Karnataka Rain: ಕರ್ನಾಟಕಕ್ಕೆ ಅಂತೂ ಬಂತು ಮುಂಗಾರು: ಇಂದಿನಿಂದ ಜೂನ್ 15ರವರೆಗೂ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ
ಬೆಂಗಳೂರು, ಜೂನ್ 11: ರಾಜ್ಯಕ್ಕೆ ಶನಿವಾರ ಮುಂಗಾರು ಪ್ರವೇಶವಾಗಿದ್ದು, ಇಂದಿನಿಂದ ಜೂನ್ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನೂ ಕೊಲ್ಲೂರು, ಕಾರ್ಕಳ, ಮಂಗಳೂರು, ಕೋಟ, ಶಿರಾಲಿ, ಉಡುಪಿ, ಅಂಕೋಲಾ, ಚಿಂಚೋಳಿ, ಕೊಟ್ಟಿಗೆಹಾರ, ಕುಂದಾಪುರ, ಬೇಲಿಕೇರಿ, ಕುಕನೂರು, ರೋಣ, ಗೋಕರ್ಣ, ಮುಧೋಳ, ಚಿಕ್ಕನಹಳ್ಳಿ, ಯುಗಟಿಯಲ್ಲಿ ಮಳೆಯಾಗಿದೆ.
ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ.
ಇನ್ನೂ ಕಳೆದ ಕೆಲ ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿತ್ತು. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲಕ್ಷದೀಪ ಸಮೂಹಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕರ್ನಾಟಕದ ಉತ್ತರ ಒಳನಾಡು, ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಣಿಪುರ, ಮಿಜೋರಾಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ರಾಜಸ್ಥಾನ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಇನ್ನೂ ಮುಂದಿನ ಎರಡು ದಿನದಲ್ಲಿ ರಾಜ್ಯದ ಇನ್ನಷ್ಟು ಪ್ರದೇಶಗಳಿಗೆ ಮಳೆ ವ್ಯಾಪಿಸಲಿದೆ. ಗುರುವಾರ ಅಧಿಕೃತವಾಗಿ ಕೇರಳಕ್ಕೆ ಆಗಮಿಸಿದ ಮುಂಗಾರು ಎರಡು ದಿನದ ಬಳಿಕ ಕರ್ನಾಟಕದ ಗಡಿ ಪ್ರವೇಶ ಮಾಡಿದೆ. ಈಗಾಗಲೇ ಮಡಿಕೇರಿ ಹಾಗೂ ಕಾರವಾರದವರೆಗೆ ವ್ಯಾಪಿಸಿರುವ ಮುಂಗಾರು ಮಳೆ ಇನ್ನೆರಡು ದಿನದಲ್ಲಿ ರಾಜ್ಯದ ಹಲವು ಪ್ರದೇಶಗಳಿಗೆ ಕಾಲಿಡಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಪ್ರವೇಶವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಐದು ದಿನ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.ಮುಂದಿನ ಎರಡು ದಿನ ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಪ್ರದೇಶದಲ್ಲಿ ಮಳೆಯಾಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಮೂರು ದಿನ 'ಎಲ್ಲೋ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.












Click it and Unblock the Notifications