ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 26: ರಾಜ್ಯದ ಹಲವೆಡೆ ಮತ್ತೆ ವರುಣನ ಆರ್ಭಟ ಶುರುವಾಗಿದೆ.

ಕರ್ನಾಟಕದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ಬೀದರ್, ವಿಜಯಪುರ ಹಾಗೂ ರಾಯಚೂರಿನಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ.
ಉತ್ತರ ಕರ್ನಾಟಕದ ಭಾಗಗಳಲ್ಲೂ ಮಳೆ ಜೋರಾಗಿದೆ.

ಯಾದಗಿರಿ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆ ಅಬ್ಬರಕ್ಕೆ ರಸ್ತೆ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಮಳೆ ಅರ್ಭಟಕ್ಕೆ ಜನರು ತಲ್ಲಣಗೊಂಡಿದ್ದಾರೆ.

ವಿಜಯಪುರ ಜಿಲ್ಲೆಯಾದ್ಯಂತ ಕೂಡ ಮತ್ತೆ ಮಳೆ ಆರ್ಭಟ ಶುರುವಾಗಿದೆ. ನಿನ್ನೆ ಸಂಜೆ 7 ಗಂಟೆಗೆ ಶುರುವಾದ ಮಳೆ ಬಿಟ್ಟುಬಿಡದೆ ಈಗಲೂ ಮುಂದುವರಿದಿದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಯಚೂರಿನಲ್ಲಿ ಕೂಡ ಮತ್ತೆ ವರುಣನ ಆರ್ಭಟ ಶುರುವಾಗಿದ್ದು, ಮಧ್ಯರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ರಸ್ತೆಗಳಲ್ಲೆಲ್ಲಾ ನೀರು ತುಂಬಿ ಹರಿಯುತ್ತಿದೆ. ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

ನಗನೂರು, ಖಾನಾಪುರ ಗ್ರಾಮಕ್ಕೆ ನೀರು

ನಗನೂರು, ಖಾನಾಪುರ ಗ್ರಾಮಕ್ಕೆ ನೀರು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ, ಖಾನಾಪುರ ಎಸ್ ಗ್ರಾಮದೊಳಗೆ ನೀರು ನುಗ್ಗಿದೆ. 30 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ತಡರಾತ್ರಿಯಿಂದ ನಿದ್ದೆ ಮಾಡದೆ ಜನರು ಆತಂಕಕ್ಕೊಳಗಾಗಿದ್ದಾರೆ. ನಗನೂರ ಗ್ರಾಮದ ರಸ್ತೆ ಜಲಾವೃತಗೊಂಡಿದೆ. ನಗನೂರ ಗ್ರಾಮದಲ್ಲಿ 20ಕ್ಕೂ ಹೆಚ್ಚು ಮನೆಗಳು, ಖಾನಾಪುರ ಎಸ್ ಎಚ್ ಗ್ರಾಮದಲ್ಲಿ 10 ಮನೆಗಳಿಗೆ ನೀರು ನುಗ್ಗಿದೆ. ನೀರು ಖಾಲಿ ಮಾಡಲು ಜನ ಪರದಾಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲೂ ಮಳೆ

ಕರಾವಳಿ ಜಿಲ್ಲೆಗಳಲ್ಲೂ ಮಳೆ

ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಶಿವಮೊಗ್ಗ, ಮೈಸೂರು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು.

ಎಲ್ಲೆಲ್ಲಿ ಎಷ್ಟು ಮಳೆ?

ಎಲ್ಲೆಲ್ಲಿ ಎಷ್ಟು ಮಳೆ?

ಕಾರವಾರದಲ್ಲಿ ಗರಿಷ್ಠ 11 ಸೆಂ.ಮೀ ಮಳೆಯಾಗಿದೆ. ಭಟ್ಕಳ 4, ಕೊಲ್ಲೂರು 3, ಅಂಕೋಲಾ,ಬೀದರ್, ಆಗುಂಬೆ 2, ಧರ್ಮಸ್ಥಳ, ಪುತ್ತೂರು, ಕಾರ್ಕಳ, ಉಡುಪಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

Recommended Video

ಇದೆ ಕಾರಣಕ್ಕೆ ವಿಶ್ವಸಂಸ್ಥೆಯಲ್ಲಿ ಇಮ್ರಾನ್ ಖಾನ್ ಗೆ ಮುಜುಗರ ಆಗಿದು | Oneindia Kannada
ಬೀದರ್‌ನಲ್ಲಿ ತಡರಾತ್ರಿಯಿಂದ ಸತತ ಮಳೆ

ಬೀದರ್‌ನಲ್ಲಿ ತಡರಾತ್ರಿಯಿಂದ ಸತತ ಮಳೆ

ಬೀದರ್‍ನಲ್ಲಿ ತಡರಾತ್ರಿಯಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ರಾತ್ರಿಯಿಡೀ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ತಡರಾತ್ರಿ ಸುರಿದ ಮಳೆಗೆ ನಗರದ ಕೆಲವಡೆ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಪ್ರಾರಂಭ ಮಾಡಿದ್ದಾನೆ.

English summary
Heavy rainfall is predicted during the next 48 hours at most places over coastal Karnataka and south interior Karnataka and at a few places over the north interior of the state, the India Meteorological Department said today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X