Rain alert: ವಾಯುಭಾರ ಕುಸಿತ, ಇಂದಿನಿಂದ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ?

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಮುಂದಿನ ಮೂರು ದಿನಗಳ ಕಾಲ ಪಕ್ಕದ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದ ಎಂದು ಹೇಳಿದೆ.

ಡಿಸೆಂಬರ್‌ 20ರಂದು (ಇಂದು) ಆಂಧ್ರಪ್ರದೇಶದ ಉತ್ತರ ಮತ್ತು ದಕ್ಷಿಣ ಕರಾವಳಿ, ರಾಯಲಸೀಮೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಬಹುದು.

Heavy Rain Likely In Andhra Pradesh And Karnataka Due To Low Pressure In The Bay Of Bengal

ಇಂದು ನೈರುತ್ಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವನ್ನು ಗುರುತಿಸಲಾಗಿದ್ದು, ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ವಿಸ್ತರಿಸಿರುವ ಸಂಬಂಧಿತ ಮೇಲ್ಭಾಗದ ಸೈಕ್ಲೋನಿಕ್ ಪರಿಚಲನೆಯು ಮುಂದುವರಿಯಲಿದೆ. ಹಾಗಾಗಿ ಮುಂದಿನ 24 ಗಂಟೆಗಳಲ್ಲಿ ಈ ಇದು ವಾಯುವ್ಯ ದಿಕ್ಕಿನಲ್ಲಿ ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ. ಬಳಿಕ ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶದ ಕರಾವಳಿಯಲ್ಲಿ ಉತ್ತರದ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಇಲಾಖೆ ವಿವರಿಸಿದೆ.

ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆ ಇದೆ. ಇಂದು ಮತ್ತ ನಾಳೆ ಕರ್ನಾಟಕದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಡಿಸೆಂಬರ್‌ 22ರಿಂದ ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

Heavy Rain Likely In Andhra Pradesh And Karnataka Due To Low Pressure In The Bay Of Bengal

ಡಿಸೆಂಬರ್‌ 23ರಂದು ಉಡುಪಿ, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಡಿಸೆಂಬರ್‌ 24ರಂದು ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಮತ್ತು ಮೈಸೂರು, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

Heavy Rain Likely In Andhra Pradesh And Karnataka Due To Low Pressure In The Bay Of Bengal

ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ. ನಂತರ ಕನಿಷ್ಠ ತಾಪಮಾನದಲ್ಲಿ ಮತ್ತೆ ಇಳಿಕೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ಹೇಳಿದೆ.

ಬೆಂಗಳೂರು ಸೇರಿದಂತೆ ಸುತ್ತಮತ್ತಲಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಆವರಿಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಡಿಗ್ರಿ ಸೆಲ್ಸಿಯಸ್‌ ಹಾಗೂ 19 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+