Karnataka Rain: ಮೇ 19ರವರೆಗೆ ಭಾರೀ ಮಳೆ ಸೂಚನೆ, ಯಾವೆಲ್ಲ ಜಿಲ್ಲೆಗಳಲ್ಲಿ?
ರಾಜ್ಯದಲ್ಲಿ ಮಳೆ ಮುಂದುವರಿದಿದೆ. ಈ ಬಾರಿ ಅವಧಿಗೂ ಮುನ್ನವೇ ದೇಶದಲ್ಲಿ ಮುಂಗಾರು ಪ್ರವೇಶವಾಗುತ್ತಿರುವ ಹಿನ್ನೆಲೆ ಜೂನ್‌ಗಿಂತ ಮೊದಲೇ ಮೇ ತಿಂಗಳಿನಲ್ಲೇ ಮಳೆ ಸುರಿಯುತ್ತಿದೆ. ರಾಜ್ಯದಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದ್ದು, ಮೇ 19ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 12ರಿಂದ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಇನ್ನುಳಿದ ದಿನಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಕರ್ನಾಟಕದ ಉತ್ತರ ಒಳನಾಡಿನಿಂದ ಮನ್ನಾರ್ ಕೊಲ್ಲಿಯವರೆಗಿನ ಉತ್ತರ-ದಕ್ಷಿಣ ವಾಯುಭಾರ ಕುಸಿತವು ಈಗ ಮರಾಠವಾಡದಿಂದ ಮನ್ನಾರ್ ಕೊಲ್ಲಿಯವರೆಗೆ ಕರ್ನಾಟಕದ ಒಳನಾಡಿನಾದ್ಯಂತ ಮತ್ತು ತಮಿಳುನಾಡಿನಾದ್ಯಂತ ಸಾಗುತ್ತದೆ ಮತ್ತು ಸಮುದ್ರ ಮಟ್ಟದಿಂದ 1.5 ಕಿ.ಮೀ.ವರೆಗೆ ವಿಸ್ತರಿಸಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಇಳಿಕೆಯ ಪ್ರವೃತ್ತಿಯೊಂದಿಗೆ ಯಾವುದೆ ದೊಡ್ಡ ಬದಲಾವಣೆಗಳಿಲ್ಲ.

ಮೇ 11ರಂದು ದಕ್ಷಿಣದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ಹಲವೆಡೆ ಮಳೆ ಮುಂದುವರಿಯಲಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಸೂಚನೆ ಇದೆ.
ಬೆಂಗಳೂರು ನಗರ ಭಾಗದಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದ್ದು, ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗಬಹುದು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ ಸುಮಾರು 33 ಡಿಗ್ರಿ ಸೆಲ್ಸಿಯಸ್ ಹಾಗೂ 22 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಬೀದರ್ ಅತಿ ಹೆಚ್ಚು 39.0 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿದೆ. ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನವು 34ರಿಂದ 37 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯಪುರ ಮತ್ತು ಕೊಪ್ಪಳದಲ್ಲಿ 35 ಡಿಗ್ರಿ ಸೆಲ್ಸಿಯಸ್, ಕಲಬುರಗಿ ಮತ್ತು ರಾಯಚೂರು ಉತ್ತರ ಆಂತರಿಕ ಕರ್ನಾಟಕ ಆಗುಂಬೆ, ಚಿಕ್ಕಮಗಳೂರು, ಮಡಿಕೇರಿಯಲ್ಲಿ 30-32 ಡಿಗ್ರಿ ಸೆಲ್ಸಿಯಸ್, ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಚಿಂತಾಮಣಿ, ಮಂಡ್ಯ, ಮೈಸೂರು ಭಾಗಗಳಲ್ಲಿ 33-35 ಡಿಗ್ರಿವರೆಗೆ ತಾಪಮಾನ ಇದೆ. ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಕಂಡುಬಂದಿಲ್ಲ.












Click it and Unblock the Notifications