಾರ ಮುಂಗಾರು ಮಳೆ ದುರ್ಬಲವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಇಂದು ಕೊಡಗು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವುದರಿಂದ ರೆಡ್ ಮತ್ತು ಆರೆಂಜ್ ಅಲರ್ಟ್ ಸಹ ನೀಡಲಾಗಿದೆ. ಈ ಬಾರಿ ಮುಂಗಾರು ಮತ್ತು ಪೂರ್ವ ಮುಂಗಾರು ಮಳೆ ರೈತರು ಹಾಗೂ ನಾಡಿನ ಜನರನ್ನು ಖುಷಿ.. ಖುಷಿಯಾಗಿ ಇರುವಂತೆ ಮಾಡಿದೆ. ಪೂರ್ವ ಮುಂಗಾರಿನಲ್ಲೂ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು. ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ಒಳನಾಡಿನಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕದಾದ್ಯಂತ ಸಾಧಾರಣ ಮಳೆ ಆಗಿದೆ. ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಕರ್ನಾಟಕದ ಒಳನಾಡಿನ ಹಲವೆಡೆ ಮಳೆಯಾಗಿದೆ.

ಗುರುವಾರ (ಜೂನ್ 26)ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ.
ರೆಡ್ ಮತ್ತು ಆರೆಂಜ್ ಅಲರ್ಟ್: ಭಾರೀ ಮಳೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಹಾಸನ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಈ ಭಾಗದಲ್ಲಿ ಬೊಂಬಾಟ್ ಮಳೆ!
ಇನ್ನು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಸಖತ್ ಮಳೆ ಮುಂದುವರಿದಿದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಗದಗ, ಕೊಪ್ಪಳ, ಬೀದರ್, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು ಹಾಗೂ ಯಾದಗಿರಿಯಲ್ಲಿ ಮಳೆ ಮುಂದುವರಿದಿದೆ. ಇನ್ನು ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಧಾರಾಕಾರ ಮಳೆ ಆಗಲಿದೆ. ಕೊಡಗು, ವಿಜಯನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಹಾಸನ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಬೆಂಗಳೂರಿನಲ್ಲಿ ಕೂಲ್..
ಬೆಂಗಳೂರಿನಲ್ಲಿ ತಂಪಾದ ವಾತಾವರಣ ಇದೆ. ಮೋಡ ಕವಿದ ವಾತಾವರಣ ಇರಲಿದ್ದು. ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಇರಲಿದೆ. ಗರಿಷ್ಠ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.












Click it and Unblock the Notifications