Karnataka Rain Alert: ಮುಂದಿನ 4 ದಿನ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ

ಬೆಂಗಳೂರು, ಏಪ್ರಿಲ್‌ 25: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮೊದಲ ಮಳೆಯಾಗಿದ್ದು, ಕೆಲವು ಭಾಗಗಳಲ್ಲಿ ಪ್ರತಿ ದಿನವು ಮಳೆಯಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿಯೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಈಗಾಗಲೇ ಸಂಕೇಶ್ವರ, ನಾಪೊಕ್ಲು ಸೇರಿದಂತೆ ಹಲವೆಡೆ ಮಳೆಯಾಗಿದೆ.

Heavy Rain Likely Happen In More Than 18 Districts Of Karnataka For The Next 4 Days

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು ಹಾಗೂ ತುಮಕೂರಿನಲ್ಲಿ ಉಷ್ಣಗಾಳಿ ಬೀಸಲಿದೆ. ಹಾಗೂ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ. ಇನ್ನು ಕಲಬುರಗಿ ಜಿಲ್ಲೆಯಲ್ಲಿ 41.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಪ್ರತಿ ವರ್ಷವೂ ಯುಗಾದಿ ನಂತರ ಮುಂಗಾರು ಆರಂಭವಾಗುತ್ತದೆ. ಆದರೆ ಈ ಬಾರಿ ರಾಜ್ಯದಲ್ಲಿ ಬರ ಆವರಿಸಿದ್ದು, ಈ ವರ್ಷ ಮೊದಲ ಮಳೆಗಾಗಿ ಮೇ ಅಂತ್ಯದವರೆಗೂ ಕಾಯಬೇಕಾಯಿತು. ರಾಜ್ಯದ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಜೋರಾಗಿದ್ದು, ಜನ ನೀರಿಲ್ಲದೇ, ಬಿಸಿಲಿನ ಝಳಕ್ಕೆ ಹಾಗೂ ಧಗೆಗೆ ಹೈರಾಣಾಗಿ ಹೋಗಿದ್ದರು. ಸದ್ಯ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮೊದಲ ಮಳೆಯಾಗಿದ್ದು, ಮಳೆಯಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+